ತಳವಾರ, ಪರಿವಾರದ ಮುಖಂಡರಿಗೆ ಕಿರುಕುಳ: ಸಂಸದ ಪ್ರತಾಪ ಸಿಂಹ ನೇತೃತ್ವದಲ್ಲಿ ಮನವಿ ಸಲ್ಲಿಕೆ

ಮೈಸೂರು: ನಾಯಕ ಜನಾಂಗದ ಪರ್ಯಾಯ ಪದವಾದ ತಳವಾರ ಹಾಗೂ ಪರಿವಾರ ಪಂಗಡದ ಕೆಲವು ಮುಖಂಡರಿಗೆ ಅಧಿಕಾರಿಗಳು ನೀಡು ತ್ತಿರುವ ಕಿರುಕುಳವನ್ನು ತಪ್ಪಿಸುವಂತೆ ಸಂಸದ ಪ್ರತಾಪ ಸಿಂಹ ನೇತೃತ್ವದಲ್ಲಿ ಸೋಮವಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್ಪಿ ಎಂ.ಎಸ್.ಗೀತಾ ಅವರಿಗೆ ನಾಯಕ ಸಮುದಾಯದ ಮುಖಂಡರು ಮನವಿ ಸಲ್ಲಿಸಿದರು.

ಮೈಸೂರಿನ ಸಿದ್ಧಾರ್ಥ ಬಡಾವಣೆ ಯಲ್ಲಿರುವ ನಾಗರಿಕ ಹಕ್ಕು ಜಾರಿ ನಿರ್ದೇ ಶನಾಲಯ ಕಚೇರಿಗೆ ಇಂದು ಬೆಳಿಗ್ಗೆ ಆಗ ಮಿಸಿದ ಸಂಸದ ಪ್ರತಾಪ್ ಸಿಂಹ, ಕೇಂದ್ರ ಸರ್ಕಾರ ಪರಿವಾರ ಮತ್ತು ತಳವಾರ ಸಮು ದಾಯವನ್ನು ಎಸ್ಟಿಗೆ ಸೇರಿಸಲು ಕ್ರಮ ಕೈಗೊಂಡು ಸಂಸತ್ ಅನುಮೋದನೆ ನೀಡಿದೆ. ಕೆಲವು ಪ್ರಕರಣಗಳಲ್ಲಿ ನ್ಯಾಯಾಲಯ ತೀರ್ಪು ನೀಡಿದ್ದು, ಪರಿವಾರ, ತಳವಾರ ಬೇರೆ ಸಮುದಾಯವಲ್ಲ, ಅದು ನಾಯಕ ಸಮುದಾಯದ ಪರ್ಯಾಯ ಪದವೆಂದು ಆದೇಶಿಸಿದೆ. ಆದರೆ ಮೈಸೂರು ಮತ್ತು ಚಾಮರಾಜನಗರದಲ್ಲಿ ಈ ಪಂಗಡಕ್ಕೆ ಸೇರಿದ ಕೆಲ ಮುಖಂಡರಿಗೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾ ರಣೆ ನೆಪದಲ್ಲಿ ಕಿರುಕುಳ ನೀಡುತ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ನಿರ್ದೇ ಶನಾಲಯದ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಸಂಸದರು ಕೋರಿದರು.

