ಕೊಡಗು ಜಿಲ್ಲೆಯ ಮಳೆ ವಿವರ
ಕೊಡಗು

ಕೊಡಗು ಜಿಲ್ಲೆಯ ಮಳೆ ವಿವರ

July 11, 2018

ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 78.96 ಮಿ.ಮೀ. ಕಳೆದ ವರ್ಷ ಇದೇ ದಿನ 3.74 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 1681.38 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 815.65 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 104.40 ಮಿ.ಮೀ. ಕಳೆದ ವರ್ಷ ಇದೇ ದಿನ 5.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2338.55 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1114 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 57.50 ಮಿ.ಮೀ. ಕಳೆದ ವರ್ಷ ಇದೇ ದಿನ 5.37 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1485.77 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 715.65 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 74.97 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1219.82 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 600.98 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ: ಮಡಿಕೇರಿ ಕಸಬಾ 116.80, ನಾಪೋಕ್ಲು 82.40, ಸಂಪಾಜೆ 111, ಭಾಗಮಂಡಲ 107.40, ವಿರಾಜಪೇಟೆ ಕಸಬಾ 42.20, ಹುದಿಕೇರಿ 116, ಶ್ರೀಮಂಗಲ 119.40 ಪೊನ್ನಂಪೇಟೆ 9.40, ಅಮ್ಮತಿ 45, ಬಾಳೆಲೆ 13, ಸೋಮವಾರಪೇಟೆ ಕಸಬಾ 111.80, ಶನಿವಾರಸಂತೆ 80, ಶಾಂತಳ್ಳಿ 124, ಕೊಡ್ಲಿಪೇಟೆ 58.40, ಕುಶಾಲನಗರ 30.60, ಸುಂಟಿಕೊಪ್ಪ 45 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (10-07-18)ವರದಿ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2856.79 ಅಡಿಗಳು, ಕಳೆದ ವರ್ಷ ಇದೇ ದಿನ 2832.92 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 19.20 ಮಿ.ಮೀ. ಇಂದಿನ ನೀರಿನ ಒಳಹರಿವು 12168 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 530 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 13406 ಕ್ಯುಸೆಕ್. ನಾಲೆಗೆ 450 ಕ್ಯುಸೆಕ್.

Translate »