ರಾಜ್ಯಸಭೆ ಚುನಾವಣೆ: ಬಿಜೆಪಿ,  ಕಾಂಗ್ರೆಸ್‍ನಲ್ಲಿ ಅಭ್ಯರ್ಥಿ ಆಯ್ಕೆ ಕಸರತ್ತು

Vidhana Parishat

ಬೆಂಗಳೂರು, ಜೂ.3(ಕೆಎಂಶಿ)- ವಿಧಾನಸಭೆಯಿಂದ ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗೆ ಮಾಸಾಂತ್ಯದಲ್ಲಿ ನಡೆಯುವ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ಮತ್ತು ಕಾಂಗ್ರೆಸ್ ಪ್ರತ್ಯೇಕವಾಗಿ ಮುಖಂಡರ ಸಭೆ ಕರೆ ದಿದೆ. ಜೂನ್ 6ರಂದು ಚುನಾವಣಾ ಪ್ರಕ್ರಿಯೆ ಆರಂಭ ಗೊಳ್ಳಲಿದ್ದು, ಇದಕ್ಕೂ ಮುನ್ನವೇ ಪಕ್ಷದ ಅಭ್ಯರ್ಥಿ ಆಯ್ಕೆ ಮಾಡಿ, ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಕಾಂಗ್ರೆಸ್ ಜೂನ್ 5ರಂದು ಮುಖಂಡರ ಸಭೆ ಕರೆದಿದೆ.

ಆಡಳಿತಾರೂಢ ಬಿಜೆಪಿ ಜೂ.6ರಂದು ಪಕ್ಷದ ಅಭ್ಯರ್ಥಿ ಗಳನ್ನು ಆಯ್ಕೆ ಮಾಡುವ ಸಲುವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಕೋರ್ ಕಮಿಟಿ ಸಭೆ ಕರೆದಿದ್ದಾರೆ. 4 ಸ್ಥಾನದಲ್ಲಿ ಬಿಜೆಪಿ 2 ಹಾಗೂ ಕಾಂಗ್ರೆಸ್ ಒಂದನ್ನು ಸುಲಭ ವಾಗಿ ಗೆಲ್ಲಬಹುದಾಗಿದೆ. ಜೆಡಿಎಸ್ ವಿಧಾನಸಭೆಯಲ್ಲಿ 34 ಸ್ಥಾನ ಬಲ ಹೊಂದಿದ್ದರೂ, ರಾಜ್ಯಸಭೆಗೆ ತಮ್ಮ ಪಕ್ಷದ ಅಭ್ಯರ್ಥಿ ಆಯ್ಕೆ ಮಾಡಲು ಇನ್ನು 11 ಮತಗಳ ಕೊರತೆ ಇದೆ. ಪ್ರತಿಪಕ್ಷ ಕಾಂಗ್ರೆಸ್‍ಗೆ ತಮ್ಮ ಅಭ್ಯರ್ಥಿ ಆಯ್ಕೆಯಾದ ನಂತರವೂ ಹೆಚ್ಚುವರಿಯಾಗಿ 23 ಮತಗಳು ಉಳಿಯಲಿವೆ. ಒಂದು ವೇಳೆ ಕಾಂಗ್ರೆಸ್ ಹೆಚ್ಚುವರಿ ಮತಗಳನ್ನು ಜೆಡಿಎಸ್ ಅಭ್ಯರ್ಥಿಗೆ ನೀಡಿದಲ್ಲಿ ಆ ಪಕ್ಷ ರಾಜ್ಯಸಭೆಯಲ್ಲಿ ಒಂದು ಸ್ಥಾನವನ್ನು ಮತ್ತೆ ಉಳಿಸಿಕೊಳ್ಳ ಲಿದೆ. ಬಿಜೆಪಿ ಮತ್ತು ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳಾಗಲು ಪೈಪೋಟಿ ಪ್ರಾರಂಭವಾಗಿದೆ. ಆದರೆ ಉಭಯ ಪಕ್ಷಗಳಲ್ಲೂ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ.