ಕನ್ನಡ ಚಿತ್ರರಂಗದಿAದ ಭಾವಪೂರ್ಣ ‘ಪುನೀತ ನಮನ’
ಮೈಸೂರು

ಕನ್ನಡ ಚಿತ್ರರಂಗದಿAದ ಭಾವಪೂರ್ಣ ‘ಪುನೀತ ನಮನ’

November 17, 2021

ದಕ್ಷಿಣ ಭಾರತ ಚಿತ್ರರಂಗದ ಸಾವಿರಾರು ಮಂದಿ ಭಾಗಿ
ಪುನೀತ್ ರಾಜ್‌ಕುಮಾರ್ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಪುನೀತ್ ಹೆಸರಲ್ಲೇ ನಡೆದ `ಪುನೀತ ನಮನ’ ಕಾರ್ಯಕ್ರಮದಲ್ಲಿ ದೊಡ್ಮನೆಯ ಎಲ್ಲರೂ ಭಾಗವಹಿಸಿದ್ದು, ಕಣ ್ಣÃರಲ್ಲಿ ಮುಳುಗಿದ್ದಾರೆ. ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಹಾಗೂ ಅವರ ಕುಟುಂಬದವರು, ಪುನೀತ್ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. ೨೦ ದಿನ ಕಳೆದರೂ ಅವರ ಕಣ ್ಣÃರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ ್ಣÃರು ಹಾಕುತ್ತಲೇ ಇದ್ದರು.

ಬೆಂಗಳೂರು, ನ. ೧೬- ನಾಡನ್ನು ಅಗಲಿದ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಇಂದು ನುಡಿ ಮತ್ತು ಸಂಗೀತ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರಾಜ್ಯ ಚಲನಚಿತ್ರ ವಾಣ ಜ್ಯ ಮಂಡಳಿ ಬೆಂಗಳೂರು ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಸೇರಿದಂತೆ ಸಚಿವ ಸಂಪುಟದ ಸಹೋದ್ಯೋಗಿಗಳು, ದಕ್ಷಿಣ ಭಾರತ ಚಲನಚಿತ್ರ ನಟ-ನಟಿಯರು ಭಾಗವಹಿಸಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ ಕಾರಣ ಗಳು, ಚಲನಚಿತ್ರ ನಟರು ನುಡಿನಮನ ಸಲ್ಲಿಸಿದರೆ, ಗುರುಕಿರಣ್ ಸಂಗೀತ ನಿರ್ದೇಶನದಲ್ಲಿ ಹಿನ್ನೆಲೆ ಗಾಯಕರು ಸಂಗೀತ ನಮನ ಸಲ್ಲಿಸಿ ಅಗಲಿದ ‘ಅಪ್ಪು’ವಿನ ಆತ್ಮಕ್ಕೆ ಶಾಂತಿ ಕೋರಿದರು.ಮೈಸೂರಿನಿಂದ ತೆರಳಿದ್ದ ಪುನೀತ್ ರಾಜ್‌ಕುಮಾರ್ ಅವರು ನೋಡಿಕೊಳ್ಳುತ್ತಿದ್ದ ‘ಶಕ್ತಿಧಾಮ’ದ ಮಕ್ಕಳು ‘ಶಕ್ತಿಧಾಮದ ಹೆಸರು ಎಷ್ಟು ಸುಂದರ’ ಗಾಯನವನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಎಲ್ಲರ ಕಣ್ಣಾಲಿಗಳಲ್ಲಿ ನೀರಾಡುವಂತೆ ಮಾಡಿದರು.

ಮುತ್ತುರಾಜ ಹೆತ್ತ ಮುತ್ತೇ ಎತ್ತ ಹೋದೆಯೋ…: ನಗರದ ಅರಮನೆ ಮೈದಾನದಲ್ಲಿ ನಡೆದ ಪುನೀತನಮನ ಕಾರ್ಯಕ್ರಮ ದಲ್ಲಿ `ದೀಪ ನಮನ’ ಹಾಗೂ ಪುಷ್ಪಾರ್ಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಸಚಿವರು, ಶಾಸಕರು ಸೇರಿದಂತೆ ಗಣ್ಯಾತಿಗಣ್ಯರು ಮೇಣದ ಬತ್ತಿ ಬೆಳಗಿ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಚಿತ್ರ ಸಾಹಿತಿ ಡಾ.ನಾಗೇಂದ್ರ ಪ್ರಸಾದ್ ರಚನೆಯ `ಮುತ್ತುರಾಜ ಹೆತ್ತ ಮುತ್ತೇ ಎತ್ತ ಹೋದೆಯೋ’ ಎಂಬ ಹೃದಯ ತಟ್ಟುವ ಗೀತೆ ಹಿನ್ನೆಲೆಯಲ್ಲಿ ಮೂಡಿಬಂದಾಗ ನಟ ಶಿವರಾಜ್ ಕುಮಾರ್ ಅಗಲಿದ ಸೋದರನನ್ನು ನೆನೆದು ಕಣ ್ಣÃರಾದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಡಳಿತ ಪಕ್ಷದ ಸಚಿವರು ಗಳು ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಿದರು. ನಟ ವಿಶಾಲ್ ಸೇರಿದಂತೆ ದಕ್ಷಿಣ ಚಿತ್ರರಂಗದ ಕಲಾವಿದರು ಪುನೀತ ನಮನದಲ್ಲಿ ಪಾಲ್ಗೊಂಡರು.

