ಅಂಬೇಡ್ಕರ್ ಭವನದ ನವೀಕರಣ ಕಾಮಗಾರಿ, ಕಟ್ಟಡಗಳ ಉದ್ಘಾಟನೆ
ಮೈಸೂರು

ಅಂಬೇಡ್ಕರ್ ಭವನದ ನವೀಕರಣ ಕಾಮಗಾರಿ, ಕಟ್ಟಡಗಳ ಉದ್ಘಾಟನೆ

March 1, 2019

ಮೈಸೂರು: ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹೆಚ್.ಡಿ.ಕೋಟೆ ತಾಲೂಕು ಕೇಂದ್ರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನದ ನವೀಕರಣ ಕಾಮಗಾರಿ ಹಾಗೂ ಹೆಚ್ಚುವರಿ ಕಟ್ಟಡಗಳÀ ಉದ್ಘಾಟನಾ ಸಮಾರಂಭ ಮಾ.2ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಕಾರ್ಯಕ್ರಮ ಉದ್ಘಾಟಿಸುವರು, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟಡಗಳ ಉದ್ಘಾಟನೆ ಮಾಡುವರು, ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್ ಘನ ಉಪಸ್ಥಿತಿಯಲ್ಲಿ ಶಾಸಕ ಸಿ.ಅನಿಲ್‍ಕುಮಾರ್ ಅಧ್ಯಕ್ಷತೆ ವಹಿಸುವರು. ಜಿಪಂ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಮ್, ಸಂಸದರಾದ ಆರ್.ಧ್ರುವನಾರಾಯಣ್, ಎಲ್.ಆರ್.ಶಿವ ರಾಮೇಗೌಡ, ಪ್ರತಾಪ್ ಸಿಂಹ, ವಿಧಾನಸಭಾ ಸದಸ್ಯರಾದ ತನ್ವೀರ್ ಸೇಠ್, ಎ.ಹೆಚ್. ವಿಶ್ವನಾಥ್, ಎಸ್.ಎ.ರಾಮದಾಸ್, ಕೆ.ಮಹದೇವು, ಎಲ್.ನಾಗೇಂದ್ರ, ಡಾ.ಯತೀಂದ್ರ, ಎಂ.ಅಶ್ವಿನ್‍ಕುಮಾರ್, ಹರ್ಷವರ್ಧನ್ ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಎಸ್.ನಾಗರಾಜು, ಆರ್.ಧರ್ಮಸೇನಾ, ಕೆ.ಟಿ.ಶ್ರೀಕಂಠೇಗೌಡ, ಕೆ.ವಿ ನಾರಾಯಣಸ್ವಾಮಿ, ಮೈಸೂರು ಜಿಪಂ ಉಪಾಧ್ಯಕ್ಷರಾದ ಗೌರಮ್ಮ ಸೋಮಶೇಖರ್, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾ.ರಾ.ನಂದೀಶ್, ಜಿಪಂ ಸದಸ್ಯೆ ಲತಾ ಸಿದ್ದಶೆಟ್ಟಿ, ಹೆಚ್.ಡಿ.ಕೋಟೆ ತಾಪಂ ಅಧ್ಯಕ್ಷರಾದ ಮಂಜುಳ ದೇವಣ್ಣ, ಉಪಾಧ್ಯಕ್ಷರಾದ ಮಂಜುಳ ಚಂದ್ರೇಗೌಡ ಹಾಗೂ ಜಿಲ್ಲಾ ವ್ಯಾಪ್ತಿಯ ಅಧಿಕಾರಿಗಳು ಭಾಗವಹಿಸುವರು.

Translate »