ಪ್ರಶ್ನೆ ಪತ್ರಿಕೆ ಸೋರಿಕೆ:  ವದಂತಿಗಳಿಗೆ ಕಿವಿಗೊಡಬೇಡಿ
ಮೈಸೂರು

ಪ್ರಶ್ನೆ ಪತ್ರಿಕೆ ಸೋರಿಕೆ: ವದಂತಿಗಳಿಗೆ ಕಿವಿಗೊಡಬೇಡಿ

January 20, 2019

ಮೈಸೂರು: ಕರ್ನಾಟಕ ಸ್ಟೇಟ್ ಪೊಲೀಸ್ ಇಲಾಖೆ ವತಿಯಿಂದ ಸಿವಿಲ್ ಪೊಲೀಸ್ ಸಬ್-ಇನ್ಸ್ ಪೆಕ್ಟರ್‍ನ 190 ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ್ದ ಅರ್ಹ ಅಭ್ಯರ್ಥಿಗಳಿಗೆ ಜ.13ರಂದು ಬೆಂಗ ಳೂರು, ಮೈಸೂರು, ಬೆಳಗಾವಿ, ದಾವಣಗೆರೆ, ಕಲಬು ರಗಿ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಈ ಸಂಬಂಧ ಕೆಲವೊಂದು ಮಾಧ್ಯಮಗಳಲ್ಲಿ ಪ್ರಶ್ನೆ ಪತ್ರಿಕೆಯು ಸೋರಿಕೆಯಾಗಿರುವ ಬಗ್ಗೆ ಪ್ರಸಾರವಾದ ಕಾರಣ ಕೆಲವು ವದಂತಿಯಾಗಿದ್ದು, ಕೆಲವು ವಂಚನೆ ಕೋರರು ಅಭ್ಯರ್ಥಿಗಳಿಗೆ ಮೋಸ ಮಾಡುವ ಸಲುವಾಗಿ ಪಿಎಸ್‍ಐ ಹುದ್ದೆಯ ಪ್ರಶ್ನೆ ಪತ್ರಿಕೆ ನಮ್ಮಲ್ಲಿ ಅಭ್ಯವಿರುವು ದಾಗಿ ನಂಬಿಸಿ, ಹಣಕ್ಕಾಗಿ ಅಭ್ಯರ್ಥಿಗಳನ್ನು ತಪ್ಪು ದಾರಿ ಗೆಳೆಯುವ ಸಂಚು ರೂಪಿಸಿರುತ್ತಾರೆ. ವಂಚನೆಕೋರ ರನ್ನು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಅಭ್ಯರ್ಥಿಗಳು ಯಾವುದೇ ಸುಳ್ಳು ವದಂತಿಗಳಿಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ನೇಮಕಾತಿ ವಿಭಾಗದ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ರಾಘವೇಂದ್ರ ಔರಾದ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »