ಜುಲೈ ತಿಂಗಳು ತಮಿಳುನಾಡಿಗೆ 31 ಟಿಎಂಸಿ ನೀರು ಹರಿಸಬೇಕು
ಮೈಸೂರು

ಜುಲೈ ತಿಂಗಳು ತಮಿಳುನಾಡಿಗೆ 31 ಟಿಎಂಸಿ ನೀರು ಹರಿಸಬೇಕು

July 3, 2018

ನವದೆಹಲಿ: ಸುಪ್ರೀಂ ಕೋರ್ಟ್ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವ ಹಣಾ ಪ್ರಾಧಿಕಾರ ಸೋಮವಾರ ಕರ್ನಾ ಟಕಕ್ಕೆ ಸೂಚನೆ ನೀಡಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾದ ನಂತರ ಇಂದು ನಡೆದ ಮೊದಲ ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತು ಚರ್ಚೆ ನಡೆಸಿ, ಸುಪ್ರೀಂ ಆದೇಶದಂತೆ ಕರ್ನಾಟಕ ಈಗಾಗಲೇ ಜೂನ್ ತಿಂಗಳಿನಲ್ಲಿ ನಿಗದಿಗಿಂತ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಿದೆ. ಸುಮಾರು 2.5ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಿಡಲಾಗಿದೆ. ಹೀಗಾಗಿ ಕೇಂದ್ರ ಜಲ ಆಯೋಗ ದಿಂದ ಅಂಕಿ-ಅಂಶ ಪಡೆದು ನೀರನ್ನು ಬಿಡುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಕರ್ನಾಟಕ ತಿಳಿಸಿದೆ. ತಮಿಳುನಾಡು 34 ಟಿಎಂಸಿಗೆ ಮಾಡಿದ ಮನವಿಯನ್ನು ತಿರಸ್ಕರಿಸಿದ ರಾಜ್ಯದ ಪ್ರತಿನಿಧಿ ರಾಕೇಶ್ ಸಿಂಗ್, ನೀರು ಬಿಡಲು ಒಪ್ಪಿಗೆ ಸೂಚಿಸದೆ ಸಭೆಯಿಂದ ಹೊರ ಬಂದರು. ನ್ಯಾಯಬದ್ಧ ವಾಗಿ ಕರ್ನಾಟಕ ಜುಲೈ ತಿಂಗಳ ಪಾಲು 31.24 ಟಿಎಂಸಿ ನೀರನ್ನು ಹರಿಸಬೇಕು. ಆದರೆ 34 ಟಿಎಂಸಿ ನೀರನ್ನು ಕೇಳುವ ಮೂಲಕ ತಮಿಳುನಾಡು ಕಾಲುಕೆರೆದು ಜಗಳಕ್ಕೆ ನಿಂತಿದೆ ಎಂದರು. ಸಭೆಯಲ್ಲಿ ಚರ್ಚೆ ಬಳಿಕ ಮಾತನಾಡಿದ ಪ್ರಾಧಿಕಾರ ಅಧ್ಯಕ್ಷ ಮಸೂದ್ ಹುಸೇನ್, ಸುಪ್ರೀಂ ಕೋರ್ಟ್ 14.75 ಟಿಎಂಸಿ ನೀರನ್ನು ಕಡಿತಗೊಳಿಸಿತ್ತು. ಈಗ ಹರಿಸಬೇಕಾದ ನೀರಿನ ಪ್ರಮಾಣವನ್ನು ತಿಂಗಳುವಾರು ಹಂಚಿಕೆ ಮಾಡಿ ಮುಂದಿನ ಸಭೆಯಲ್ಲಿ ತಮಿಳುನಾಡಿಗೆ ಎಷ್ಟು ಪ್ರಮಾಣದ ನೀರು ಹರಿಸಬೇಕು ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದರು.

ಸಭೆಯಲ್ಲಿ ಏನು ಚರ್ಚೆ ಆಯ್ತು?: ನವದೆಹಲಿಯ ಕೇಂದ್ರ ಜಲ ಆಯೋಗ ಕಚೇರಿಯಲ್ಲಿ ಬೆಳಿಗ್ಗೆ ಹನ್ನೊಂದು ಗಂಟೆಗೆ ಆರಂಭಗೊಂಡ ಸಭೆಯಲ್ಲಿ ಪ್ರಾಧಿಕಾರದ ಅಧ್ಯಕ್ಷ ಮಸೂದ್ ಹುಸೇನ್ ನೇತೃತ್ವದಲ್ಲಿ ಕಾವೇರಿ ಕಣಿವೆಯ ರಾಜ್ಯದ ಹಾಗೂ ಕೇಂದ್ರ ಸರ್ಕಾರ ಪ್ರತಿನಿಧಿಗಳು ಭಾಗಿಯಾಗಿ ಐದು ಗಂಟೆಗಳ ಕಾಲ ಚರ್ಚೆ ನಡೆಸಿದರು. ಸಭೆ ಆರಂಭದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಕಾರ್ಯ ಚಟು ವಟಿಕೆ ಹಾಗೂ ನಿಯಮಾವಳಿಗಳನ್ನು ರೂಪಿಸುವ ಬಗ್ಗೆ ಚರ್ಚೆ ನಡೆಯಿತು. ಕಾವೇರಿ ನದಿಯ ಎಂಟು ಜಲಾಶಯಗಳ ನಿರ್ವ ಹಣೆ ಹಾಗೂ ಪ್ರಾಧಿಕಾರದಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳ ನಿಯೋಜನೆ, ಸಿಬ್ಬಂದಿಯ ಸೇವಾ ನಿಯಮಗಳು ರೂಪಿ ಸುವುದು ಪ್ರಾಧಿಕಾರದ ಕಾರ್ಯ ನಿರ್ವ ಹಣೆಗೆ ಅಗತ್ಯವಿರುವ ಹಣಕಾಸಿನ ಕ್ರೋಢೀ ಕರಣ, ಕಚೇರಿಗಾಗಿ ಸ್ಥಳ ನಿಯೋಜನೆ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.

