ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣದ ಗುಣಮಟ್ಟ ಕಾಯ್ದುಕೊಳ್ಳುವುದು ಅವಶ್ಯ

ಮೈಸೂರು: ಬೆಳೆ ಯುತ್ತಿರುವ ತಂತ್ರಜ್ಞಾನ ಮತ್ತು ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣದಲ್ಲಿ ಗುಣಮಟ್ಟ ಕಾಯ್ದು ಕೊಳ್ಳುವುದು ಅತ್ಯಗತ್ಯ ಎಂದು ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಸ್.ಆರ್.ನಿರಂಜನ ಅಭಿಪ್ರಾಯಪಟ್ಟರು.

ಮೈಸೂರಿನ ಯುವರಾಜ ಕಾಲೇಜಿನ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂ ಡಿದ್ದ ಕಾಲೇಜಿನ 2018-19ನೇ ಸಾಲಿನ ಜ್ಞಾನವಾಹಿನಿ ಪಠ್ಯೇತರ ಚಟುವಟಿಕೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರೀಡಾ ದಿನಾಚರಣೆ ಸಮಾರೋಪ ಸಮಾ ರಂಭದಲ್ಲಿ ಅವರು ಮಾತನಾಡಿದರು.
ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲಿ ಇಂದು ಗುಣಮಟ್ಟದ ಶಿಕ್ಷಣ ನೀಡಬೇಕೆಂಬುದಕ್ಕೆ ಒತ್ತು ನೀಡಲಾಗುತ್ತಿದೆ. ಪ್ರಸ್ತುತ ಸನ್ನಿವೇಶಕ್ಕೆ ಇದು ಅತ್ಯಗತ್ಯ. ಶಿಕ್ಷಣ ಇಲ್ಲವಾದರೆ ಉತ್ತಮ ಜೀವನ ರೂಪಿಸಿಕೊಳ್ಳುವುದು ಕಷ್ಟ ಸಾಧ್ಯ. ಹೀಗಾಗಿ ಶಿಕ್ಷಣ ಎಂಬುದು ಪ್ರತಿಯೊಬ್ಬರ ಜೀವನದಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.

ಉನ್ನತ ಶಿಕ್ಷಣದಲ್ಲಿ ಅಧ್ಯಯನ ವಿಷಯ ಗಳು ವೈವಿಧ್ಯಮಯವಾಗಿ ವಿಸ್ತರಿಸಿದ್ದು, 20 ವರ್ಷಗಳ ಹಿಂದೆ ಕೇವಲ ಸಸ್ಯಶಾಸ್ತ್ರ ಹಾಗೂ ಪ್ರಾಣಿಶಾಸ್ತ್ರವನ್ನಷ್ಟೇ ಕಲಿಯುತ್ತಿ ದ್ದೆವು. ಆದರೆ ಇಂದು ಮೂಲ ವಿಷಯ ಗಳಲ್ಲಿನ ಹಲವು ಆಯಾಮಗಳೇ ಪ್ರತ್ಯೇಕ ವಿಷಯವಾಗಿ ಕಲಿಯುವ ವಾತಾವರಣ ನಿರ್ಮಾಣವಾಗಿದೆ. ಇಂತಹ ಸಂದರ್ಭ ದಲ್ಲಿ ಎಲ್ಲಾ ವಿಷಯಗಳ ಕನಿಷ್ಠ ಜ್ಞಾನ ಸಂಪಾದನೆಗೆ ಒತ್ತು ನೀಡುವುದು ಅತ್ಯಗತ್ಯ ಎಂದರು. ದೇಶದಲ್ಲಿ 950 ವಿಶ್ವವಿದ್ಯಾ ನಿಲಯಗಳು ಇದ್ದು, ಈ ಪೈಕಿ 370 ಸರ್ಕಾರಿ ವಿಶ್ವವಿದ್ಯಾನಿಲಯಗಳು. 50 ಸಾವಿರ ಪದವಿ ಕಾಲೇಜುಗಳು ಶಿಕ್ಷಣ ನೀಡುತ್ತಿವೆ. ಆದರೂ ಉನ್ನತ ಶಿಕ್ಷಣಕ್ಕೆ ಬರುವವರ ಪ್ರಮಾಣ ಆಶಾದಾಯಕ ವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ವೇಳೆ ಪಠ್ಯೇತರ ಚಟುವಟಿಕೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಸಂಬಂಧಿಸಿ ದಂತೆ ವಿದ್ಯಾರ್ಥಿಗಳಿಗೆ ಬಹುಮಾನ ಗಳನ್ನು ವಿತರಿಸಲಾಯಿತು. ದಕ್ಷಿಣ ಏಷ್ಯಾ ಚಿನ್ನದ ಪದಕ ವಿಜೇತ ಅಂತಾರಾಷ್ಟ್ರೀಯ ಕ್ರೀಡಾಪಟು ಅರ್ಜುನ್ ದೇವಯ್ಯ ತೀತ ಮಾಡ ಅತಿಥಿಯಾಗಿ ಪಾಲ್ಗೊಂಡಿದ್ದರು.

ಕಾಲೇಜಿನ ಪ್ರಾಂಶುಪಾಲ ಡಾ.ಎಂ. ರುದ್ರಯ್ಯ ಅಧ್ಯಕ್ಷತೆ ವಹಿಸಿದ್ದರು. ಕಾಲೇ ಜಿನ ಆಡಳಿತಾಧಿಕಾರಿ ಡಾ.ಹೆಚ್.ಸಿ.ದೇವ ರಾಜೇಗೌಡ, ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ಹೆಚ್.ಬಿ.ಮಹೇಶ್, ಜ್ಞಾನವಾಹಿನಿ ಪಠ್ಯೇ ತರ ಚಟುವಟಿಕೆಯ ಸಂಯೋಜಕಿ ಡಾ.ಕೆ. ಸೌಭಾಗ್ಯವತಿ, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಡಾ. ಸತೀಶ್ ಭಟ್ ಶಂಕರ್, ದೈಹಿಕ ಶಿಕ್ಷಣ ವಿಭಾಗದ ಕ್ರೀಡಾ ಕಾರ್ಯದರ್ಶಿ ಕಾಂತರಾಜ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.