ಮೈಸೂರು: ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಮುಖಂಡ ಕೆಂಡಗಣ್ಣ ವಿಶ್ವಕರ್ಮ ಅವರಿಗೆ ರಾಜ್ಯ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಬೇಕೆಂದು ಮೈಸೂರು ಜಿಲ್ಲಾ ವಿಶ್ವಕರ್ಮ ಯುವ ಜಾಗೃತಿ ವೇದಿಕೆಯ ಪ್ರಧಾನ ಕಾರ್ಯದರ್ಶಿ ಟಿ.ಎ.ಸಿದ್ದರಾಜು ಒತ್ತಾಯಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪರ ಕೆಲಸ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರ ಗೆಲುವಿಗೆ ಶ್ರಮಿಸಿದ್ದ ವಿಶ್ವಕರ್ಮ ಸಮುದಾಯ ಮುಖಂಡರಾದ ಕೆಂಡಗಣ್ಣ ಅವರಿಗೆ ರಾಜ್ಯ ವಿಶ್ವಕರ್ಮ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಜಿಲ್ಲೆಯ ವಿಶ್ವಕರ್ಮ ಜನಾಂಗಕ್ಕೆ ಗೌರವ ಕೊಡಬೇಕೆಂದು ಅವರು ಮನವಿ ಮಾಡಿದರು.