ಕಾಂಗ್ರೆಸ್‍ನಿಂದ ರಮೇಶ್ ಕುಮಾರ್, ಬಿಜೆಪಿಯಿಂದ ಸುರೇಶ್‍ಕುಮಾರ್ ಸ್ಪರ್ಧೆ
ಮೈಸೂರು

ಕಾಂಗ್ರೆಸ್‍ನಿಂದ ರಮೇಶ್ ಕುಮಾರ್, ಬಿಜೆಪಿಯಿಂದ ಸುರೇಶ್‍ಕುಮಾರ್ ಸ್ಪರ್ಧೆ

May 25, 2018

ಬೆಂಗಳೂರು: ವಿಧಾನಸಭಾ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‍ನ ಮಾಜಿ ಸಚಿವ ರಮೇಶ್‍ಕುಮಾರ್, ಬಿಜೆಪಿಯ ಹಿರಿಯ ಸದಸ್ಯ ಸುರೇಶ್ ಕುಮಾರ್ ಪೈಪೋಟಿ ನಡೆಸಿದ್ದಾರೆ.

ಸಭಾಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕಡೇ ದಿನವಾದ ಇಂದು ಕಾಂಗ್ರೆಸ್, ಬಿಜೆಪಿಯ ಸದಸ್ಯರು ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಾಳೆ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಾಡು ವುದಕ್ಕೂ ಮುನ್ನವೇ ಸಭಾಧ್ಯಕ್ಷರ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿಯಾಗಿ ರಮೇಶ್‍ಕುಮಾರ್ ಕಣಕ್ಕಿಳಿದಿರುವುದರಿಂದ ಅವರ ಆಯ್ಕೆ ಬಹುತೇಕ ಖಚಿತ. ವಿಧಾನಸಭೆಯಲ್ಲಿ ಮೈತ್ರಿಕೂಟ 117 ಸದಸ್ಯರನ್ನು ಹೊಂದಿದ್ದರೆ, ಬಿಜೆಪಿ 104 ಸದಸ್ಯರನ್ನು ಹೊಂದಿದೆ. ಚುನಾವಣಾ ಸಂದರ್ಭದಲ್ಲಿ ಯಾವ ಪಕ್ಷದ ಅಭ್ಯರ್ಥಿ ಹೆಚ್ಚು ಮತ ಪಡೆಯು ತ್ತಾರೋ ಅವರು ಸಭಾಧ್ಯಕ್ಷರಾಗಿ ಆಯ್ಕೆಗೊಳ್ಳಲಿದ್ದಾರೆ.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಸುರೇಶ್ ಕುಮಾರ್, ‘ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆಯಂತೆ ನಾಮಪತ್ರ ಸಲ್ಲಿಸಿದ್ದು, ಸಂಖ್ಯಾ ಬಲದ ಮೇಲೆ ಗೆಲ್ಲುವ ವಿಶ್ವಾಸದಲ್ಲಿದ್ದೇನೆ’. ನಮಗೆ ಸಂಖ್ಯಾ ಬಲವಿದೆ.

ನಾಳೆವರೆಗೂ ಕಾದು ನೋಡೋಣ ಏನಾಗುತ್ತೆ ಅಂತಾ ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಾಂಗ್ರೆಸ್‍ನ ಹಿರಿಯ ಶಾಸಕ ರಮೇಶ್ ಕುಮಾರ್ ಇದೇ ವಿಶ್ವಾಸ ವ್ಯಕ್ತಪಡಿಸಿದರು. ರಮೇಶ್‍ಕುಮಾರ್ ಈ ಹಿಂದೆ ಐದು ವರ್ಷಗಳ ಕಾಲ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವವಿದೆ. “ಕಾನೂನಿನ ಜ್ಞಾನವಿದೆ. ಬಿಜೆಪಿಯವರು ನಾಮಪತ್ರ ಸಲ್ಲಿಸಿರುವ ವಿಷಯ ಗೊತ್ತಾಯಿತು. ಅವರು ನಾಮಪತ್ರ ಹಿಂಪಡೆದುಕೊಳ್ಳುತ್ತಾರೆಂಬ ವಿಶ್ವಾಸವಿದೆ. ಚುನಾವಣೆ ನಡೆದರೆ ನಾವೇ ಗೆಲುವು ಸಾಧಿಸುವುದು ನಿಶ್ಚಿತ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

Translate »