ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡುಗಡೆ: ನದಿಪಾತ್ರದ ಜನತೆಯ ಸುರಕ್ಷತೆ ಕ್ರಮವಹಿಸಲು ಡಿಸಿ ಸೂಚನೆ
ಮಂಡ್ಯ

ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡುಗಡೆ: ನದಿಪಾತ್ರದ ಜನತೆಯ ಸುರಕ್ಷತೆ ಕ್ರಮವಹಿಸಲು ಡಿಸಿ ಸೂಚನೆ

July 16, 2018

ಮಂಡ್ಯ: ರಾಜ್ಯದಲ್ಲಿ ನಿರಂತರ ವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಹಾರಂಗಿ, ಹೇಮಾವತಿ ಜಲಾಶಯಗಳಿಂದ ನದಿ ಮೂಲಕ ನೀರು ಕೆಆರ್‌ಎಸ್‌ ಜಲಾ ಶಯಕ್ಕೆ ಹರಿದು ಬರುತ್ತಿದ್ದು, ಕೆಆರ್‌ಎಸ್‌ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದರು.

ಭಾನುವಾರ ಜಿಪಂ ಕಾವೇರಿ ಸಭಾಂಗಣದಲ್ಲಿ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷ್ಣರಾಜಸಾಗರ ಅಣೆಕಟ್ಟೆಯಿಂದ 50 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡುತ್ತಿ ರುವುದರಿಂದ ಪ್ರವಾಹದ ಮುನ್ನೆಚ್ಚರಿಕೆ ಯನ್ನು ನದಿಪಾತ್ರದ ಗ್ರಾಮಗಳ ಜನರಿಗೆ ತಿಳಿಸಲು ಅಧಿಕಾರಿಗಳು ಮುಂದಾಗಬೇಕು. ಕಾವೇರಿ ನದಿಯ ಎರಡೂ ದಂಡೆಗಳಲ್ಲಿನ ಸಾರ್ವಜನಿಕರು ತಮ್ಮ ಆಸ್ತಿ ಹಾಗೂ ಜಾನು ವಾರಿಗಳ ರಕ್ಷಣೆಗಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಜಾಗೃತಿ ಮೂಡಿ ಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ನದಿ ಪಾತ್ರದ ಗ್ರಾಮಗಳ ಜನರ ಸುರ ಕ್ಷತೆಗಾಗಿ ಪ್ರತಿಯೊಂದು ತಾಲೂಕಿನಲ್ಲಿ ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಆರೋಗ್ಯಾಧಿಕಾರಿ, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರು, ಪೊಲೀಸ್ ಅಧಿಕಾರಿ ಹಾಗೂ ಇಂಜಿನಿಯರ್ ಸೇರಿದಂತೆ ತಾಲೂಕು ಮಟ್ಟದ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ ಜಿಲ್ಲಾ ಧಿಕಾರಿಗಳು ನದಿ ಪಾತ್ರದ ಪ್ರತಿಯೊಂದು ಗ್ರಾಮದಲ್ಲಿ ಟಾಂ ಟಾಂ ಹೊಡೆಸುವ ಮೂಲಕ ಪ್ರಚಾರ ಮಾಡಬೇಕು ಹಾಗೂ ಪ್ರತಿಯೊಂದು ತಾಲೂಕಿನಲ್ಲಿ 4 ತಂಡಗಳು ನದಿ ಪಾತ್ರ ದಲ್ಲಿದ್ದು, ಎಚ್ಚರಿಕೆ ನೀಡುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿ ಕಾರಿಗಳು ತಿಳಿಸಿದರು.

ಜಲಾಶಯದಿಂದ ಹೊರಹರಿವು ಜಾಸ್ತಿಯಿ ರುವುದರಿಂದ ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ತಾಲೂಕಿನ ಗ್ರಾಮಗಳ ಜಮೀನುಗಳಿಗೆ ನೀರು ಬರುವುದರಂದ ಅಲ್ಲಿನ ಗ್ರಾಮಗಳ ಜನರು ತಮ್ಮ ಜಾನುವಾರು ಗಳನ್ನು ಮೇಯಿಸುವುದು ಹಾಗೂ ಕೃಷಿ ಚಟುವಟಿಕೆಗಳನ್ನು ಮಾಡುವುದನ್ನು ನಿಲ್ಲಿಸಬೇಕು. ಅಲ್ಲದೇ ಈಜುವುದು, ಬಟ್ಟೆ ಒಗೆಯುವುದು ಹಾಗೂ ಬೋಟಿಂಗ್ ಮಾಡದಂತೆ ನಿಷೇಧಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಮಾಹಿತಿಗಾಗಿ 4 ಭಾಷೆಗಳನ್ನು ಒಳಗೊಂಡ ಸೂಚನಾ ಫಲಕವನ್ನು ಅಳವಡಿ ಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮುನ್ನೆಚ್ಚರಿಕೆ ಕ್ರಮವಾಗಿ ನದಿಪಾತ್ರದ ಸ್ಥಳಗಳಲ್ಲಿ ತಂಡವು ಬೋಟಿಂಗ್ ವ್ಯವಸ್ಥೆ, ಲೈಫ್ ಜಾಕೇಟ್, ಹೆಲ್ಮೇಟ್, ಹೆವಿ ಲೈಟ್ ಟಾರ್ಚ್ ಹಾಗೂ ನುರಿತ ಈಜುಗಾರರನ್ನು ಹೊಂದಿರಬೇಕು ಹಾಗೂ ಪ್ರವಾಸಿ ಸ್ಥಳ ಗಳಲ್ಲಿ ಗಾರ್ಡ್‍ಗಳ ಇದ್ದು, ಪ್ರವಾಸಿಗರಿಗೆ ಎಚ್ಚರಿಕೆ ನೀಡುವ ಕೆಲಸವನ್ನು ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದರು.

ಜು.20 ರಂದು ಮುಖ್ಯಮಂತ್ರಿಗಳು ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಲು ಆಗಮಿ ಸುತ್ತಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಜಿ.ರಾಧಿಕಾ, ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ, ಕಾವೇರಿ ನೀರಾವರಿ ನಿಗಮ ಅಧೀಕ್ಷಕ ಇಂಜಿನಿಯರ್ ಅಮರ್ ನಾಥ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿ ಗಳು ಉಪಸ್ಥಿತರಿದ್ದರು.

Translate »