ಜಿಲ್ಲಾದ್ಯಂತ ಗಣರಾಜ್ಯೋತ್ಸವ ಆಚರಣೆ ಕೊಡಗಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ
ಕೊಡಗು

ಜಿಲ್ಲಾದ್ಯಂತ ಗಣರಾಜ್ಯೋತ್ಸವ ಆಚರಣೆ ಕೊಡಗಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ

January 28, 2019

ಮಡಿಕೇರಿ: ಕಳೆದ ಆಗಸ್ಟ್ ತಿಂಗ ಳಿನಲ್ಲಿ ಸಂಭವಿಸಿದ ಅತಿವೃಷ್ಟಿ ಅನಾಹುತ ದಿಂದ ಸಂತ್ರಸ್ತರಾಗಿರುವ ಕೊಡಗಿನ ಜನ ತೆಗೆ ಹೊಸ ಬದುಕನ್ನು ಕಟ್ಟಿಕೊಡುವ ಕಾರ್ಯ ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕಟಿ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತು ವಾರಿ ಸಚಿವರೂ ಆಗಿರುವ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಭರವಸೆ ನೀಡಿದ್ದಾರೆ.

ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 70ನೇ ಗಣರಾಜ್ಯೋ ತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಸಶಸ್ತ್ರ ಪಡೆಗಳ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಸಚಿವ ಸಾ.ರಾ. ಮಹೇಶ್, ಸ್ವಾತಂತ್ರ್ಯ ಹಾಗೂ ಗಣತಂತ್ರದ ಪರಿಕಲ್ಪನೆಯ ಸಮಗ್ರತೆಯನ್ನು ಅರ್ಥೈಸಿ ಕೊಂಡು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ನೀತಿಯೊಂ ದಿಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಯಾವುದೇ ಭೇದ ಭಾವವಿಲ್ಲದೆ ಎಲ್ಲರೂ ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ಅತಿಯಾದ ಮಳೆಯಿಂದ ಇಡೀ ಕೊಡಗು ಜಿಲ್ಲೆ ತತ್ತರಿಸಿ ಹೋಯಿತು. ನಾಗರಿಕರು ನಿಜವಾದ ಅರ್ಥದಲ್ಲಿ ಮನೆ ಮಾರುಗ ಳನ್ನು ಕಳೆದುಕೊಂಡು ನಿರಾಶ್ರಿತರಾಗಿ ದ್ದಾರೆ. ರಾಜ್ಯ ಸರಕಾರ ನಿರಾಶ್ರಿತರಿಗೆ ಬದು ಕನ್ನು ಕಟ್ಟಿಕೊಡಲು ಅಪಾರವಾಗಿ ಶ್ರಮಿ ಸುತ್ತಿದ್ದು, ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ದಿಂದ ಹಾನಿಗೀಡಾಗಿರುವ ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆಗಳು, ಶಾಲಾ ಕಾಲೇಜು, ಅಂಗನವಾಡಿ ಕಟ್ಟಡಗ ಳನ್ನು ಪುನರ್ ನಿರ್ಮಿಸಲು ಸರಕಾರ ಎಲ್ಲಾ ತುರ್ತು ನೆರವುಗಳನ್ನು ನೀಡಿದೆ. ಜಿಲ್ಲೆಯ ಮುಖ್ಯ ರಸ್ತೆಗಳ ದುರಸ್ತಿಗಾಗಿ ಲೋಕೋ ಪಯೋಗಿ ಇಲಾಖೆಗೆ 99.22 ಕೋಟಿ ಅನುದಾನ ನೀಡಲಾಗಿದ್ದು, ಕಾಮಗಾರಿ ಗಳು ಪ್ರಗತಿಯಲ್ಲಿವೆ. ಹಾಗೂ ಜಿಲ್ಲಾ ರಸ್ತೆ ಗಳು ಹಾಗೂ ಗ್ರಾಮೀಣ ರಸ್ತೆಗಳು, ಅಂಗನ ವಾಡಿ, ಶಾಲಾ ಕಾಲೇಜು ಕಟ್ಟಡಗಳ ದುರ ಸ್ತಿಗಾಗಿ ಸಾಕಷ್ಟು ಅನುದಾನವನ್ನು ನೀಡ ಲಾಗಿದೆ ಎಂದು ಹೇಳಿದರು.

ಪ್ರಕೃತಿ ವಿಕೋಪದಿಂದ ಜೀವ ಹಾನಿ ಸಂಭವಿಸಿದ 19 ಪ್ರಕರಣಗಳಿಗೆ ರೂ.95 ಲಕ್ಷ ಅನುಕಂಪ ಭತ್ಯೆ ಮತ್ತು 268 ಜಾನು ವಾರು ಹಾನಿ ಬಾಬ್ತು ರೂ.31.00 ಲಕ್ಷ ಪರಿಹಾರ ಪಾವತಿಸಲಾಗಿದೆ. ಅಲ್ಲದೆ ಮನೆ ಹಾನಿ ಬಾಬ್ತು 3916 ಪ್ರಕರಣಗಳಿಗೆ ರೂ. 10.61 ಕೋಟಿ ರೂ. ಪರಿಹಾರ ಪಾವತಿಸ ಲಾಗಿದೆ. ಬೆಳೆ ಹಾನಿ ಬಾಬ್ತು ಈಗಾಗಲೇ ಪರಿಹಾರ ತಂತ್ರಾಂಶದಲ್ಲಿ ವಿವರಗಳನ್ನು ನಮೂದಿಸಲಾಗಿದ್ದು, ನೇರವಾಗಿ ಸಂತ್ರ ಸ್ತರ ಖಾತೆಗೆ ಪರಿಹಾರದ ಹಣವನ್ನು ಪಾವತಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಚಿವರು ನುಡಿದರು.

