ಜನ ವಿರೋಧಿ ಕಾಯ್ದೆಗಳ ತಿರಸ್ಕರಿಸಿ
ಮೈಸೂರು

ಜನ ವಿರೋಧಿ ಕಾಯ್ದೆಗಳ ತಿರಸ್ಕರಿಸಿ

September 29, 2020

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊಸ ದಾಗಿ ಜಾರಿಗೆ ತರುತ್ತಿರುವ ಜನ ವಿರೋಧಿ ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ತಿರಸ್ಕರಿಸ ಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನೂತನ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವ ವಿಚಾರ ವಾಗಿ ಸೋಮವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ.ಶಿವ ಕುಮಾರ್, ನಾವು ರಾಜ್ಯಪಾಲರಿಗೆ ಎರಡು ಮನವಿ ಸಲ್ಲಿಸಿದ್ದೇವೆ. ಭೂ ಸುಧಾರಣಾ, ಎಪಿಎಂಸಿ, ಕೈಗಾರಿಕಾ ವಿವಾದ ಕಾಯ್ದೆ ಸಂಬಂಧ ಸರಕಾರ ತೆಗೆದುಕೊಂಡಿರುವ ತೀರ್ಮಾನವನ್ನು ರಾಜ್ಯಪಾಲರ ಮುಂದೆ ಪ್ರಶ್ನಿಸಲಾಗಿದೆ. ಬಂಡವಾಳಶಾಹಿಗಳಿಗೆ ಸಹಾಯ ಮಾಡಲು ಸರ್ಕಾರ ಈ ಕ್ರಮಗಳನ್ನು ತೆಗೆದುಕೊಂಡಿದೆ. ಇಂತಹ ರೈತ ವಿರೋಧಿ ಕಾಯ್ದೆ ಇಲ್ಲದೆ ರಾಜ್ಯವನ್ಮು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲವೇ? ಕೇಂದ್ರ ಸರ್ಕಾರ ನಮ್ಮ ಮೇಲೆ ಒತ್ತಡ ಹೇರಲು ಮೂರು ಕಾನೂನು ತಂದಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಸಿಎಂ ಆಗಿದ್ದಾಗ ಈ ರೀತಿ ಕಾನೂನು ಮಾಡಲು ಸಾಧ್ಯವಿಲ್ಲ ಎಂದು ಪತ್ರ ಬರೆದಿದ್ದರು. ಆದರೆ ಈಗ ಅವರೇ ತಮ್ಮ ಮಾತು ಮುರಿದು, ಈ ರೈತ ವಿರೋಧಿ ಕಾನೂನು ಮಾಡಲು ಮುಂದಾಗಿದ್ದಾರೆ. ಮೋದಿ ಅವರ ಕುರ್ಚಿ ಬದಲಾದಂತೆ ಅವರ ತೀರ್ಮಾನ ಕೂಡ ಬದಲಾಗಿದೆ.

ಸ್ವಾಭಿಮಾನ ಬಿಡಲ್ಲ: ಇದಕ್ಕೂ ಮುನ್ನ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಸಂಸದ ತೇಜಸ್ವಿ ಸೂರ್ಯ ಅವರು, ‘ಬೆಂಗಳೂರು ಭಯೋ ತ್ಪಾದಕರ ತಾಣವಾಗಿದೆ’ ಎಂದು ನಿನ್ನೆ ನೀಡಿರುವ ಹೇಳಿಕೆಯನ್ನು ಕಟುವಾಗಿ ಟೀಕಿಸಿದರು. ಬೆಂಗ ಳೂರು ಭಯೋತ್ಪಾದಕರ ತಾಣ ವಾಗಿದೆ. ಹೀಗಾಗಿ ಬೆಂಗಳೂರಿ ನಲ್ಲಿ ಎನ್‍ಐಎ ಕಚೇರಿ ಆರಂ ಭಿಸಬೇಕು ಎಂದು ಗೃಹ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಇದು ಬೆಂಗಳೂರು ಹಾಗೂ ರಾಜ್ಯಕ್ಕೆ ಮಸಿ ಬಳಿಯುವ ಪ್ರಯತ್ನವಾಗಿದೆ. ಈತ ಬೆಂಗಳೂರನ್ನು ಕಟ್ಟಿಲ್ಲ. ನಮ್ಮ ನಾಯಕರುಗಳ ಪರಿಶ್ರಮ ದಿಂದ ಬೆಂಗಳೂರು ವಿಶ್ವಮಟ್ಟದ ಶಿಕ್ಷಣ, ಮಾಹಿತಿ ತಂತ್ರಜ್ಞಾನ ತಾಣ ವಾಗಿದೆ. ಇಲ್ಲಿಂದ ವಿಶ್ವಕ್ಕೆ ಇಂಜಿನಿ ಯರ್‍ಗಳು, ವೈದ್ಯರು ರವಾನೆ ಯಾಗಿದ್ದಾರೆಯೇ ಹೊರತು ಭಯೋ ತ್ಪಾದಕರಲ್ಲ. ಶೇ.34ರಷ್ಟು ಐಟಿ ರಫ್ತು ಬೆಂಗಳೂರಿನಿಂದ ಆಗುತ್ತಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭೂಮಿ ಪೂಜೆಗೆ ಬಂದ ಸಂದರ್ಭದಲ್ಲಿ, ‘ಇಷ್ಟು ದಿನಗಳ ಕಾಲ ವಿಶ್ವ ನಾಯಕರು ಮೊದಲು ದೆಹಲಿಗೆ ಬಂದು ನಂತರ ಬೇರೆ ನಗರಗಳಿಗೆ ಹೋಗುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಮೊದಲು ಬೆಂಗಳೂರಿಗೆ ಬಂದು, ನಂತರ ದೆಹಲಿಗೆ ಹೋಗುತ್ತಿದ್ದಾರೆ’ ಎಂದು ಹೇಳಿದ್ದರು.

 

 

Translate »