ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಆರೋಪಿಗೆ ನಗರದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದೆ.
ಮಾಡ್ರಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅದೇ ಊರಿನ ಗೋಪಿ ಅಲಿಯಾಸ್ ಗೋಪಾ ಲಕೃಷ್ಣ ಎಂಬಾತ ಬಾಲಕಿಯನ್ನು ಪುಸಲಾ ಯಿಸಿ ಅಪಹರಿಸಿ ಅತ್ಯಾಚಾರ ಎಸಗಿದ್ದಾನೆಂದು ಬಾಲಕಿಯ ತಂದೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಫೋಕ್ಸೋ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳ ಲಾಗಿತ್ತು. ಆರೋಪಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ. ಈ ಜಾಮೀನು ಅರ್ಜಿ ಯನ್ನು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶ ಜಿ.ಬಸವರಾಜ ಅವರು ಸೆ.1ರಂದು ತಿರಸ್ಕರಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಯೋಗೇಶ್ ವಾದ ಮಂಡಿಸಿದ್ದರೆಂದು ಪ್ರಕಟಣೆ ತಿಳಿಸಿದೆ.