ಸಾಲ ಮನ್ನಾ: ಮುಖ್ಯಮಂತ್ರಿ ಕುಮಾರ ಸ್ವಾಮಿ ನೇತೃತ್ವದ ಸರಕಾರ ರೈತರಲ್ಲಿ ಆತ್ಮ ವಿಶ್ವಾಸ ತುಂಬಲು ‘ರೈತ ಬಂಧು’ ಬೆಳೆ ಸಾಲಮನ್ನಾ ಯೋಜನೆಯನ್ನು ಜಾರಿಗೆ ತಂದಿದ್ದು, ಜಿಲ್ಲೆಯ ಒಟ್ಟು 47,346 ರೈತರು ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್‍ಗಳಲ್ಲಿ ಮಾಡಿದ್ದ ಬೆಳೆ ಸಾಲ ಮನ್ನಾ ಮಾಡಲು ರೈತರಿಂದ ನೋಂದಣಿಗಾಗಿ ಅರ್ಜಿ ಸ್ವೀಕರಿ ಸಲು ತಂತ್ರಾಂಶ ರೂಪಿಸಿ ಅರ್ಜಿಗಳನ್ನು ಸ್ವೀಕರಿಸುತ್ತಿದ್ದು, ಶೇ.90 ರಷ್ಟು ರೈತರ ನೋಂದಣಿ ಕಾರ್ಯ ಪೂರ್ಣಗೊಂಡಿದೆ. ಸಾಲ ಮನ್ನಾ ಬಗ್ಗೆ ಪರಿಶೀಲನೆ ಪ್ರಗತಿ ಯಲಿದ್ದು, ರೈತರು ಸಾಲದಿಂದ ಮುಕ್ತರಾಗಿ ಹೊಸ ಬದುಕು ಆರಂಭಿಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ವಿಶ್ಲೇಷಿಸಿದರು.

ಸಾಂಸ್ಕøತಿಕ ಕಾರ್ಯಕ್ರಮದ ಆಕರ್ಷಣೆ: ಕಾರ್ಯಕ್ರಮದಲ್ಲಿ ನಗರದ ಮೈಕೆಲರ ಆಂಗ್ಲ ಮಾಧ್ಯಮ ಶಾಲೆ, ಲಿಟ್ಲ್ ಫ್ಲವರ್ ಶಾಲೆ, ಕೊಡಗು ವಿದ್ಯಾಲಯ, ಜನರಲ್ ತಿಮ್ಮಯ್ಯ ಶಾಲೆ, ನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಸಂತ ಜೋಸೆಫರ ಶಾಲೆ ಸೇರಿದಂತೆ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಈ ಬಾರಿಯ ಗಣರಾಜ್ಯೋತ್ಸವದಲ್ಲಿ ವೀರಾ ಜಪೇಟೆ ತಾಲೂಕಿನ ಗಿರಿಜನ ಆಶ್ರಮ ಶಾಲೆಯ ವಿದ್ಯಾರ್ಥಿಗಳು ‘ಬುಡಕಟ್ಟು ಸಾಂಸ್ಕøತಿಕ ನೃತ್ಯ’ ಪ್ರದರ್ಶನ ವಿಶೇಷ ವಾಗಿತ್ತು. ಜೊತೆಗೆ ‘ಮತದಾನದ ಮಹತ್ವ’ ಕುರಿತ ಸಂದೇಶ ಒಳಗೊಂಡ ಸ್ತಬ್ಧಚಿತ್ರ ಗಮನ ಸೆಳೆಯಿತು.
ಸಾಧಕರಿಗೆ ಸನ್ಮಾನ: ಪ್ರಸಕ್ತ ಸಾಲಿನಲ್ಲಿ ಅಸಾಧಾರಣ ಸಾಧನೆ ಮಾಡಿದ ಸುಮಾರು 14 ಮಂದಿ ವಿದ್ಯಾರ್ಥಿಗಳನ್ನು ತಲಾ 10 ಸಾವಿರ ರೂ.ಗಳ ನಗದು ಪುರಸ್ಕಾರ ದೊಂದಿಗೆ ಗೌರವಿಸಲಾಯಿತಲ್ಲದೆ, ಜಿಲ್ಲೆ ಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧಕ್ಷೆ ಕಾವೇ ರಮ್ಮ ಸೋಮಣ್ಣ, ಮಾಜಿ ಸಚಿವ ಎಂ.ಸಿ.ನಾಣಯ್ಯ, ಕನ್ನಡ ಸಾಹಿತ್ಯ ಪರಿ ಷತ್ ಜಿಲ್ಲಾ ಅಧ್ಯಕ್ಷ ಲೋಕೇಶ್ ಸಾಗರ್, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಮುಖ್ಯ ಅರಣ್ಯ ಸಂರ ಕ್ಷಣಾಧಿಕಾರಿ ಲಿಂಗರಾಜು, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ನೂರುನ್ನೀಸ, ಹೆಚ್ಚುವರಿ ಜಿಲ್ಲಾ ಧಿಕಾರಿ ಶ್ರೀನಿವಾಸ, ಉಪ ವಿಭಾ ಗಾಧಿಕಾರಿ ಟಿ.ಜವರೇಗೌಡ ಸೇರಿದಂತೆ ಇತರರು ಹಾಜರಿದ್ದರು.

Translate »