ಕಿರುಚಿತ್ರ ಪ್ರದರ್ಶನ: ಕಿಚ್ಚನ ಹಿನ್ನೆಲೆ ದನಿದಾನ: ದಿಢೀರನೆ ಕಣ್ಮರೆಯಾದ ಚಂದನವನದ ನಕ್ಷತ್ರ ಅಪುö್ಪ ಸ್ಮರಣೆಗಾಗಿ ಹಮ್ಮಿಕೊಂಡಿದ್ದ `ಪುನೀತ ನಮನ’ ಕಾರ್ಯಕ್ರಮದಲ್ಲಿ, ಅವರ ಅಭಿನಯದ ಚಿತ್ರಗಳ ಮಾಹಿತಿ, ಸಮಾಜ ಮುಖಿ ಚಟುವಟಿಕೆ, ಸಹಾಯದ ಬಗ್ಗೆ ಕಿರುಚಿತ್ರವೊಂದನ್ನು ಪ್ರದರ್ಶಿಸಲಾಯಿತು. ಕಿಚ್ಚ ಸುದೀಪ್ ಹಿನ್ನೆಲೆ ದನಿದಾನದ ಮೂಲಕ ಗೆಳೆಯನಿಗೆ ನಮನ ಸಲ್ಲಿಸಿದರು.

ಪುನೀತ್ ಸೇವಾಕಾರ್ಯಗಳು, ಸಂಕಷ್ಟದಲ್ಲಿದ್ದವರಿಗೆ ನೆರವು, ಎಲ್ಲರೊಡನೆ ಗೌರವದಿಂದ ವರ್ತಿಸುತ್ತಿದ್ದ ರೀತಿಯನ್ನು ಕಿರುಚಿತ್ರದಲ್ಲಿ ಹೇಳಲಾಗಿತ್ತು. ಪ್ರೇಮದ ಕಾಣ ಕೆ ಚಿತ್ರದಲ್ಲಿ ಬಾಲನಟನಿಂದ ಆರಂಭವಾಗಿ ನಾಯಕ ನಟನಾಗಿ, ನಿರ್ಮಾಪಕನಾಗಿ ಸ್ಯಾಂಡಲ್‌ವುಡ್‌ಗೆ ನೀಡಿದ ಕೊಡುಗೆ, ಅನಾಥಾಶ್ರಮ, ಶಕ್ತಿಧಾಮ, ಗೋಶಾಲೆಗಳ ನಿರ್ವಹಣೆ ಸೇರಿದಂತೆ ಪುನೀತ್ ಜೀವನ ಚಿತ್ರಣವನ್ನು ಕಿರುಚಿತ್ರದಲ್ಲಿ ನೀಡಲಾಗಿದೆ. ಈ ವೇಳೆ ಮಾತನಾಡಿದ ನಟ ದರ್ಶನ್, ಕಾಣದ ಕೈಯಲಿ ಗೊಂಬೆಯು ನೀನು, ಹಣೇಬರಹ ತಿದ್ದುವರಾರಿಲ್ಲ ಎಂಬ ಸಾಲುಗಳು ತಮ್ಮನ್ನು ಕಾಡುತ್ತಿರುವುದಾಗಿ ಹೇಳಿದರು.

ಅಪುö್ಪ ಈ ಸಮಾಜಕ್ಕೆ ಮಾಡುವ ಕೆಲಸಗಳು ಇನ್ನಷ್ಟು ಇದ್ದವು. ಆದರೆ ಬ್ರಹ್ಮದೇವ ಹಣೆಬರಹ ತಿದ್ದಲಿಲ್ಲ. ಆಯುಷ್ಯ ಹೆಚ್ಚಿಸಲಿಲ್ಲ ಎಂದು ಅಲವತ್ತುಕೊಂಡರು. ಪುನೀತ್ ರಾಜ್‌ಕುಮಾರ್ ಅವರ ಕಲೆ, ಸೇವಾಕಾರ್ಯಗಳನ್ನು ನಾವೆಲ್ಲರೂ ಮುಂದುವರಿಸಿಕೊAಡು ಸಾಗಬೇಕಿದೆ ಎಂದು ದರ್ಶನ್ ನುಡಿ ನಮನದಲ್ಲಿ ತಿಳಿಸಿದರು.

ಯದುವೀರ ಒಡೆಯರ್: ಮೈಸೂರು ಅರಮನೆಗೂ ಡಾ. ರಾಜ್‌ಕುಮಾರ್ ಕುಟುಂಬಕ್ಕೂ ಅವಿನಾಭಾವ ಸಂಬAಧವಿದೆ ಎಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಪುನೀತ ನಮನ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿ, ಡಾ. ರಾಜ್ ಅವರ ಐತಿಹಾಸಿಕ ಚಿತ್ರಗಳು ನಮ್ಮ ರಾಜವಂಶದ ಬಗೆಗಿನ ಕುತೂಹಲವನ್ನು ಹೆಚ್ಚಿಸಿತು ಎಂದರು. ಪುನೀತ್ ಅಗಲಿಕೆಯ ಸುದ್ದಿ ಅರಮನೆಗೆ ದುಃಖ ತಂದಿತ್ತು. ಇಂತಹ ನೋವನ್ನು ಭರಿಸುವ ಶಕ್ತಿಯನ್ನು ಡಾ. ರಾಜ್ ಕುಟುಂಬಕ್ಕೆ ತಾಯಿ ಚಾಮುಂಡೇಶ್ವರಿ ನೀಡಲಿ ಎಂದು ಆಶಿಸಿದರು.

Translate »