ವಿರಾಜಪೇಟೆ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಇಳಿಮುಖ
ಕೊಡಗು

ವಿರಾಜಪೇಟೆ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಇಳಿಮುಖ

June 18, 2018

ವಿರಾಜಪೇಟೆ: ವಿರಾಜಪೇಟೆ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಇಳಿ ಮುಖಗೊಂಡಿದ್ದು, ಬೇತ್ರಿ ಗ್ರಾಮದಲ್ಲಿ ಕಾವೇರಿ ಹೊಳೆ ನೀರಿನ ಪ್ರಮಾಣ ಕಡಿಮೆಯಾಗಿದೆ. ಮಳೆ ಕಡಿಮೆಯಾದ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಬಿಸಿಲಿನ ವಾತಾವರಣ ಕಂಡು ಬಂತು.

ತಾಲೂಕು ತಹಸಿಲ್ದಾರ್ ಆರ್.ಗೋವಿಂದ ರಾಜು ಅವರು ತಾಲೂಕಿನಾದ್ಯಂತ ಪ್ರವಾಸ ಕೈಗೊಂಡಿದ್ದು, ಜಲಾವೃತ ಗೊಂಡ ಗದ್ದೆ, ತೋಡುಗಳಲ್ಲಿಯೂ ನೀರು ಇಳಿಮುಖ ವಾಗುತ್ತಿದೆ. ಕೊಡಗು-ಕೇರಳ ಗಡಿ ಪ್ರದೇಶ ವಾದ ಮಾಕುಟ್ಟ ಅಂತಾರಾಜ್ಯ ಹೆದ್ದಾರಿ ಯು ಹಾನಿಗೊಳಗಾದ ಸಂದರ್ಭ ಉಪ ಆಯುಕ್ತ ರಮೇಶ್ ಕೋನರೆಡ್ಡಿ ಅವ ರೊಂದಿಗೆ ಭೇಟಿ ನೀಡಿದ ಗೋವಿಂದ ರಾಜು ಅವರು ಮಾಕುಟ್ಟ ರಸ್ತೆಯಲ್ಲಿ ಲಘು ಮತ್ತು ಭಾರೀ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮಾಕುಟ್ಟ ಅರಣ್ಯ ಪ್ರದೇಶವಾದ ಹೆದ್ದಾರಿಯಲ್ಲಿ ಮರಬಿದ್ದು ರಸ್ತೆ ಮೇಲೆ ಹರಿಯುತ್ತಿದ್ದ ನೀರಿನಿಂದ ರಸ್ತೆ ಬದಿಯಲ್ಲಿ ಕೊರೆತ ಉಂಟಾಗಿ ಅಪಾಯದ ಸ್ಥಿತಿಯಲ್ಲಿರುವುದ ರಿಂದ ವಾಹನ ಸಂಚಾರಕ್ಕೆ ಅನಾನುಕೂಲ ವಾಗಿದೆ ಎಂದು ಗೋವಿಂದರಾಜು ತಿಳಿಸಿದ್ದಾರೆ.

ಸಿದ್ದಾಪುರ ವಿಭಾಗದಲ್ಲಿ ಭಾರೀ ಮಳೆಗೆ ಪ್ರವಾಹದ ಭೀತಿಯಲ್ಲಿರುವ ಗುಹ್ಯ ಗ್ರಾಮದ ಕಾವೇರಿ ಹೊಳೆಯ ದಡದಲ್ಲಿ ರುವ ಅನೇಕ ಕುಟುಂಬಗಳು ಹಾಗೂ ಕರಡಿ ಗೋಡು ಗ್ರಾಮದ ಹೊಳೆಯ ದಡದಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ಕುಟುಂಬಗಳು ತಕ್ಷಣ ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಆದರೆ ಎರಡು ಕಡೆಯಲ್ಲಿ ಯಾವ ಕುಟುಂಬಗಳು ಸ್ಥಳಾಂತರಕ್ಕೆ ಆಸಕ್ತಿ ತೋರುತ್ತಿಲ್ಲ. ನಿನ್ನೆ ರಾತ್ರಿಯಿಂದಲೇ ತಾಲೂಕಿನಾದ್ಯಂತ ಮಳೆ ಪ್ರಮಾಣ ಕಡಿಮೆ ಯಾದ ಹಿನ್ನಲೆಯಲ್ಲಿ ಕರಡಿಗೋಡು ಹಾಗೂ ಗುಹ್ಯದ ಕಾವೇರಿ ಹೊಳೆಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ಕುಟುಂಬಗಳು ಆತಂಕಪಡಬೇಕಾಗಿಲ್ಲ ಎಂದು ತಹಸಿಲ್ದಾರ್ ಗೋವಿಂದರಾಜು ಹೇಳಿದರು.

ತಹಸಿಲ್ದಾರ್ ಅವರೊಂದಿಗೆ ಶಾಸಕ ಕೆ.ಜಿ.ಬೋಪಯ್ಯ ಅವರು ಕಾವೇರಿ ಹೊಳೆಯ ಗುಹ್ಯ ಹಾಗೂ ಕರಡಿಗೋಡು ಪ್ರದೇಶಕ್ಕೆ ಭೇಟಿ ನೀಡಿ ಕಾವೇರಿ ಹೊಳೆಯಿಂದ ಪ್ರವಾಹದ ಮೊದಲೇ ಮುನ್ನೆಚ್ಚರಿಕೆ ಕ್ರಮ ವಹಿಸುವುದು. ಸ್ಥಳಾಂತರದ ಕುಟುಂಬಗಳಿಗೆ ಗಂಜಿ ಕೇಂದ್ರದೊಂದಿಗೆ ಅಗತ್ಯ ಪರಿಹಾರ ಒದಗಿ ಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.

ಕೊಡಗು ಜಿಲ್ಲೆಯ ಮಳೆ ವಿವರ

ಮಡಿಕೇರಿ:  ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 3.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.40 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1066.95 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 465.18 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.02 ಮಿ.ಮೀ. ಕಳೆದ ವರ್ಷ ಇದೇ ದಿನ 17.75 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1416.41 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 587.40 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.03 ಮಿ.ಮೀ. ಕಳೆದ ವರ್ಷ ಇದೇ ದಿನ 7.17 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1001.8 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 433.8 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.24 ಮಿ.ಮೀ. ಕಳೆದ ವರ್ಷ ಇದೇ ದಿನ 3.28 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 782.64 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 374.34 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಸಂಪಾಜೆ 3.04, ಭಾಗಮಂಡಲ 21.04, ವಿರಾಜಪೇಟೆ ಕಸಬಾ 6.06, ಪೊನ್ನಂಪೇಟೆ 4.06, ಅಮ್ಮತಿ 2.05, ಸೋಮವಾರಪೇಟೆ ಕಸಬಾ 1, ಶಾಂತಳ್ಳಿ 5.02, ಸುಂಟಿಕೊಪ್ಪ 1, ಕುಶಾಲನಗರ 0.40 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2829.73 ಅಡಿಗಳು, ಕಳೆದ ವರ್ಷ ಇದೇ ದಿನ 2814.20 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 1.40 ಮಿ.ಮೀ. ಇಂದಿನ ನೀರಿನ ಒಳಹರಿವು 669 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 251 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್.

Translate »