ನೀತಿ ಸಂಹಿತೆಯಿಂದ ಅಭಿವೃದ್ಧಿ ಕುಂಠಿತ: ರವೀಂದ್ರ ಶ್ರೀಕಂಠಯ್ಯ
ಮಂಡ್ಯ

ನೀತಿ ಸಂಹಿತೆಯಿಂದ ಅಭಿವೃದ್ಧಿ ಕುಂಠಿತ: ರವೀಂದ್ರ ಶ್ರೀಕಂಠಯ್ಯ

December 17, 2019

ಶ್ರೀರಂಗಪಟ್ಟಣ, ಡಿ.16(ವಿನಯ್ ಕಾರೇಕುರ)- ಸಾರ್ವತ್ರಿಕ ಹಾಗೂ ಉಪ ಚುನಾವಣೆಗಳ ನೀತಿ ಸಂಹಿತೆಯಿಂದ ಕ್ಷೇತ್ರ ದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತ ವಾಗುತ್ತಿದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ತಾಪಂನಲ್ಲಿರುವ ಶಾಸಕರ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಸಾರ್ವ ಜನಿಕರ ಕುಂದುಕೊರತೆ ಸಭೆಯನ್ನು ದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲೆಯ ಅಭಿವೃದ್ಧಿಗೆ ಸಿಎಂ ಸ್ಪಂದಿಸಲಿ: ಜಿಲ್ಲೆಯ ಸುಪುತ್ರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಂಡ್ಯ ಜಿಲ್ಲೆ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಆಗ್ರಹಿಸಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಬಿಡು ಗಡೆಯಾಗಿದ್ದ ಯೋಜನೆ ಗಳನ್ನು ಬಿಜೆಪಿ ಸರ್ಕಾರ ತಡೆ ಹಿಡಿದಿದ್ದು ಅವುಗಳನ್ನು ತ್ವರಿತವಾಗಿ ಬಿಡುಗಡೆಗೊಳಿಸಬೇಕು ಎಂದರು.

ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ವೇಳೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಹೆಚ್ಚಿನ ಅನು ದಾನ ಬಿಡುಗಡೆ ಮಾಡಿದ್ದರು. ಪ್ರಸ್ತುತ ರೈತರ ಬದುಕು ಅತಂತ್ರವಾಗಿದ್ದು, ಸಕ್ಕರೆ ಕಾರ್ಖಾನೆಗಳ ಪುನಶ್ಚೇತನ ಕ್ರಮ ಕೈಗೊಂಡು ಕೂಡಲೇ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದರು.

ಶ್ರೀರಂಗಪಟ್ಟಣ ಐತಿಹಾಸಿಕವಾಗಿ ಹೆಚ್ಚಿನ ಮಹತ್ವ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇಲ್ಲಿನ ಪ್ರವಾಸೋದ್ಯಮವನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಯೋಜನೆ ಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ: ಶಾಸಕರಾದ ಸುರೇಶ್‍ಗೌಡ, ರವೀಂದ್ರ ಶ್ರೀಕಂಠಯ್ಯ ಬಿಜೆಪಿ ಸೇರುವ ಸಂಬಂಧ ಮಾಧ್ಯಮದವರÀ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಾರ್ವಜನಿಕರ ಊಹಾ ಪೋಹಗಳಿಗೆ ಕಿವಿಗೊಡಬೇಡಿ. ನಾವು ಗಳು ಅಧಿಕೃತವಾಗಿ ಹೇಳಿದರಷ್ಟೇ ಅದಕ್ಕೆ ಹೆಚ್ಚಿನ ಮಹತ್ವ. ಸದ್ಯ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎನ್ನುವ ಮೂಲಕ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದರು.

 

 

 

Translate »