ಅಪ್ರಾಪ್ತೆ ಅತ್ಯಾಚಾರ, ಕೊಲೆ ಪ್ರಕರಣ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಡಿವೈಎಸ್ಪಿ ಕಚೇರಿಗೆ ಮುತ್ತಿಗೆ
ಮೈಸೂರು

ಅಪ್ರಾಪ್ತೆ ಅತ್ಯಾಚಾರ, ಕೊಲೆ ಪ್ರಕರಣ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಡಿವೈಎಸ್ಪಿ ಕಚೇರಿಗೆ ಮುತ್ತಿಗೆ

November 19, 2018

ನಂಜನಗೂಡು: ಅಪ್ರಾಪ್ತೆ ಮೇಲೆ ಅತ್ಯಾ ಚಾರವೆಸಗಿ ಕೊಲೆ ಮಾಡಿರುವ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ದಲಿತಪರ ಸಂಘಟನೆಗಳು ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ನಗರದ ಡಿವೈಎಸ್ಪಿ ಕಚೇರಿಯಲ್ಲಿ ಜಮಾವಣೆ ಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿದರು.

ಇದೇ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಮಲ್ಲಹಳ್ಳಿ ನಾರಾಯಣ ಮಾತನಾಡಿ, ರಾಜ್ಯದಲ್ಲಿ ದಾನಮ್ಮಳ ಪ್ರಕರಣದಂತೆ ನಂಜನಗೂಡು ನಗರ ದಲ್ಲೂ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದಿರುವುದು ಮನುಕುಲವೇ ತಲೆ ತಗ್ಗಿಸುವಂತಹ ಪ್ರಕರಣವಾಗಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದೊಂದು ಉತ್ತಮ ನಿದರ್ಶನವಾಗಿದೆ. ನಗರದಾದ್ಯಂತ ಕಳ್ಳತನ ಸೇರಿದಂತೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್ ಇಲಾಖೆ ಇದ್ದು ಇಲ್ಲದಂತಾಗಿದೆ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಅಕ್ರಮವಾಗಿ ಬಾಂಗ್ಲಾ, ಬಿಹಾರದ ವಲಸಿಗರ ಸಂಖೆÉ್ಯ ಹೆಚ್ಚಾಗುತ್ತಿದ್ದು, ಅಲ್ಲಿನ ಯುವಕರ ಉಪಟಳ ಹದ್ದು ಮೀರುತ್ತಿದ್ದರೂ ಪೊಲೀಸರು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಅಲ್ಲದೆ ಅಪ್ರಾಪ್ತ ಬಾಲಕಿಯ ಅತ್ಯಾ ಚಾರ, ಕೊಲೆ ನಡೆದು 3 ದಿನವಾದರೂ ಆರೋಪಿಗಳನ್ನು ಬಂಧಿಸಿಲ್ಲ. ಈಕೂಡಲೆ ಆರೋಪಿಗಳನ್ನು ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು.

ಈ ಸಂಬಂಧ ಡಿವೈಎಸ್ಪಿ ಮಲ್ಲಿಕ್ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ದಸಂಸ ಮುಖಂಡ ರಾದ ಚುಂಚನಹಳ್ಳಿ ಮಲ್ಲೇಶ್, ಬೊಕ್ಕಹಳ್ಳಿ ಮಹದೇವಸ್ವಾಮಿ, ಸುರೇಶ್, ನಾಗೇಂದ್ರ, ಕೃಷ್ಣಮೂರ್ತಿ, ಮಂಜು, ಸಿದ್ದು, ಸಿದ್ದರಾಜು, ಹಗಿನವಾಳು ಚಿಕ್ಕಣ್ಣ ಸೇರಿದಂತೆ ಹಲವಾರು ಪ್ರಮುಖರಿದ್ದರು.

Translate »