ಕೇಂದ್ರ ಸರ್ಕಾರದ ಸಾಧನೆ ತಿಳಿಸಲು ಸಲಹೆ
ಚಾಮರಾಜನಗರ

ಕೇಂದ್ರ ಸರ್ಕಾರದ ಸಾಧನೆ ತಿಳಿಸಲು ಸಲಹೆ

June 11, 2018

ಚಾಮರಾಜನಗರ:  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳಿಂದ ಆಗುತ್ತಿರುವ ಅನು ಕೂಲವನ್ನು ಪಕ್ಷದ ಪ್ರತಿಯೊಬ್ಬ ಮುಖಂ ಡರು ಹಾಗೂ ಕಾರ್ಯಕರ್ತರು ಸಾಮಾನ್ಯ ಜನರಿಗೆ ತಿಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಕರೆ ನೀಡಿದರು.

ನಗರದ ಮಹಾವೀರ ಭವನದಲ್ಲಿ ಭಾನು ವಾರ ಬಿಜೆಪಿಯಿಂದ ಆಯೋಜಿಸಿದ್ದ ಕೇಂದ್ರ ಸರ್ಕಾರದ 4 ವರ್ಷಗಳ ಸಾಧ ನೆಯ ಚಿಂತನಾ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಯಲ್ಲಿ ತಮ್ಮನ್ನು ತಾವು ಸಂಪೂರ್ಣ ತೊಡಗಿಸಿ ಕೊಂಡಿದ್ದಾರೆ. ಹಲವು ಜನಪರ ಯೋಜ ನೆಗಳನ್ನು ಜಾರಿಗೊಳಿಸಿದ್ದಾರೆ. ಮುದ್ರ ಯೋಜನೆ, ಜನ್‍ಧನ್ ಕಾರ್ಯಕ್ರಮ, ರೈತರಿಗೆ ಫಸಲ ವಿಮಾ ಯೋಜನೆ, ಗ್ರಾಮ ಸಡಕ್ ಯೋಜನೆ, ಸ್ವಚ್ಛ ಭಾರತ್ ಮಿಷನ್, ಒಂದು ದೇಶ-ಒಂದು ತೆರಿಗೆ ನೀತಿ ಸೇರಿ ದಂತೆ ಹಲವು ಯೋಜನೆಗಳನ್ನು ಜಾರಿ ಗೊಳಿಸಿದ್ದಾರೆ. ಈ ಕಾರ್ಯಕ್ರಮಗಳಿಂದ ದೇಶಕ್ಕೆ ಹಾಗೂ ಸಾರ್ವಜನಿಕರಿಗೆ ಆಗು ತ್ತಿರುವ ಉಪಯೋಗದ ಬಗ್ಗೆ ಪಕ್ಷದ ಕಾರ್ಯಕರ್ತರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರಿಗೆ ತಿಳಿಸುವ ಮೂಲಕ ಪಕ್ಷವನ್ನು ತಳಮಟ್ಟದಿಂದ ಸದೃಢ ಗೊಳಿಸಬೇಕು ಎಂದು ಸಲಹೆ ನೀಡಿದರು.

ಕಳೆದ 4 ವರ್ಷದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಜಗತ್ತಿನ 145 ರಾಷ್ಟ್ರ ಗಳಿಗೆ ಭೇಟಿ ನೀಡಿದ್ದಾರೆ. ಈ ಮೂಲಕ ಭಾರತವನ್ನು ಜಾಗತಿಕ ಮಟ್ಟದಲ್ಲಿ ಗುರು ತಿಸುವಂತೆ ಮಾಡಿದ್ದಾರೆ. ಹಲವು ಮಹ ತ್ವದ ಒಪ್ಪಂದಗಳಿಗೆ ಸಹಿ ಮಾಡುವ ಮೂಲಕ ಭಾರತ ಮೂಂಚೂಣ ಗೆ ಬರುತ್ತಿದೆ. ಭಾರತ 2022ಕ್ಕೆ ಜಗತ್ತಿನಲ್ಲಿ ಅತ್ಯುನ್ನತ ಸ್ಥಾನಕ್ಕೆ ಏರಲಿದೆ ಎಂದು ಆರ್ಥಿಕ ತಜ್ಞರೇ ಹೇಳಿದ್ದಾರೆ. ಇದೆಲ್ಲದರ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದರು.

ನೋಟು ಅಮಾನ್ಯೀಕರಣ ಆದ ಬಳಿಕ ಭ್ರಷ್ಟಾಚಾರ ಮತ್ತು ಭಯೋತ್ಟಾದನೆ ಕಡಿಮೆ ಆಗಿದೆ. ಮೋದಿ ಅವರ ಆಳ್ವಿಕೆ ನೋಡಿದರೆ ದೇಶ ಮೂಂಚೂಣ ಗೆ ಬರು ವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 4ವರ್ಷದಲ್ಲಿ ಅತ್ಯುತ್ತಮ ಆಡಳಿತ ನಡೆ ಸುವ ಮೂಲಕ ಜನರ ಪ್ರೀತಿಗೆ ಪಾತ್ರವಾ ಗಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸಾರ್ವ ತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕ ಸಂಖ್ಯೆಯಲ್ಲಿ ಗೆಲುವು ಸಾಧಿಸಿ ರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣ, ಮಾಜಿ ಶಾಸಕಿ ಪರಿಮಳಾ ನಾಗಪ್ಪ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೂರೊಂದು ಶೆಟ್ಟಿ, ಮುಖಂಡ ರಾದ ನಾರಾಯಣ ಪ್ರಸಾದ್, ವೆಂಕಟ ರಮಣಸ್ವಾಮಿ ಸೇರಿದಂತೆ ಪಕ್ಷದ ಕಾರ್ಯ ಕರ್ತರು, ಮುಖಂಡರು ಹಾಜರಿದ್ದರು.

Translate »