ರಾಮದಾಸ್ ಆರೋಗ್ಯ ವಿಚಾರಿಸಿದ ಸಹಕಾರ ಸಚಿವ ಸೋಮಶೇಖರ್
ಮೈಸೂರು

ರಾಮದಾಸ್ ಆರೋಗ್ಯ ವಿಚಾರಿಸಿದ ಸಹಕಾರ ಸಚಿವ ಸೋಮಶೇಖರ್

February 17, 2020

ಮೈಸೂರು, ಫೆ.16 (ಆರ್‍ಕೆಬಿ)- ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭಾನುವಾರ ಮೈಸೂರಿನ ಕೃಷ್ಣರಾಜ ಕ್ಷೇತ್ರ ಶಾಸಕ ಎಸ್.ಎ.ರಾಮದಾಸ್ ನಿವಾ ಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಇತ್ತೀಚೆಗೆ ರಾಮದಾಸ್ ಅವರು ಅನಾರೋಗ್ಯಕ್ಕೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯು ತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರು ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ಇದಕ್ಕೂ ಮುನ್ನ ಸಚಿವರು ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಪಕ್ಷದ ಮಾಧ್ಯಮ ವಕ್ತಾರ ಪ್ರಭಾಕರ ಶಿಂಧೆ ಇನ್ನಿತರರು ಉಪಸ್ಥಿತರಿದ್ದರು.

Translate »