ಮಾಹಿತಿ ಸಂಗ್ರಹ: ಕಾವೇರಿ ನದಿ ವ್ಯಾಪ್ತಿಯಲ್ಲಿರುವ ಕೇರಳದ ಬಾಣಾಸುರ ಸಾಗರ, ರಾಜ್ಯದ ಹೇಮಾವತಿ, ಕಬಿನಿ, ಹಾರಂಗಿ, ಕೃಷ್ಣರಾಜಸಾಗರ, ತಮಿಳುನಾಡಿನ ಭವಾನಿ, ಅಮರಾವತಿ ಮತ್ತು ಮೆಟ್ಟೂರು ಜಲಾಶಯಗಳ ಒಳ ಮತ್ತು ಹೊರ ಹರಿವಿನ ಮಾಹಿತಿ ಸಂಗ್ರಹ ಮಾಡಲಾಯಿತು. ನೀರಿನ ಬಳಕೆ ಸಂಗ್ರಹ ಸಾಮಥ್ರ್ಯ, ಮಳೆಯ ಪ್ರಮಾಣ,

ಬೆಳೆಯ ವ್ಯಾಪ್ತಿ ಮತ್ತು ಸ್ಥಳೀಯ ಹಾಗೂ ಕೈಗಾರಿಕಾ ಅಗತ್ಯತೆ ಈ ಸಮಿತಿಯಿಂದಲೇ ಕಾರ್ಯ ನಿರ್ವಹಿಸುವ ಕುರಿತು ಚರ್ಚೆ ನಡೆಯಿತು. ಜೂನ್ 1 ರಿಂದ ಜೂನ್ 30 ರವರೆಗೆ ಸಂಗ್ರಹವಾಗಿರುವ ನೀರಿನ ಪ್ರಮಾಣದ ಮಾಹಿತಿ ಪಡೆದ ಪ್ರಾಧಿಕಾರ, ಈ ಅವಧಿಯಲ್ಲಿ ಮಳೆಯ ಕೊರತೆ ಇದ್ದಲ್ಲಿ ಆ ಬಗ್ಗೆ ಚರ್ಚೆ ನಡೆಸಿ ಮಾಸಿಕ 10 ದಿನಗಳಂತೆ ಮೂರು ಭಾಗಗಳಲ್ಲಿ ಮಾಹಿತಿ ಸಂಗ್ರಹಿಸಿ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ಸೂಚಿಸುವ ನಿಟ್ಟಿನಲ್ಲಿ ಚರ್ಚೆ ನಡೆಯಿತು.

ತಮಿಳುನಾಡು ಕ್ಯಾತೆ ಏನು?: ಮೊದಲ ಸಭೆಯಲ್ಲೇ ತನ್ನ ಕ್ಯಾತೆ ಆರಂಭಿಸಿದ ತಮಿಳುನಾಡು ಜುಲೈ ತಿಂಗಳ ಪಾಲು 34 ಟಿಎಂಸಿ ನೀರಿಗಾಗಿ ಪ್ರಸ್ತಾವನೆ ಸಲ್ಲಿಸಿತು. ಆದರೆ ತಮಿಳುನಾಡು ಪ್ರಸ್ತಾಪವನ್ನು ರಾಜ್ಯದ ಪ್ರತಿನಿಧಿ ರಾಕೇಶ್ ಸಿಂಗ್ ತಿರಸ್ಕರಿಸಿದರು. ಬಳಿಕ ರಾಜ್ಯ ಸರ್ಕಾರದ ಜೊತೆ ಚರ್ಚೆ ನಡೆಸಿ ಈ ಕುರಿತು ಪ್ರತಿಕ್ರಿಯಿಸುವುದಾಗಿ ತಿಳಿಸಿ ಸಭೆಯಿಂದ ಹೊರ ಬಂದರು. ಅಂದಹಾಗೇ ಸುಪ್ರೀಂಕೋರ್ಟ್ ಆದೇಶದ ಬಳಿಕ ನ್ಯಾಯಬದ್ಧವಾಗಿ ತಮಿಳುನಾಡು 31.24 ಟಿಎಂಸಿ ನೀರು ಕೇಳಬೇಕಿತ್ತು. ಆದರೆ 31.24 ಟಿಎಂಸಿ ಬದಲು 2.5 ಟಿಎಂಸಿ ನೀರು ಹೆಚ್ಚುವರಿ ಕೇಳಿ ಪ್ರಸ್ತಾಪ ಸಲ್ಲಿಸಿದ್ದು, ಜೂನ್ ನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದ ಕಾರಣ ಈಗಾಗಲೇ ಕರ್ನಾಟಕ ಒಂದು ಟಿಎಂಸಿ ನೀರು ತಮಿಳುನಾಡಿಗೆ ಹರಿಸಿದೆ. ಹೀಗಾಗಿ ಉಳಿದ 30.24 ಟಿಎಂಸಿ ನೀರು ಮಾತ್ರ ತಮಿಳುನಾಡಿಗೆ ಹರಿಸಬೇಕು. ಆದರೆ ತಮಿಳುನಾಡು ಹೆಚ್ಚುವರಿ ನೀರು ಕೇಳುವ ಮೂಲಕ ಮತ್ತೆ ಕಾಲ್ಕೆರೆÀದು ಜಗಳಕ್ಕೆ ನಿಂತಿದೆ.

Translate »