ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ ಸ್ಥಗಿತಕ್ಕೆ ಆಗ್ರಹಿಸಿ ರೈಲ್ವೆ ಮಜ್ದೂರ್ ಯೂನಿಯನ್ ಪ್ರತಿಭಟನೆ
ಮೈಸೂರು

ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ ಸ್ಥಗಿತಕ್ಕೆ ಆಗ್ರಹಿಸಿ ರೈಲ್ವೆ ಮಜ್ದೂರ್ ಯೂನಿಯನ್ ಪ್ರತಿಭಟನೆ

March 26, 2021

ಮೈಸೂರು, ಮಾ.25(ಆರ್‍ಕೆಬಿ)- ರೈಲ್ವೆಯಲ್ಲಿ ನೂತನವಾಗಿ ಅಳವಡಿಸಿರುವ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (ಹ್ಯೂಮನ್ ರಿಸೋರ್ಸ್ ಮ್ಯಾನೇಜ್‍ಮೆಂಟ್ ಸಿಸ್ಟಂ)ಯಿಂದಾಗಿ ರೈಲ್ವೆ ನೌಕರರಿಗೆ ಆಗುತ್ತಿರುವ ತೊಂದರೆಗಳನ್ನು ವಿರೋಧಿಸಿ ನೈರುತ್ಯ ರೈಲ್ವೆ ಮಜ್ದೂರ್ ಯೂನಿಯನ್ ಆಶ್ರಯದಲ್ಲಿ ಗುರು ವಾರ ಮೈಸೂರಿನ ರೈಲ್ವೆ ವಿಭಾಗೀಯ ತಾಂತ್ರಿಕ ವಿಭಾಗದ ಕಚೇರಿ ಎದುರು ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಯಿತು.
ನೈರುತ್ಯ ರೈಲ್ವೆ ವಲಯದಲ್ಲಿ ನೂತನವಾಗಿ ಅಳವಡಿಸಿರುವ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ ಕಳೆದ 6 ತಿಂಗ ಳಿಂದಲೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ವ್ಯವಸ್ಥೆ ಯಡಿ ಕಂಪ್ಯೂಟರ್‍ಗಳಲ್ಲಿ ಸೇವೆ ನೀಡಲಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಅದನ್ನು ಸರಿಪಡಿಸಿಲ್ಲ. ಹೀಗಾಗಿ ನೌಕರರು ಕರ್ತವ್ಯ ನಿರ್ವಹಿಸಲು ತೊಂದರೆಯಾಗಿದೆ. ಹೀಗಾಗಿ ಈ ವ್ಯವಸ್ಥೆಯನ್ನು ಸ್ಥಗಿತಗೊಳಿಸಿ, ಮೊದಲಿದ್ದಂತೆಯೇ ಮಾನವ ಚಾಲಿತ ಕೆಲಸಕ್ಕೆ ಅವಕಾಶ ಮುಂದುವರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಸಂಬಂಧ ವಿಭಾ ಗೀಯ ರೈಲ್ವೆ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ನೈರುತ್ಯ ರೈಲ್ವೆ ಮಜ್ದೂರ್ ಯೂನಿಯನ್ ವಿಭಾಗೀಯ ಅಧ್ಯಕ್ಷ ಎಸ್.ಸೋಮಶೇಖರ್, ಕಾರ್ಯದರ್ಶಿ ಪಿ.ಶಿವಪ್ರಕಾಶ್, ಕಾರ್ಯಾಧ್ಯಕ್ಷ ಆರ್ಥರ್ ಫರ್ನಾಂಡೀಸ್, ಸಹ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಖಜಾಂಚಿ ನಾಗೇಂದ್ರ ಇನ್ನಿತರರು ಭಾಗವಹಿಸಿದ್ದರು.

Translate »