ಯಾವುದೇ ತ್ಯಾಗಕ್ಕೂ ಸಿದ್ಧ: ಜಿಟಿಡಿ
ಮೈಸೂರು

ಯಾವುದೇ ತ್ಯಾಗಕ್ಕೂ ಸಿದ್ಧ: ಜಿಟಿಡಿ

July 8, 2019

ಬೆಂಗಳೂರು: ರಾಜ್ಯದ ಹಿತದೃಷ್ಟಿಯಿಂದ ತಾವು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ತಿಳಿಸಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪಕ್ಷದ ವರಿಷ್ಠರು ಹೇಳಿದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ ಹಿತದೃಷ್ಟಿಯಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸಿದ್ದರಾಮಯ್ಯ ಅಥವಾ ಬೇರೆ ಯಾರನ್ನೂ ಮುಖ್ಯಮಂತ್ರಿ ಮಾಡಿದರೂ ಕೂಡ ತಾವು ಒಪ್ಪುವುದಾಗಿ ಹೇಳಿದರು. ತನಗೆ ಮತ ನೀಡಿ ಗೆಲ್ಲಿಸಿರುವ ಚಾಮುಂ ಡೇಶ್ವರಿ ಕ್ಷೇತ್ರದ ಮತದಾರರಿಗೆ ದ್ರೋಹವೆಸಗಿ ಜೆಡಿಎಸ್ ಬಿಟ್ಟು ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದ ಅವರು, ಸರ್ಕಾರ ಉಳಿಸಿ ಕೊಳ್ಳುವುದಕ್ಕೆ ಮೊದಲ ಆಧ್ಯತೆ ನೀಡಲಾಗುವುದು. ರಾಜೀನಾಮೆ ನೀಡಿ ಮುಂಬೈಗೆ ಹೋಗಿರುವ ಅತೃಪ್ತರು, ವಾಪಸ್ ಬರುವ ನಿರೀಕ್ಷೆ ಇದೆ. ಸರ್ಕಾರ ಉಳಿಯುತ್ತದೆ ಎಂಬ ವಿಶ್ವಾಸವೂ ತಮಗಿದೆ ಎಂದರು.

Translate »