ಸೋದರ ಮಾವನೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಮೈಸೂರು

ಸೋದರ ಮಾವನೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

June 13, 2018

ಮೈಸೂರು: ಸೋದರ ಮಾವನೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿರುವ ಘಟನೆ ಮೈಸೂರಿನ ಲಕ್ಷ್ಮೀಪುರಂ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಮೈಸೂರಿನ ಸರಸ್ವತಿಪುರಂ ನಿವಾಸಿ ರಮೇಶ(23) ಎಂಬುವನೇ ತನ್ನ ಅಕ್ಕನ ಮಗಳು, ಹದಿನೇಳು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿರುವ ಯುವಕ.

ಕಾಲೇಜಿಗೆ ಡ್ರಾಪ್ ಮಾಡುವುದಾಗಿ ಕರೆತಂದು ಲಕ್ಷ್ಮೀಪುರಂ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಅತ್ಯಾಚಾರ ವೆಸಗಿ ಆತ ಪರಾರಿಯಾಗಿದ್ದಾನೆ ಎಂದು ಬಾಲಕಿ ಪೋಷಕರು ದೂರು ನೀಡಿದ್ದಾರೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕೊಂಡಿರುವ ಲಕ್ಷ್ಮೀ ಪುರಂ ಠಾಣೆ ಇನ್ಸ್‍ಪೆಕ್ಟರ್ ಮಹದೇವಶೆಟ್ಟಿ ಅವರು, ತಲೆಮರೆಸಿಕೊಂಡಿರುವ ರಮೇಶನ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Translate »