ಅನಧಿಕೃತ ಕುಡಿಯುವ ನೀರು ಘಟಕಗಳ ವಿರುದ್ಧ ಕ್ರಮಕ್ಕೆ ಮನವಿ
ಮೈಸೂರು

ಅನಧಿಕೃತ ಕುಡಿಯುವ ನೀರು ಘಟಕಗಳ ವಿರುದ್ಧ ಕ್ರಮಕ್ಕೆ ಮನವಿ

October 4, 2018

ಮೈಸೂರು:  ಅನಧಿಕೃತ ಕುಡಿಯುವ ನೀರಿನ ಘಟಕಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮೈಸೂರು ಪ್ಯಾಕೇಜ್ಡ್ ಕುಡಿಯುವ ನೀರಿನ ಉತ್ಪಾದಕರ ಸಂಘದ ವತಿಯಿಂದ ಬುಧವಾರ ಮೈಸೂರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಮೈಸೂರು ಜಿಲ್ಲೆಯಲ್ಲಿ ಅನಧಿಕೃತವಾಗಿ ಐಎಸ್‍ಐ ಹಾಗೂ ಎಫ್‍ಎಸ್‍ಎಸ್‍ಎಐ ಅನುಮತಿ ಪಡೆಯದೇ ಅನೇಕ ಕುಡಿಯುವ ನೀರಿನ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಇವುಗಳ ವಿರುದ್ಧ ಶೀಘ್ರ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಮೈಸೂರು ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಕಚೇರಿ ತಹಸೀಲ್ದಾರ್ ನರಗುಂದ ಅವರಿಗೆ ಸಂಘದ ಪದಾಧಿಕಾರಿಗಳಿಂದ ಮನವಿ ಸಲ್ಲಿಸಿದರು. ಈಗಾಗಲೇ ಅನೇಕ ಬಾರಿ ಈ ಬಗ್ಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಪರಿಣಾಮ ಐಎಸ್‍ಐ ಹಾಗೂ ಎಫ್‍ಎಸ್‍ಎಸ್‍ಎಐ ಅನುಮತಿ ಪಡೆದು ಕುಡಿಯುವ ನೀರು ಉತ್ಪಾದನೆ ಘಟಕ ನಡೆಸುತ್ತಿರುವವರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಇನ್ನಾದರೂ ಅನಧಿಕೃತ ಘಟಕಗಳ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.

Translate »