ಎಸ್‍ಸಿ, ಎಸ್‍ಟಿಗೆ ಮೀಸಲಾತಿ ಹೆಚ್ಚಳ ಸಂಬಂಧ  ಅ.7ಕ್ಕೆಸರ್ವಪಕ್ಷಸಭೆ
News

ಎಸ್‍ಸಿ, ಎಸ್‍ಟಿಗೆ ಮೀಸಲಾತಿ ಹೆಚ್ಚಳ ಸಂಬಂಧ ಅ.7ಕ್ಕೆಸರ್ವಪಕ್ಷಸಭೆ

October 2, 2022

ಬೆಂಗಳೂರು, ಅ.1(ಕೆಎಂಶಿ)-ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಒಳ ಮೀಸಲಾತಿ ನೀಡುವ ಸಂಬಂಧ ಚರ್ಚಿ ಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಕ್ಟೋಬರ್ 7ರ ಶುಕ್ರವಾರ ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ಮುಖ್ಯ ಮಂತ್ರಿಗಳ ಗೃಹ ಕಚೇರಿ ಕೃಷ್ಣಾ ದಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಡೆಯ ಲಿದ್ದು, ಸಭೆಯಲ್ಲಿ ಪರಿಶಿಷ್ಟ ಜಾತಿ, ಪಂಗಡ ದವರಿಗೆ ಒಳಮೀಸಲಾತಿ ನೀಡುವ ಕುರಿ ತಂತೆ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರು ನೀಡಿರುವ ವರದಿಯ ಮೇಲೆ ಚರ್ಚೆ ನಡೆಯಲಿದೆ. ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷಗಳ ನಾಯಕರು ಹಾಗೂ ವಾಲ್ಮೀಕಿ ಸಮುದಾಯದ ವಿಧಾನಸಭಾ ಮತ್ತು ಪರಿಷತ್ತಿನ ಸದಸ್ಯರು, ಕಾನೂನು ತಜ್ಞರು ಭಾಗವಹಿಸಲಿದ್ದಾರೆ. ವಿಧಾನಭೆಯ ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ, ವಿಧಾನಪರಿ ಷತ್ತಿನ ಪ್ರತಿಪಕ್ಷದ ನಾಯಕ ಬಿ.ಕೆ.ಹರಿ ಪ್ರಸಾದ್ ಮತ್ತು ಪರಿ ಷತ್ತಿನ ಸಭಾ ನಾಯಕ, ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ಇನ್ನಿತರ ಮುಖಂ ಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪರಿ ಶಿಷ್ಟ ಜಾತಿ, ಪಂಗಡಗಳ  ಮೀಸಲಾತಿಯನ್ನು ಹೆಚ್ಚಳ ಮಾಡಬೇಕು ಎಂಬ ಕೂಗು ಹೆಚ್ಚಾದ ಹಿನ್ನೆಲೆಯಲ್ಲಿ ನ್ಯಾಯ ಮೂರ್ತಿ ನಾಗಮೋಹನದಾಸ್ ಸಮಿತಿಯನ್ನು ಸರ್ಕಾರ ರಚಿಸಿತ್ತು. ಅದರನುಸಾರ ವ್ಯಾಪಕ ಚರ್ಚೆ, ಅಧ್ಯಯನ ನಡೆಸಿದ ನಾಗ ಮೋಹನದಾಸ್ ಸಮಿತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಕಲ್ಪಿಸಲಾಗಿರುವ ಮೀಸಲಾತಿಯ ಪ್ರಮಾಣ, ಅವುಗಳ ಜನಸಂಖ್ಯೆಗಿಂತ ಕಡಿಮೆ ಎಂಬುದನ್ನು ಎತ್ತಿ ತೋರಿಸಿತ್ತು. ಪರಿಶಿಷ್ಟ ಜಾತಿಗೆ ಈಗ ನೀಡಲಾಗುತ್ತಿರುವ ಮೀಸಲಾತಿಯ ಪ್ರಮಾಣವನ್ನು ಶೇಕಡಾ ಹದಿನಾಲ್ಕರಿಂದ ಹದಿನೇಳಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ ಪಂಗಡಕ್ಕೆ ನೀಡಲಾಗುತ್ತಿರುವ ಮೀಸಲಾತಿ ಈಗ ಶೇಕಡಾ ಮೂರರಷ್ಟಿದ್ದು, ಅದನ್ನು ಶೇ.7ಕ್ಕೆ ಏರಿಸಬೇಕು ಎಂದು ಶಿಫಾರಸು ಮಾಡಿತ್ತು. ಆದರೆ ಈ ವರದಿಯನ್ನು ಜಾರಿ ಮಾಡಲು ಸರ್ಕಾರಗಳು ಮನಸ್ಸು ಮಾಡಲಿಲ್ಲ. ಒಟ್ಟಾರೆ ಮೀಸಲಾತಿಯ ಪ್ರಮಾಣ ಶೇ. 50 ಮೀರಬಾರದು ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದ್ದು, ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದು ಹೇಗೆ ಎಂಬುದು ಸರ್ಕಾರಗಳಿಗೆ ಬಗೆಹರಿಯದ ಸಮಸ್ಯೆಯಾಗಿತ್ತು.

ಆದರೆ ಪರಿಶಿಷ್ಟರ ಮೀಸಲಾತಿಗೆ ಒತ್ತಾಯಿಸಿ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಾ ಬಂದಿದ್ದವಲ್ಲದೆ, ವಾಲ್ಮೀಕಿ ಸಮುದಾಯದ ಸ್ವಾಮೀಜಿ ಧರಣಿ ಕುಳಿತಿದ್ದರು. ಇಂತಹ ಪ್ರತಿಭಟನೆ, ಧರಣಿಗಳಿಗೆ ಮಣಿದ ಸರ್ಕಾರ ಸರ್ವಪಕ್ಷ ಸಭೆ ಕರೆದು ಈ ಕುರಿತು ಚರ್ಚಿಸುವುದಾಗಿ ವಿಧಾನಸಭೆಯಲ್ಲಿ ಭರವಸೆ ನೀಡಿತ್ತು. ಅಷ್ಟೇ ಅಲ್ಲ, ಮುಖ್ಯ ಮಂತ್ರಿ ಸೇರಿದಂತೆ ಪಕ್ಷಾತೀತವಾಗಿ ಎಲ್ಲಾ ನಾಯಕರು ಮೀಸಲಾತಿ ಹೆಚ್ಚಳಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟು ಕೊಂಡು ಆಡಳಿತಾರೂಢ ಬಿಜೆಪಿ ರಾಜಕೀಯ ಲಾಭ ಪಡೆದುಕೊಳ್ಳಲು ಎಸ್‍ಟಿ ಸಮುದಾಯದ ಮೀಸಲಾತಿಯನ್ನು ಹೆಚ್ಚಳ ಮಾಡುವ ಎಲ್ಲಾ ಸಾಧ್ಯತೆಯು ಹೆಚ್ಚಿದೆ.

Translate »