ಕರ್ನಾಟಕದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವಾರ ಕಾಲ ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್
ಮೈಸೂರು

ಕರ್ನಾಟಕದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವಾರ ಕಾಲ ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್

August 7, 2020

ಬೆಂಗಳೂರು, ಆ.6-ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಮಲೆ ನಾಡು ಮತ್ತು ಕರಾವಳಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ರಾಜ್ಯ ದೆಲ್ಲೆಡೆ ಅಬ್ಬರಿಸುತ್ತಿ ರುವ ವರುಣ ಇನ್ನೂ ಒಂದು ವಾರ ತನ್ನ ಆರ್ಭಟವನ್ನು ತೋರಿ ಸಲಿದ್ದಾನೆ ಎಂದು ಭಾರತೀಯ ಹವಾ ಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾ ಗುವ ಸಾಧ್ಯತೆಯಿದೆ. 20 ಸೆಂ.ಮೀಗಿಂತಲೂ ಹೆಚ್ಚು ಮಳೆಯಾಗಲಿದೆ. ಇದರಿಂದಾಗಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಇನ್ನು, ಬೆಳಗಾವಿ ಜಿಲ್ಲೆಯಲ್ಲಿ ಕೆಲವು ಕಡೆ ಇಂದು ಭಾರೀ ಮಳೆಯ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆ.7ರಿಂದ ಆ.10ರವ ರೆಗೆ ಭಾರೀ ಹಾಗೂ ಅತಿ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಹೆಚ್ಚು ಮಳೆಯಾಗಲಿದೆ. ದಕ್ಷಿಣ ಒಳನಾಡು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಆ.10ರವರೆಗೆ ಭಾರೀ ಮಳೆ ನಿರೀಕ್ಷೆಯಿದ್ದು ಯೆಲ್ಲೋ ಅಲರ್ಟ್ ಘೋಷಿಸ ಲಾಗಿದೆ. ಇನ್ನು, ಕರಾವಳಿ ಭಾಗದಲ್ಲಿ ಆ.10ರವ ರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರ ತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಲ ವಾದ ಗಾಳಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕಿಳಿ ಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಲೇ ಇದ್ದು, ಅದು ಮುಂದುವರೆಯಲಿದೆ ಎಂದು ಇಲಾಖೆ ಹೇಳಿದೆ.