ದಸರಾ ಹಬ್ಬಕ್ಕೆ ಪ್ರಯಾಣಿಕರಿಗೆ ಶಾಕ್ ಕೊಟ್ಟ ರೈಲ್ವೆ ಇಲಾಖೆ!
ಮೈಸೂರು

ದಸರಾ ಹಬ್ಬಕ್ಕೆ ಪ್ರಯಾಣಿಕರಿಗೆ ಶಾಕ್ ಕೊಟ್ಟ ರೈಲ್ವೆ ಇಲಾಖೆ!

September 27, 2019

ಮೈಸೂರು: ದಸರಾ ಹಬ್ಬಕ್ಕೆ ಊರಿಗೆ ಹೋಗೋರಿಗೆ ರೈಲ್ವೆ ಇಲಾಖೆ ಶಾಕಿಂಗ್ ನ್ಯೂಸ್ ನೀಡಿದೆ.

ದಸರಾ ಹಬ್ಬದ ಸಂದರ್ಭದಲ್ಲಿ ಮೈಸೂರು ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಜನ ಸಂದಣಿಯನ್ನು ನಿಯಂತ್ರಿಸುವ ಉದ್ದೇಶದಿಂದ ಮೈಸೂರು ಕೇಂದ್ರ ರೈಲ್ವೇ ನಿಲ್ದಾಣದ ಫ್ಲಾಟ್ ಫಾರಂ ಟಿಕೆಟ್ ದರ ಹೆಚ್ಚಿಸಲಾಗಿದೆ. ಮೈಸೂರು ಕೇಂದ್ರ ರೈಲ್ವೇ ನಿಲ್ದಾಣದ ಫ್ಲಾಟ್‍ಫಾರಂ ಟಿಕೆಟ್ ದರವನ್ನು ಅ.2ರಿಂದ 15ರವರೆಗೆ 10 ರೂ.ನಿಂದ 20 ರೂ.ಗೆ ಹೆಚ್ಚಳ ಮಾಡಲು ತೀರ್ಮಾನಿಸಿದೆ.

ದಸರಾ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆ ಯಲ್ಲಿ ಪ್ರಯಾಣಿಕರು ಸಂಚರಿಸುವುದರಿಂದ ಫ್ಲಾಟ್ ಫಾರಂನಲ್ಲಿ ಜನಸಂದಣಿ ನಿಯಂತ್ರಿಸಲು ಹಾಗೂ ಪ್ರಯಾಣಿಕರ ಸುರಕ್ಷತೆ ಮತ್ತು ಮುನ್ನೆಚ್ಚರಿಕೆಯಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಭಾಗೀಯ ಕಾರ್ಯಾಚರಣೆ ವ್ಯವಸ್ಥಾಪಕ ಸತೀಶ್ ತಿಳಿಸಿದ್ದಾರೆ.

Translate »