ರಾಜ್ಯದಲ್ಲಿ ತಗ್ಗಿದ ಕೊರೊನಾ ಅಬ್ಬರ: ಇಂದು 8,005 ಡಿಸ್ಚಾರ್ಜ್, 5,018 ಪಾಸಿಟಿವ್!
ಮೈಸೂರು

ರಾಜ್ಯದಲ್ಲಿ ತಗ್ಗಿದ ಕೊರೊನಾ ಅಬ್ಬರ: ಇಂದು 8,005 ಡಿಸ್ಚಾರ್ಜ್, 5,018 ಪಾಸಿಟಿವ್!

October 20, 2020

ಬೆಂಗಳೂರು, ಅ.19- ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದ್ದು ಇಂದು 5,018 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,70,604ಕ್ಕೆ ಏರಿಕೆಯಾಗಿದೆ.

ಕೊರೊನಾ ವೈರಸ್‍ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 64 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟ ವರ ಸಂಖ್ಯೆ 10,542ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು ಬೆಂಗಳೂರು ನಗರವೊಂದರಲ್ಲೇ ಅತೀ ಹೆಚ್ಚು ಅಂದರೆ 2,481 ಹೊಸ ಪ್ರಕರಣ ಗಳು ವರದಿಯಾಗಿದ್ದು, ಇದರೊಂ ದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,10,021ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 17 ಮಂದಿ ಕೊರೊನಾ ದಿಂದ ಮೃತಪಟ್ಟಿದ್ದಾರೆ. ಇಂದು 8,005 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 6,53, 829ಕ್ಕೆ ಏರಿಕೆಯಾಗಿದೆ. 1,06,214 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 945 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

 

Translate »