ನವದೆಹಲಿ, ಜೂ.21- ಪೂರ್ವ ಲಡಾಖ್‍ನಲ್ಲಿನ ಗಡಿ ಬಿಕ್ಕಟ್ಟು ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜ ನಾಥ್ ಸಿಂಗ್ ಭಾನು ವಾರ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಮೂರೂ ಪಡೆಗಳ ಮುಖ್ಯಸ್ಥರೊಂ ದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಲಡಾಖ್‍ನಲ್ಲಿನ ವಾಸ್ತವ ಪರಿಸ್ಥಿತಿ ಹಾಗೂ ಗಡಿನಿಯಂತ್ರಣಾ ರೇಖೆ ಯುದ್ದಕ್ಕೂ ಸನ್ನದ್ಧತೆಯ ಬಗ್ಗೆ ಸಚಿ ವರು ಮಾಹಿತಿ ಪಡೆದಿದ್ದಾರೆ. ಭೂಗಡಿ, ವೈಮಾನಿಕ ಪ್ರದೇಶ ಮತ್ತು ಸಾಗರ ರೇಖೆಗಳಲ್ಲಿ ಚೀನಾ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ ಇಡುವಂತೆ ಮೂರೂ ಪಡೆಗಳ ಮುಖ್ಯಸ್ಥರಿಗೆ ಸಚಿವರು ಸೂಚಿಸಿ ದ್ದಾರೆ ಎಂದು ಮೂಲಗಳು ತಿಳಿಸಿವೆ. ಜೂ.15ರಂದು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯೊಂದಿಗಿನ ಹಿಂಸಾತ್ಮಕ ಮುಖಾಮುಖಿಯಲ್ಲಿ ಕರ್ನಲ್ ಸೇರಿದಂತೆ 20 ಭಾರ ತೀಯ ಸೈನಿಕರು ಹುತಾತ್ಮರಾಗಿದ್ದರು.