ಅಭಿವೃದ್ಧಿ ಕಾಮಗಾರಿಗಳಿಗೆ ಆರ್.ಧ್ರುವನಾರಾಯಣ್ ಭೂಮಿ ಪೂಜೆ
ಮೈಸೂರು

ಅಭಿವೃದ್ಧಿ ಕಾಮಗಾರಿಗಳಿಗೆ ಆರ್.ಧ್ರುವನಾರಾಯಣ್ ಭೂಮಿ ಪೂಜೆ

March 6, 2019

ತಿ.ನರಸೀಪುರ: ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಕ್ರೀಯಾ ಯೋಜನೆಯನ್ನು ರೂಪಿಸಿಕೊಳ್ಳಬೇಕು ಎಂದು ಸಂಸದ ಆರ್.ಧ್ರುವನಾರಾಯಣ್ ಹೇಳಿದರು.

ತಾಲೂಕಿನ ಮಲಿಯೂರು ಗ್ರಾಮದಲ್ಲಿ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ 45 ಲಕ್ಷ ರೂ.ಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೇರವೇರಿಸಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

ಪ.ಜಾತಿ ಮತ್ತು ಪ.ಪಂಗಡ ಸಮುದಾಯಗಳ ಜನರು ವಾಸಿಸುವ ಗ್ರಾಮಗಳ ಅಭಿವೃದ್ಧಿಯನ್ನು ಕೇಂದ್ರೀಕರಿಸಿ ಕೇಂದ್ರ ಸರ್ಕಾರ ಆದರ್ಶ ಗ್ರಾಮ ಯೋಜನೆಯನ್ನು ರೂಪಿಸಿದೆ. ರಸ್ತೆ ಮತ್ತು ಚರಂಡಿಗಳಂತಹ ಮೂಲ ಸೌಲಭ್ಯಗಳಿಗೆ ಅಭಿವೃದ್ಧಿ ಸೇರಿದಂತೆ ಅಂಗನವಾಡಿ ಹಾಗೂ ಶಾಲೆ ಕಟ್ಟಡಗಳ ದುರಸ್ತಿಗೂ ಅವಕಾಶವಿದೆ. ಇಂತಹುಗಳನ್ನು ಕ್ರೀಯಾ ಯೋಜನೆಯಲ್ಲಿ ಸೇರ್ಪಡೆಗೊಳಿಸಬೇಕು. ನಂತರ ಗ್ರಾಪಂ ಗ್ರಾಮ ಸಭೆಗಳಲ್ಲಿಯೂ ಸಭಾ ನಡಾವಳಿ ನಮೂದಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ವೇಳೆ ಕೆಪಿಸಿಸಿ ಪ.ಪಂಗಡ ವಿಭಾಗದ ಉಪಾಧ್ಯಕ್ಷ ಹೊನ್ನನಾಯಕ, ತಲಕಾಡು ಕ್ಷೇತ್ರದ ಜಿಪಂ ಸದಸ್ಯ ಮಂಜುನಾಥನ್, ತಾಪಂ ಅಧ್ಯಕ್ಷ ಆರ್.ಚಲುವರಾಜು, ಸದಸ್ಯ ಹೆಚ್.ಜವರಯ್ಯ, ಇಓ ಡಾ.ಬಿ.ಎಸ್.ನಂಜೇಶ್, ಜಿಪಂ ಎಇಇ ಜೆ.ಎಂ.ಸುರೇಶ್, ಸಹಾಯಕ ಇಂಜಿನಿಯರ್ ವಿ.ಟಿ.ಪ್ರಕಾಶ್, ಗ್ರಾಪಂ ಅಧ್ಯಕ್ಷೆ ದೊಡ್ಡಮ್ಮ, ಮಾಜಿ ಅಧ್ಯಕ್ಷರಾದ ತಿಮ್ಮಮ್ಮ, ದೊಳ್ಳಯ್ಯ, ಯಜಮಾನರಾದ ಕೃಷ್ಣಯ್ಯ, ದೊಳ್ಳೇಗೌಡ, ಬನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮಸ್ಥರಿದ್ದರು.

ತಿ.ನರಸೀಪುರ ತಾಲೂಕಿನ ಮಲಿಯೂರು ಗ್ರಾಮದಲ್ಲಿ ಸಂಸದ ಆರ್.ಧ್ರುವನಾರಾಯಣ ಅವರು ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿದರು.

Translate »