ಕೋಡಿಹಳ್ಳಿ ಬೆಂಬಲಿಗರಿಂದ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ
News

ಕೋಡಿಹಳ್ಳಿ ಬೆಂಬಲಿಗರಿಂದ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ

May 31, 2022

ಬೆಂಗಳೂರು, ಮೇ 30 (ಕೆಎಂಶಿ)-ಕಾರ್ಯ ಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗ ಮಿಸಿದ್ದ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯುಧುವೀರ್ ಸಿಂಗ್ ಮೇಲೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬೆಂಬ ಲಿಗರು ಮಸಿ ಎರಚಿದ ಘಟನೆ ನಡೆದಿದೆ.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿದ್ದ ರೈತ ಚಳವಳಿ ಬಗ್ಗೆ ಆತ್ಮಾವಲೋಕನ ಸ್ಪಷ್ಟೀಕರಣ ಸಭೆಯಲ್ಲೇ ಈ ಘಟನೆ ನಡೆದಿದೆ. ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡುತ್ತಿದ್ದ ರಾಕೇಶ್ ಟಿಕಾಯತ್ ಮತ್ತು ಯುಧುವೀರ್, ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ರಾಜ್ಯದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಮಾಧ್ಯಮಗೋಷ್ಠಿಯಲ್ಲಿ ಕೆಲವರು ವಾಗ್ವಾದಕ್ಕಿಳಿದು, ಕಪ್ಪು ಮಸಿ ಎರಚಿದ್ದಲ್ಲದೆ, ಕುರ್ಚಿ ಗಳನ್ನು ಮನಬಂದಂತೆ ಎಸೆದರು. ನಾವು ಈ ಪ್ರಕ ರಣದಲ್ಲಿ ಭಾಗಿಯಾಗಿಲ್ಲ. ಕೋಡಿಹಳ್ಳಿ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟಿಕಾಯತ್ ಮತ್ತು ಸಿಂಗ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಈ ಹಂತದಲ್ಲಿ ಕೆಲವರು ವಾಗ್ವಾದಕ್ಕಿಳಿದು ಮಸಿ ಎರಚಿದ್ದಾರೆ. ನಂತರ ಅಲ್ಲಿದ್ದ ಕುರ್ಚಿಗಳನ್ನು ಎಳೆದು ಬಿಸಾಡಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಅವರ ಬೆಂಬಲಿಗರು ಈ ಕೃತ್ಯವೆಸಗಿದ್ದಾರೆ ಎಂದು ಟಿಕಾ ಯತ್ ಆರೋಪಿಸಿರುವುದಾಗಿ ವರದಿಯಾಗಿತ್ತು.

ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್ ಅವರ ಮೇಲೆ ಕೇಳಿ ಬಂದಿರುವ ಭ್ರಷ್ಟಾ ಚಾರದ ಆರೋಪಗಳ ಬಗ್ಗೆ ಚರ್ಚೆ ನಡೆಸಲು ನಗರದ ಗಾಂಧಿ ಭವನದಲ್ಲಿ ಕರೆದಿದ್ದ ಸಭೆ, ಈ ಎರಡು ಗುಂಪುಗಳ ನಡುವೆ ಮಾರಾಮಾರಿಗೆ ಸಾಕ್ಷಿಯಾ ಯಿತು. ಈ ವೇಳೆ ವ್ಯಕ್ತಿಯೊಬ್ಬ ರಾಕೇಶ್ ಟಿಕಾಯತ್ ಮೇಲೆ ಮೈಕ್‍ನಿಂದ ಹಲ್ಲೆ ನಡೆಸಿ, ಮಸಿ ಬಳಿದಿ ದ್ದಾನೆ. ನಂತರ ಸಭೆಯಲ್ಲಿ ನೆರೆದಿದ್ದ ಇತರರು ಆತ ನನ್ನು ಹಿಡಿದು, ಕುರ್ಚಿಗಳಿಂದಲೇ ಥಳಿಸಿದರು. ಸಭೆ ಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿ, ಮಹಿಳೆಯರು ಭಯಗೊಂಡು ಕಿರುಚಿದರು.

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ರಾಕೇಶ್ ಟಿಕಾಯತ್ ನೇತೃತ್ವ ವಹಿಸಿದ್ದರು. ನಂತರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಿತು. ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿಯೇ ಜಯ ಗಳಿಸಿತು. ಕೋಡಿ ಹಳ್ಳಿ ಚಂದ್ರಶೇಖರ್ ಮತ್ತು ರಾಕೇಶ್ ಟಿಕಾ ಯತ್ ಪರಸ್ಪರ ಭ್ರಷ್ಟಾಚಾರದ ಆರೋಪಗಳನ್ನು ಮಾಡಿ ಕೊಂಡಿದ್ದರು. ಕೋಡಿಹಳ್ಳಿ ಚಂದ್ರಶೇಖರ್ ಮಾಡಿ ರುವ ಆರೋಪಗಳಿಗೆ ಉತ್ತರ ನೀಡುತ್ತಿದ್ದ ವೇಳೆ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿಯಲಾಗಿದೆ.

ಪ್ರಕರಣ ಕುರಿತು ಪ್ರತಿಕ್ರಿಯಿಸಿದ ರಾಕೇಶ್ ಟಿಕಾ ಯತ್, ‘ಇಂಥ ಘಟನೆ ನಡೆಯಬಾರದಿತ್ತು. ಪೆÇಲೀಸರು ಭದ್ರತೆ ಒದಗಿಸಿರಲಿಲ್ಲ. ಸರ್ಕಾರವು ಈ ಘಟನೆಯಲ್ಲಿ ಶಾಮೀಲಾಗಿದೆ’ ಎಂದು ಹೇಳಿ ದರು. ಪರಸ್ಪರ ಹೊಡೆದಾಟಕ್ಕೆ ಮುಂದಾದವರನ್ನು ಪೆÇಲೀಸರು ವಶಕ್ಕೆ ತೆಗೆದುಕೊಂಡರು.

Translate »