ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ
ಮೈಸೂರು

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ

February 21, 2019

ಮೈಸೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ವೆಸಗಿದ ವ್ಯಕ್ತಿಗೆ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 31 ಸಾವಿರ ರೂ. ದಂಡ ವಿಧಿಸಿ ಬುಧವಾರ ತೀರ್ಪು ಪ್ರಕಟಿಸಿದೆ.

ಜೆಪಿ ನಗರದ ನಾಚನಹಳ್ಳಿ ಪಾಳ್ಯದ ನಿವಾಸಿ ಮಣಿ(35) ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ಮನೆಯೊಂದರಲ್ಲಿ ವಾಸವಿದ್ದ ಅಪ್ರಾಪ್ರೆಯನ್ನು ಹೆದರಿಸಿ, ಪ್ರತಿ ದಿನ ರಾತ್ರಿ ಅತ್ಯಾಚಾರವೆಸಗುತ್ತಿದ್ದ.

ಕಳೆದ 2017ರ ನ.7 ರಂದು ಬಾಲಕಿಯು ಸರ್ಕಾರಿ ಬಾಲ ಮಂದಿರ ದಲ್ಲಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಸರಸ್ವತಿಪುರಂ ಠಾಣೆ ಪೆÇಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲ ಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ ಕಾರಿ ಅಭಿಯೋಜಕ ಬಿ.ಸಿ.ಶಿವರುದ್ರ ಸ್ವಾಮಿ ವಾದ ಮಂಡಿಸಿದ್ದರು.

Translate »