ಇಂದು ರಾಜ್ಯದಿಂದ ನಿರ್ಗಮಿಸಲಿರುವ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ
News

ಇಂದು ರಾಜ್ಯದಿಂದ ನಿರ್ಗಮಿಸಲಿರುವ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ

October 23, 2022

ಬೆಂಗಳೂರು, ಅ. 22(ಕೆಎಂಶಿ)- ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ ಐಕ್ಯತಾ ಯಾತ್ರೆ ನಾಳೆ ರಾಜ್ಯದಲ್ಲಿ ಮುಕ್ತಾಯ ವಾಗಲಿದೆ. ಸೆ.30 ರಿಂದ ಆರಂಭವಾದ ಭಾರತ ಐಕ್ಯತಾ ಯಾತ್ರೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿ ಕಾಂಗ್ರೆಸ್ ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದ್ದಾರೆ.
ಈ ಯಾತ್ರೆಯಲ್ಲಿ ಅತೀ ಹೆಚ್ಚು ಸಂಖ್ಯೆ ಯಲ್ಲಿ ಯುವಕರು, ಮಹಿಳೆಯರು, ರೈತರು ಹಾಗೂ ಮಕ್ಕಳು ಬಹಳ ಉತ್ಸಾಹ ದಿಂದ ಭಾಗವಹಿಸಿದ್ದು, ಮುಖಂಡರು ಹಾಗೂ ನಾಯಕರಲ್ಲಿ ವಿಶ್ವಾಸ ಹೆಚ್ಚಿರುವು ದಲ್ಲದೆ, ಹೊಸ ಆಸೆ ಚಿಗುರೊಡೆದಿದೆ.

ಇಂದಿರಾ ಗಾಂಧಿ ಅವರನ್ನು ನೋಡಿ ಖುಷಿ ಪಡಲು ಜನ ಹಳ್ಳಿ, ಹಳ್ಳಿಗಳಿಂದ ಆಗಮಿಸಿದಂತೆ ಇಂದು ರಾಹುಲ್ ಗಾಂಧಿ ಅವರನ್ನು ನೋಡಿ ಶುಭ ಕೋರಲು ಉತ್ಸುಕರಾಗಿ ಬಂದದ್ದಲ್ಲದೆ, ಅವರ ಆಚಾರ, ವಿಚಾರ, ಭಾವನೆಗಳನ್ನು ವ್ಯಕ್ತ ಪಡಿಸಿದ್ದಾರೆ. ಜಾತಿ, ಧರ್ಮ, ಪಕ್ಷ ಭೇದ ಮರೆತು ಎಲ್ಲ ವರ್ಗದವರು ಈ ಯಾತ್ರೆ ಯಲ್ಲಿ ಭಾಗಿಯಾಗಿದ್ದಾರೆ. ಈ ನಡಿಗೆ ದೇಶಕ್ಕೆ ಒಂದು ಕೊಡುಗೆಯಾಗಿದೆ ಎಂದು ಕಾಂಗ್ರೆಸ್ ನಾಯಕರು ಭಾವಿಸಿದ್ದಾರೆ. ಇದು ಪಕ್ಷ ಅಥವಾ ಧರ್ಮದ ಆಧಾರದ ಮೇಲೆ ನಡೆ ದಿರುವ ಯಾತ್ರೆ ಅಲ್ಲ.

ಮಾನವೀಯತೆ ಹಾಗೂ ಮಾನವ ಧರ್ಮದ ಆಧಾರದ ಮೇಲೆ ನಡೆದಿರುವ ಯಾತ್ರೆ. ಮಾನವ ಧರ್ಮಕ್ಕೆ ಜಯ ವಾಗಲಿ ಎಂಬ ಉದ್ದೇಶದೊಂದಿಗೆ ರಾಹುಲ್ ಗಾಂಧಿ ಅವರು ಹೆಜ್ಜೆ ಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಬಿಂಬಿಸಿದ್ದಾರೆ.

ರಾಹುಲ್ ಗಾಂಧಿ ಅವರು ಬಿಸಿಲು, ಮಳೆ ಲೆಕ್ಕಿಸದೆ ಯಾತ್ರೆ ಮಾಡುತ್ತಿದ್ದಾರೆ. ಅವರು ಪ್ರಧಾನಮಂತ್ರಿ ಸ್ಥಾನದ ಅವಕಾಶ ತ್ಯಾಗ ಮಾಡಿ, ಪಕ್ಷದ ಅಧಿಕಾರ ಬಿಟ್ಟುಕೊಟ್ಟು ದೇಶದಲ್ಲಿ ಬದಲಾವಣೆ ತರಲು ನಡೆಯುತ್ತಿದ್ದಾರೆ. ಇದು ಬದಲಾವಣೆ ಹೆಜ್ಜೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಯಾತ್ರೆ ಸಂದರ್ಭದಲ್ಲಿ ಜನರು ಹೇಳಿಕೊಂಡಿ ರುವ ಸಮಸ್ಯೆ, ನೋವುಗಳಿಗೆ ಪರಿಹಾರ ಕಲ್ಪಿಸಲು ಯೋಜನೆ ರೂಪಿಸಿ ಪ್ರಣಾಳಿಕೆಯಲ್ಲಿ ಸೇರಿಸಲಾಗು ವುದು. ರೈತರು, ಜನ ಸಾಮಾನ್ಯರು, ಯುವಕರು ಜೀವನ ಮಾಡುವುದು ಕಷ್ಟವಾಗಿದೆ. ಯುವಕರಿಗೆ ಉದ್ಯೋಗ ಇಲ್ಲ. ಜನ ಸಾಮಾನ್ಯ ರಿಗೆ ಬೆಲೆ ಏರಿಕೆ ಬರೆ, ರೈತರಿಗೆ ಬೆಂಬಲ ಬೆಲೆ ಇಲ್ಲ. ಈ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಆಗಿದೆ ಎಂದು ತಿಳಿಸಿದರು.

Translate »