ಫನಿ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಹಲವೆಡೆ ಮಳೆ, ಸುಳಿಗಾಳಿಯ ಚೆಲ್ಲಾಟ
ಮೈಸೂರು

ಫನಿ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಹಲವೆಡೆ ಮಳೆ, ಸುಳಿಗಾಳಿಯ ಚೆಲ್ಲಾಟ

April 30, 2019

ಬೆಂಗಳೂರು: ಫನಿ ಚಂಡಮಾರುತ ರಾಜ್ಯಕ್ಕೆ ಅಪ್ಪಳಿಸುವ ಭೀತಿ ಹೆಚ್ಚಿದ್ದು, ಉತ್ತರ ಕರ್ನಾಟಕ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಸುಳಿಗಾಳಿಯ ಸೃಷಿ ್ಟಯಿಂದ ಭಾರಿ ಮಳೆಯಾಗುವ ಸಾಧ್ಯತೆ ಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತದಿಂದ ಉಂಟಾದ ಫನಿ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೂ ಕೂಡ ತಟ್ಟಲಿದೆ. ಫನಿ ಚಂಡಮಾರುತ ದುರ್ಬಲವಾದರೆ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ. ಬೆಂಗಳೂರು, ಮಂಡ್ಯ, ಮೈಸೂರು, ತುಮ ಕೂರಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಕರ್ನಾಟಕ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಸುಳಿಗಾಳಿಯಿಂದ ಮಳೆರಾಯನ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಶಿವಮೊಗ್ಗ, ಚಿತ್ರದುರ್ಗ, ಬಳ್ಳಾರಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು ಈ ಪ್ರದೇಶಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಫನಿ ಎಫೆಕ್ಟ್ ರಾಜ್ಯದ ಬಹುತೇಕ ಭಾಗದಲ್ಲಿ ಮೇ 4ರ ತನಕ ಇರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಫನಿ ಚಂಡಮಾರುತ ದೊಡ್ಡ ಮಟ್ಟದಲ್ಲಿ ರಾಜ್ಯದ ಮೇಲೆ ಪ್ರಭಾವ ಬೀರದೇ ಇದ್ದರೂ ಸಣ್ಣ ಪ್ರಮಾಣದಲ್ಲಿ ಮಳೆರಾಯ ಆರ್ಭಟಿಸಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

Translate »