ಸುಮಾರು ೧೦ ಗಂಟೆ ಇಡಿ ವಿಚಾರಣೆ ಎದುರಿಸಿದ ರಾಹುಲ್

ನವದೆಹಲಿ: ಇಂದು ಜಾರಿ ನಿರ್ದೇಶ ನಾಲಯ (ಇಡಿ) ಸಮನ್ಸ್ ನೀಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಯ ಇಡಿ ಕಚೇರಿಯಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಿ ದ್ದರು. ಅವರ ಇಂದಿನ ವಿಚಾರಣೆ ಮುಕ್ತಾ ಯಗೊಂಡಿದ್ದು, ಮತ್ತೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಹೇಳಿದ್ದಾರೆ ಎಂದು ತಿಳಿದು ಬಂದಿದೆ.ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬAಧ ವಿಚಾರಣೆಗೆ ಹಾಜರಾಗುವಂತೆ ಇಡಿಯಿಂದ ಸಮನ್ಸ್ ಜಾರಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ರಾಹುಲ್ ಗಾಂಧಿಯವರು ಇಡಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದರು. ಸತತ ೧೦ ಗಂಟೆಗಳ ಕಾಲ ಇಡಿ ಅಧಿಕಾರಿಗಳು ಪ್ರಕರಣದಲ್ಲಿ ವಿಚಾರಣೆ ನಡೆಸಿದರು.