ಇಂದು `ಬಣ್ಣದ ಬದುಕಿನ ಚಿನ್ನದ ದಿನಗಳು’ ಕೃತಿ ಬಿಡುಗಡೆ
ಮೈಸೂರು

ಇಂದು `ಬಣ್ಣದ ಬದುಕಿನ ಚಿನ್ನದ ದಿನಗಳು’ ಕೃತಿ ಬಿಡುಗಡೆ

August 18, 2019

ಮೈಸೂರು, ಆ.17(ಎಂಟಿವೈ)- ಮೈಸೂರಿನ ಸರಸ್ವತಿಪುರಂ ಜೆಎಸ್‍ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಆ.18ರಂದು ಸಂಜೆ 6ಕ್ಕೆ ರಂಗಕರ್ಮಿ ಏಣಗಿ ಬಾಳಪ್ಪ ಸ್ಮರಣಾರ್ಥ ಪತ್ರಕರ್ತ ಗಣೇಶ ಅಮೀನಗಡ ಅವರ `ಬಣ್ಣದ ಬದುಕಿನ ಚಿನ್ನದ ದಿನಗಳು’ ಕೃತಿ ಬಿಡುಗಡೆ ಸಮಾರಂಭ ಹಾಗೂ ರಂಗಗೀತೆ ಸಂಭ್ರಮ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಕಲಾಕೂಟ ಮತ್ತು ಸಂವಹನ ಪ್ರಕಾಶಕರ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ವೇಳೆ ಲೇಖಕ ಪ್ರೊ. ಕೃಷ್ಣಮೂರ್ತಿ ಚಂದರ್ ಕೃತಿಯನ್ನು ಇಂಗ್ಲೀಷ್‍ಗೆ ಅನುವಾದಿಸಿದ `ಗೋಲ್ಡನ್ ಡೇಸ್ ಆಫ್ ಕಲರ್‍ಫುಲ್ ಲೈಫ್’ ಹಾಗೂ ಪ್ರೊ. ಗೋಪಾಲ ಮಹಾಮುನಿ ಮರಾಠಿಗೆ ಅನುವಾದಿ ಸಿದ `ರಂಗಮಯ ಜೀವನದಾಚೆ ಸುವರ್ಣಮಯ ದಿವಸ್’ ಕೃತಿಗಳು ಬಿಡುಗಡೆಗೊಳ್ಳಲಿವೆ. ಆ.18ರಂದು ಸಂಜೆ 6 ಗಂಟೆಗೆ ಜೆಎಸ್‍ಎಸ್ ಮಹಿಳಾ ಕಾಲೇಜಿನ ನವ್ಯಜ್ಯೋತಿ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಸಾನಿಧ್ಯವನ್ನು ಸುತ್ತೂರು ಮಠ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಹಿಸಲಿದ್ದಾರೆ. ಸರೋದ ವಾದಕ ಪಂ.ರಾಜೀವ್ ತಾರಾನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ವಚನ ಚಿಂತಕ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಡಾ.ಸಿ.ಸೋಮಶೇಖರ್ ವಹಿಸಲಿದ್ದಾರೆ. ಮುಖ್ಯ ಅತಿಥಿ ಗಳಾಗಿ ರಂಗಕರ್ಮಿಗಳಾದ ಶ್ರೀನಿವಾಸ ಜಿ.ಕಪ್ಪಣ್ಣ, ಡಾ.ನಾ.ದಾಮೋದರ ಶೆಟ್ಟಿ, ಪತ್ರಕರ್ತ ಬಿ.ಗಣಪತಿ ಪಾಲ್ಗೊಳ್ಳಲಿದ್ದಾರೆ.

Translate »