ಇಂದು ಸಿಎಂ ಕುಮಾರಸ್ವಾಮಿ ನೇತೃತ್ವದ ನಿಯೋಗದಿಂದ ಕೇಂದ್ರ ಗೃಹ ಸಚಿವರ ಭೇಟಿ: ಕೊಡಗಿಗೆ 2 ಸಾವಿರ ಕೋಟಿ ಬಿಡುಗಡೆಗೆ ಮನವಿ
ಕೊಡಗು

ಇಂದು ಸಿಎಂ ಕುಮಾರಸ್ವಾಮಿ ನೇತೃತ್ವದ ನಿಯೋಗದಿಂದ ಕೇಂದ್ರ ಗೃಹ ಸಚಿವರ ಭೇಟಿ: ಕೊಡಗಿಗೆ 2 ಸಾವಿರ ಕೋಟಿ ಬಿಡುಗಡೆಗೆ ಮನವಿ

August 30, 2018

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ಅಪಾರ ನಷ್ಟ ಉಂಟಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರ ನಿಯೋಗವು ಆಗಸ್ಟ್ 30 ರಂದು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಂದಾಯ ಸಚಿವರು, ಅತಿವೃಷ್ಟಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ನಷ್ಟ ಉಂಟಾಗಿದೆ. ಜನ, ಜಾನುವಾರು ಹಾನಿ, ತೋಟಗಾರಿಕೆ, ಕಾಫಿ, ಕರಿಮೆಣಸು ಸೇರಿ ದಂತೆ ಹಲವು ಕೃಷಿ ಹಾಗೂ ವಾಣಿಜ್ಯ ಬೆಳೆಗಳಲ್ಲಿ ನಷ್ಟ ಉಂಟಾಗಿದೆ. ಈ ಸಂಬಂಧ 2 ಸಾವಿರ ಕೋಟಿ ರೂ.ಗೂ ಹೆಚ್ಚು ಸಹಾಯ ಧನ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗುವುದು ಎಂದು ಹೇಳಿದರು. ಅತಿವೃಷ್ಟಿಯಿಂದ ನಷ್ಟ ಉಂಟಾಗಿರುವ ತೋಟಗಾರಿಕಾ ಬೆಳೆ, ಕಾಫಿ ಸೇರಿದಂತೆ ಬೆಳೆ ಸಮೀಕ್ಷೆ ಕಾರ್ಯ ನಡೆಯುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಮಾದಾಪುರ ತೋಟಗಾರಿಕಾ ಸಂಶೋ ಧನಾ ಕೇಂದ್ರದಲ್ಲಿ ಸ್ಪಲ್ಪ ಜಾಗವನ್ನು ಪಡೆದು ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಸಚಿವರು ಹೇಳಿದರು.

ಈಗಾಗಲೇ 23 ಪರಿಹಾರ ಕೇಂದ್ರದಲ್ಲಿ 2913 ಸಂತ್ರಸ್ತರಿದ್ದಾರೆ. ಕಂದಾಯ, ಗ್ರಾಮೀಣಾಭಿವೃದ್ಧಿ, ಆರೋಗ್ಯ ಇಲಾಖೆಯ ಸಾಕಷ್ಟು ಸಿಬ್ಬಂದಿ ಹಾಗೂ ವೈದ್ಯರನ್ನು ನಿಯೋಜಿಸಲಾಗಿದೆ. ಪರಿಸರ, ಶುಚಿತ್ವದ ಬಗ್ಗೆ ನಿಗಾ, ಜೊತೆಗೆ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಲೋಕೋಪಯೋಗಿ, ಗ್ರಾಮೀಣ ರಸ್ತೆಗಳು ಹಾಳಾಗಿದ್ದು, ಈ ರಸ್ತೆಗಳನ್ನು ಸರಿಪಡಿ ಸುವ ನಿಟ್ಟಿನಲ್ಲಿ ಮೂವರನ್ನು ಒಳಗೊಂಡ ತಂಡವು ಈಗಾಗಲೇ ಸಮೀಕ್ಷೆ ಕಾರ್ಯ ಆರಂಭಿಸಿದೆ. ಹಾಗೆಯೇ ಭೂವಿಜ್ಞಾನಿಗಳ ತಂಡವು ಆಗಮಿಸಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೊಡಗು ಜಿಲ್ಲೆಗೆ ಈಗಾಗಲೇ 100 ಕೋಟಿ ರೂ ವಿಶೇಷ ಪ್ಯಾಕೇಜ್ ಘೋಷಿ ಸಿದ್ದರು, ಅದರಂತೆ ಸರ್ಕಾರ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಿ 85 ಕೋಟಿ ರೂ. ಬಿಡುಗಡೆ ಮಾಡಿದೆ.

ಇನ್ನೂ ಹೆಚ್ಚಿನ ಹಣ ಬೇಕಿದ್ದಲ್ಲಿ ಬಿಡು ಗಡೆ ಮಾಡಲಾಗುವುದು. ಎಲ್ಲರ ಸಹ ಕಾರದಿಂದ ಕೊಡಗನ್ನು ಮತ್ತೆ ಕಟ್ಟುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಆರ್.ವಿ.ದೇಶಪಾಂಡೆ ಅವರು ಹೇಳಿದರುಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಇತರರು ಇದ್ದರು.

Translate »