ಇಂದು ಗಣರಾಜ್ಯೋತ್ಸವ ಪಥ ಸಂಚಲನ ತಾಲೀಮು
ಮೈಸೂರು

ಇಂದು ಗಣರಾಜ್ಯೋತ್ಸವ ಪಥ ಸಂಚಲನ ತಾಲೀಮು

January 24, 2020

ಮೈಸೂರು, ಜ.23(ಆರ್‍ಕೆ)-ಜನವರಿ 26 ರಂದು ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ನಡೆ ಯುವ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಪಾಲ್ಗೊಂಡು ಪಥ ಸಂಚ ಲನ ವೀಕ್ಷಿಸಿ, ಧ್ವಜ ವಂದನೆ ಸಲ್ಲಿಸುವರು.

ಮೇಯರ್ ತಸ್ನೀಂ, ಉಪ ಮೇಯರ್ ಸಿ.ಶ್ರೀಧರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ತನ್ವೀರ್ ಸೇಟ್, ಜಿ.ಟಿ.ದೇವೇಗೌಡ ಸೇರಿದಂತೆ ಜನ ಪ್ರತಿನಿಧಿಗಳು ಭಾಗವಹಿಸುವರು.

ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಎಡಿಸಿ ಬಿ.ಆರ್.ಪೂರ್ಣಿಮಾ, ಜಿಲ್ಲಾ ಪಂಚಾಯ್ತಿ ಸಿಇಓ ಕೆ.ಜ್ಯೋತಿ, ಮುಡಾ ಆಯುಕ್ತ ಪಿ.ಎಸ್. ಕಾಂತರಾಜು, ನಗರ ಪಾಲಿಕೆ ಆಯುಕ್ತ ಗುರುದತ್ ಹೆಗ್ಡೆ, ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಎಸ್ಪಿ ಸಿ.ಬಿ.ರಿಷ್ಯಂತ್ ಸೇರಿದಂತೆ ಎಲ್ಲಾ ಇಲಾಖೆ ಗಳ ಅಧಿಕಾರಿಗಳು ಗಣರಾಜ್ಯೋತ್ಸವ ಕಾರ್ಯ ಕ್ರಮದಲ್ಲಿ ಭಾಗವಹಿಸುವರು.

ಮೈಸೂರು ನಗರ ಮತ್ತು ಜಿಲ್ಲಾ ಸಿವಿಲ್ ಪೊಲೀಸ್, ಸಿಎಆರ್, ಡಿಎಆರ್, ಕೆಪಿಎ, ಮೌಂಟೆಡ್, ಅಗ್ನಿಶಾಮಕ ದಳ, ಗೃಹ ರಕ್ಷಕ ದಳ, ಎನ್‍ಸಿಸಿ, ಎನ್‍ಎಸ್‍ಎಸ್ ತಂಡಗಳು ಭಾಗವಹಿಸಿ ಆಕರ್ಷಕ ಪಥ ಸಂಚಲನ ನಡೆಸಿ ಧ್ವಜವಂದನೆ ಸಲ್ಲಿಸುವರು.

ಮೈಸೂರಿನ ಹಲವು ಶಾಲೆಗಳ 500ಕ್ಕೂ ಹೆಚ್ಚು ಮಕ್ಕಳು ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡು ನಾಡಿನ ಕಲೆ, ಸಂಸ್ಕøತಿ ಬಿಂಬಿಸುವ ನೃತ್ಯ ಪ್ರದರ್ಶನ ಮಾಡುವರು. ಇಂದಿನಿಂದ ಪಥ ಸಂಚಲನ ಹಾಗೂ ನೃತ್ಯ ಪ್ರದರ್ಶನದ ತಾಲೀಮು ಆರಂಭ ವಾಗಿದ್ದು, ನಾಳೆ(ಜ.24) ಹಾಗೂ ಶನಿವಾರವೂ ತಾಲೀಮು ನಡೆಯಲಿದೆ ಎಂದು ಎನ್.ಆರ್. ಠಾಣೆ ಇನ್ಸ್‍ಪೆಕ್ಟರ್ ಜಿ.ಶೇಖರ್ ತಿಳಿಸಿದ್ದಾರೆ.

ಜನವರಿ 26ರಂದು ನಡೆಯಲಿರುವ ಗಣ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮೈಸೂರಿನ ಬನ್ನಿ ಮಂಟಪದ ಪಂಜಿನ ಕವಾಯತು ಮೈದಾನಕ್ಕೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಿ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡ ಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ ಪಂಜಿನ ಕವಾಯತು ಮೈದಾನದ ಒಳ ಹಾಗೂ ಹೊರ ಆವರಣದಲ್ಲಿ ಶಸ್ತ್ರ ಸಜ್ಜಿತ ಸಿಬ್ಬಂದಿಗಳನ್ನು ಭದ್ರತೆ ಗಾಗಿ ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗುವುದು. ಆ ಹಿನ್ನೆಲೆಯಲ್ಲಿ ಕಾನೂನು-ಸುವ್ಯವಸ್ಥೆ ವಿಭಾಗದ ಡಿಸಿಪಿ ಎಂ.ಮುತ್ತುರಾಜ್ ಎಸಿಪಿ, ಇನ್ಸ್‍ಪೆಕ್ಟರ್, ಸಬ್ ಇನ್ಸ್‍ಪೆಕ್ಟರ್‍ಗಳೊಂದಿಗೆ ಸಭೆ ನಡೆಸಿ ಭದ್ರತಾ ಕರ್ತವ್ಯದ ಸೂಚನೆಗಳನ್ನು ನೀಡಿದ್ದಾರೆ.

Translate »