ಸೋಮವಾರಪೇಟೆ: ರಥ ಸಪ್ತಮಿ ಅಂಗವಾಗಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ಸಮೀಪದ ದೊಡ್ಡಮಳ್ತೆ ಗ್ರಾಮದಲ್ಲಿರುವ ಐತಿಹಾಸಿಕ ಹೊನ್ನಮ್ಮನ ಕೆರೆ ದಡದಲ್ಲಿ 108 ಸೂರ್ಯ ನಮಸ್ಕಾರ ಮಾಡಲಾಯಿತು.
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಿಕ್ಷಕಿ ರಾಗಿಣಿ ಮಾರ್ಗ ದರ್ಶನದಲ್ಲಿ ಸಂಸ್ಥೆಯ ಕಾರ್ಯಕರ್ತರು ಹಾಗೂ ವಿವಿಧ ಸಂಘ ಟನೆಗಳ ಪದಾಧಿಕಾರಿಗಳು ಬೆಳಗ್ಗೆ 6 ರಿಂದ 7 ಗಂಟೆಯವರೆಗೆ 108 ಸೂರ್ಯ ನಮಸ್ಕಾರ ಮಾಡಿದರು. ಈ ಸಂದರ್ಭ ಜಿಪಂ ಸದಸ್ಯ ಬಿ.ಜೆ. ದೀಪಕ್, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಕಾರ್ಯ ಕರ್ತರಾದ ಮೃತ್ಯುಂಜಯ, ವಿಜಯ್, ಪ್ರಮುಖರಾದ ಗೌಡಳ್ಳಿ ಸುನಿಲ್, ಕೊಮಾರಪ್ಪ, ಕವಿತ, ಮೇನಕ, ಶ್ರೀನಿವಾಸ್, ಸಂತೋಷ್, ಭರತ್ ಸೇರಿದಂತೆ ಇತರರು ಭಾಗವಹಿಸಿದ್ದರು.