ಕುಮಟಳ್ಳಿಗೆ ಅನ್ಯಾಯವಾದರೆ ಸಚಿವ ಸ್ಥಾನ ತೊರೆಯುತ್ತೇನೆ ರಮೇಶ್ ಜಾರಕಿಹೊಳಿ ಹೊಸ ಬಾಂಬ್
ಮೈಸೂರು

ಕುಮಟಳ್ಳಿಗೆ ಅನ್ಯಾಯವಾದರೆ ಸಚಿವ ಸ್ಥಾನ ತೊರೆಯುತ್ತೇನೆ ರಮೇಶ್ ಜಾರಕಿಹೊಳಿ ಹೊಸ ಬಾಂಬ್

February 23, 2020

ಬೆಂಗಳೂರು, ಫೆ.22(ಕೆಎಂಶಿ)-ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಅನ್ಯಾಯವಾದರೆ ತಾನು ಕೂಡಾ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡುತ್ತ, ಬರುವ ದಿನಗಳಲ್ಲಿ ಕುಮಟಳ್ಳಿ ಅವರಿಗೆ ದೊಡ್ಡ ಹುದ್ದೆ ಸಿಗಲಿದೆ ಎಂಬ ವಿಶ್ವಾಸವಿದೆ. ಮಹೇಶ ಕುಮಟಳ್ಳಿಗೆ ಮಂತ್ರಿ ಸ್ಥಾನ ನೀಡಬೇಕೆಂದು ನಾನು ಮೊದಲಿನಿಂದಲೂ ಒತ್ತಾಯ ಮಾಡುತ್ತಿದ್ದೇನೆ. ಅವರ ವಿಷಯದಲ್ಲಿ ನಾನು ಅನ್ಯಾಯ ಮಾಡಿಲ್ಲ. ಅವರಿಗೆ ಅನ್ಯಾಯವಾದರೆ, ನನಗೂ ಅಧಿಕಾರ ಬೇಡ ಎಂದರು.

Translate »