ಬೆಂಗಳೂರನ್ನು ಪ್ಲಾಸ್ಟಿಕ್, ತ್ಯಾಜ್ಯ ಮುಕ್ತಗೊಳಿಸಲು ಶೀಘ್ರ ಕ್ರಮ: ಹೆಚ್‍ಡಿಕೆ
ಮೈಸೂರು

ಬೆಂಗಳೂರನ್ನು ಪ್ಲಾಸ್ಟಿಕ್, ತ್ಯಾಜ್ಯ ಮುಕ್ತಗೊಳಿಸಲು ಶೀಘ್ರ ಕ್ರಮ: ಹೆಚ್‍ಡಿಕೆ

June 17, 2018

ಬೆಂಗಳೂರು: ಬೆಂಗಳೂರು ನಗರವನ್ನು ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ಮುಕ್ತ ಗೊಳಿಸಲು ಬಿ-ಪ್ಯಾಕ್ ತಂಡದ ಅಭಿಪ್ರಾಯ ವನ್ನು ನಿಗದಿತ ಕಾಲಾವಧಿಯೊಳಗೆ ಅನುಷ್ಠಾನಗೊಳಿ ಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ.

ಬಿ-ಪ್ಯಾಕ್ ಕಚೇರಿಗೆ ಭೇಟಿ ನೀಡಿದ ಅವರು, ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಜೊತೆ ಚರ್ಚಿಸಿ, ವಿವಿಧ ಸಂಸ್ಥೆಗಳ ಸಭೆ ಕರೆದು, ಅವಶ್ಯವಿರುವ ಎಲ್ಲಾ ಯೋಜನೆಗಳನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು. ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿ ದಂತೆ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳೊಂದಿಗೆ ಹೈ-ಟ್ರಾಫಿಕ್ ಡೆನ್ಸಿಟಿ ಕಾರಿಡಾರ್, ವೈಟ್ ಟಾಪಿಂಗ್, ಕಸ ವಿಲೇವಾರಿ ಮತ್ತು ಮೆಟ್ರೊ ಯೋಜನೆ ಮಾಹಿತಿ ಪಡೆದರು.

ಬೆಂಗಳೂರನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಬೇಕು. ಪೆÇೀಸ್ಟರ್, ಫ್ಲೆಕ್ಸ್ ರಹಿತವಾಗಿಸಬೇಕು, ಕಸ ವಿಲೇವಾರಿಗೆ ಆಧುನಿಕ ತಂತ್ರಜ್ಞಾನ ಬಳಸಬೇಕಿದೆ ಎಂದು ಬಿ-ಪ್ಯಾಕ್ ತಂಡ ಮುಖ್ಯಮಂತ್ರಿ ಅವರಿಗೆ ಸಲಹೆ ನೀಡಿತು. ಸಂಸ್ಥೆ ಅಧ್ಯಕ್ಷೆ ಕಿರಣ್ ಮಜುಂದಾರ್, ಉಪಾಧ್ಯಕ್ಷ ಮೋಹನ್ ದಾಸ್ ಪೈ, ಸಿಇಓ ರೇವತಿ ಅಶೋಕ್, ಆರ್.ಕೆ ಮಿಶ್ರಾ, ಆನಂದ ಗುಂಡೂರಾವ್ ಉಪಸ್ಥಿತರಿದ್ದರು.

Translate »