ಮಳೆ ಅವಘಡ: ಪರಿಹಾರ ಕ್ರಮಗಳಿಗೆ ಸನ್ನದ್ಧರಾಗಲು ಸೂಚನೆ
ಚಾಮರಾಜನಗರ

ಮಳೆ ಅವಘಡ: ಪರಿಹಾರ ಕ್ರಮಗಳಿಗೆ ಸನ್ನದ್ಧರಾಗಲು ಸೂಚನೆ

June 5, 2018

ಚಾಮರಾಜನಗರ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಎದುರಾಗುವ ಯಾವುದೇ ಸಮಸ್ಯೆಯನ್ನು ನಿವಾರಿಸಿ ಪರಿಹಾರ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳಲು ಅಧಿಕಾರಿಗಳು ಸನ್ನದ್ಧರಾಗಿರಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಸುತ್ತೋಲೆ ಹೊರಡಿಸಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಅತಿವೃಷ್ಟಿ ಸಂಭವಿಸಿದ್ದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಹಾರ ಕ್ರಮಕೈಗೊಳ್ಳಬೇಕು. ಸಕಾಲದಲ್ಲಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಮುಖ್ಯ ಜವಾಬ್ದಾರಿ ಯಾಗಿದೆ ಎಂದು ತಿಳಿಸಿದ್ದಾರೆ. ಸಮಾರೋಪಾದಿಯಲ್ಲಿ ಪರಿಹಾರ ಕಾಮಗಾರಿ ಅನುಷ್ಠಾನಗೊಳಿಸಲು ಹಾಗೂ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಜರೂರಾಗಿ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ದಿಸೆಯಲ್ಲಿ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಅಧಿಕಾರಿ ಗಳು ಇದ್ದು ಸಮಸ್ಯೆ, ದೂರುಗಳು ಬಂದಾಗ ತಕ್ಷಣವೇ ಸ್ಪಂದಿಸಬೇಕು ಎಂದಿದ್ದಾರೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಪೂರ್ವಾನು ಮತಿ ಇಲ್ಲದೆ ರಜೆ, ಅನ್ಯ ಕಾರ್ಯ ಗಳ ಮೇಲೆ ತೆರಳುವಂತಿಲ್ಲ. ಕೇಂದ್ರಸ್ಥಾನವನ್ನು ಬಿಡಲು ಅನುಮತಿ ಪಡೆಯದೆ ಇರುವುದನ್ನು ಗಂಭೀರವಾಗಿ ಪರಿಗಣ ಸಲಾಗುವುದು. ಅಧಿಕಾರಿಗಳು ಅನುಮತಿ ಪಡೆದ ನಂತರವೇ ರಜೆಯ ಮೇಲೆ ತೆರಳಬೇಕು. ತಪ್ಪಿದಲ್ಲಿ ಗೈರುಹಾಜರಿಯನ್ನು ವೇತನರಹಿತ ರಜೆ ಎಂದು ಪರಿಗಣ ಸುವುದಲ್ಲದೆ, ಶಿಸ್ತು ಕ್ರಮ ಕೈಗೊಳ್ಳಲಾಗು ವುದು ಎಂದು ಎಚ್ಚರಿಕೆ ನೀಡಿದ್ದಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗೆ, ಸಹಾಯಕ ಕಾರ್ಯ ಪಾಲಕ ಎಂಜಿನಿಯರ್, ಕಿರಿಯ ಎಂಜಿನಿಯರ್‍ಗಳಿಗೆ ಅನಿವಾರ್ಯವಿದ್ದಲ್ಲಿ ವೈದ್ಯಕೀಯ ರಜೆಯನ್ನು ಹೊರತುಪಡಿಸಿ ಬೇರೆ ಯಾವುದೇ ರಜೆಯನ್ನು ಯಾವುದೇ ಕಾರಣಕ್ಕೂ ಸಂಬಂಧಪಟ್ಟ ಕಾರ್ಯನಿರ್ವಹಣಾಧಿಕಾರಿಗಳು ನೀಡÀ ಬಾರದು ಎಂದು ಸೂಚಿಸಿದ್ದಾರೆ.

ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಅತಿವೃಷ್ಟಿ, ನೈರ್ಮಲ್ಯ ಹಾಗೂ ಇತ್ಯಾದಿ ಸಮಸ್ಯೆಗಳಿದ್ದರೆ ಆಯಾ ಹಂತದಲ್ಲಿಯೇ ಪರಿಹಾರಕ್ಕೆ ಮುಂದಾಗಬೇಕಿದೆ. ಅವಶ್ಯವಿದ್ದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಹಾರ ಕ್ರಮಕೈಗೊಳ್ಳಬೇಕು. ಸಮಸ್ಯೆ ಆಲಿಸಿ ತಕ್ಷಣ ಪರಿಹರಿಸಬೇಕು ಎಂದಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗದವರು ಎಲ್ಲಾ ಗ್ರಾಮಗಳಿಗೆ ಭೇಟಿನೀಡಿ ಸಾಂಕ್ರಾ ಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ತಿಳಿವಳಿಕೆ ನೀಡಬೇಕು. ಜಿಲ್ಲಾ, ತಾಲೂಕು ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಕರ್ತವ್ಯ ನಿರ್ವಹಿಸಬೇಕು. ಔಷಧಗಳು ದಾಸ್ತಾನು ಇರುವಂತೆ ಕ್ರಮವಹಿಸಬೇಕು ಎಂದು ಜಿ.ಪಂ. ಸಿಇಓ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Translate »