ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ಅಭ್ಯರ್ಥಿ ಅಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್ ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಬಹುಶಃ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ಆಗುವುದು ಅಸಾಧ್ಯ. ಎಐಸಿಸಿಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಪ್ರಣಬ್ ಮುಖರ್ಜಿ, ಪಿ.ಚಿದಂಬರಂ ಸೇರಿದಂತೆ ಇನ್ನೂ ಹಲವು ದಿಗ್ಗಜರು ಪ್ರಧಾನಿ ಅಭ್ಯರ್ಥಿಯಾಗುವ ಅರ್ಹತೆ ಹೊಂದಿದ್ದಾರೆ. ಆದ್ದರಿಂದ ಕಾಂಗ್ರೆಸ್ ಚುನಾವಣೆಗೂ ಮುನ್ನವೇ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವುದಿಲ್ಲ. ಈ ವಿಚಾರವಾಗಿ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ರಾಹುಲ್ ಗಾಂಧಿಯವರನ್ನು `ಪಪ್ಪು’ ಎಂದು ಅಣಕಿಸುತ್ತಿರುವುದನ್ನು ಅವರು ಖಂಡಿಸಿದ್ದಾರೆ. ನರೇಂದ್ರ ಮೋದಿಯವರು ಸರ್ವಾಧಿಕಾರಿಯಂತೆ ಅಧಿಕಾರ ನಡೆಸುತ್ತಿದ್ದು, ಬಿಜೆಪಿ ನಾಯಕರು ಮೋದಿ ಹೇಳಿದಂತೆ ಕುಣಿಯುತ್ತಿದ್ದಾರೆ ಎಂದು ಟೀಕಿಸಿದರು.