ಮನವಿ ಸ್ವೀಕರಿಸಿದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಅಧೀಕ್ಷಕಿ ಎಂ.ಎಸ್. ಗೀತಾ, ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡುತ್ತೇವೆ. ಕಿರುಕುಳ ನೀಡುತ್ತಿರುವ ಅಧಿ ಕಾರಿಗಳ ಹೆಸರು ಹೇಳಿದರೆ, ಅಂತಹವರಿಗೆ ಸೂಚಿಸುತ್ತೇನೆ ಎಂದು ಭರವಸೆ ನೀಡಿ ದರು. ಈ ಸಂದರ್ಭದಲ್ಲಿ ವಿಧಾನ ಪರಿ ಷತ್ ಮಾಜಿ ಸದಸ್ಯ ಸಿದ್ದರಾಜು, ನಾಯಕ ಜನಾಂಗದ ಮುಖಂಡರಾದ ಅಪ್ಪಣ್ಣ, ದೇವರಾಜ ಟಿ.ಕಾಟೂರು, ಪಡುವಾರ ಹಳ್ಳಿ ರಾಮಕೃಷ್ಣ, ದೇವಪ್ಪನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಈ ಬಾರಿಯೂ ನಾನೇ ಅಭ್ಯರ್ಥಿ, ಲಕ್ಷ ಮತಗಳ ಅಂತರದ ಗೆಲುವು ನಿಶ್ಚಿತ: ಸಂಸದ ಪ್ರತಾಪ ಸಿಂಹ ವಿಶ್ವಾಸ
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾನೇ ಕಣಕ್ಕಿಳಿಯಲಿದ್ದು, ಈ ಬಾರಿ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಸಂಸದ ಪ್ರತಾಪ ಸಿಂಹ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿದ್ಧಾರ್ಥ ಬಡಾವಣೆಯಲ್ಲಿರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾವುದೇ ಅನುಮಾನ ಬೇಡ. ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ. ಕಳೆದ ಬಾರಿ ನಾನು ಅಭ್ಯರ್ಥಿಯಾಗಿ ಚುನಾ ವಣಾ ಕಣಕ್ಕೆ ಧುಮುಕಿದ್ದಾಗ, ನಾನು ಯಾರೆಂದು ತಿಳಿಯದೆ ಇದ್ದರೂ ಈ ಕ್ಷೇತ್ರದ ಮತದಾರರು ನನ್ನನ್ನು ಗೆಲ್ಲಿಸಿದರು. ಇದೀಗ 5 ವರ್ಷದಲ್ಲಿ ನಾನು ಎರಡೂ ಜಿಲ್ಲೆಗಳಿಗೆ ಮಾಡಿರುವ ಅಭಿವೃದ್ಧಿ ಕಾರ್ಯವನ್ನು ಗಮನಿಸಿದ್ದಾರೆ. ನಾನು ಎಂದಿಗೂ ಜಾತಿ ಆಧಾರದಲ್ಲಿ ರಾಜಕಾರಣ ಮಾಡಿಲ್ಲ. ಎಲ್ಲಾ ಸಮುದಾಯಕ್ಕೆ ಸೇರಿದ ಜನರೂ ನನಗೆ ಮತ ಹಾಕಿ ಬೆಂಬಲಿಸಲಿದ್ದಾರೆ. ಅಭಿವೃದ್ಧಿ ರಾಜಕಾರಣ ಮುಂದಿಟ್ಟುಕೊಂಡು ಮತಯಾಚನೆ ಮಾಡುವುದರಿಂದ ನಾನು ಈ ಬಾರಿ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದರು.

ಒಮ್ಮೆ ಚುನಾವಣೆಯಲ್ಲಿ ಗೆದ್ದ ರಾಜಕಾರಣಿಯೊಬ್ಬ ಸಹಜವಾಗಿ ಮುಂದಿನ ಚುನಾವಣೆ ಎದುರಿಸುವ ಬಗ್ಗೆ ಯೋಚಿಸುತ್ತಾನೆ. ಆದರೆ ಪ್ರಧಾನಿ ನರೇಂದ್ರ ಮೋದಿ ದೇಶದ ಅಭಿವೃದ್ಧಿಯ ಬಗ್ಗೆ ಸದಾ ಯೋಜಿಸುತ್ತಾರೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ದೇಶದಾದ್ಯಂತ ಬಿಜೆಪಿ ಮುನ್ನಡೆ ಕಾಯ್ದುಕೊಂಡು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದರು.