ಮಳವಳ್ಳಿ: ಎಂ.ಎನ್.ಆರ್.ಇ.ಜಿ.ಎ ಯೋಜನೆಯಡಿ ಕೂಲಿ ಹಣ ನೀಡುತ್ತಿಲ್ಲ ಹಾಗೂ ಕಾರ್ಮಿಕರ ಕೆಲಸ ನಿರಾಕರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ತಾಲೂಕಿನ ದುಗ್ಗನಹಳ್ಳಿ ಗ್ರಾಮದಲ್ಲಿ ಮಂಗಳವಾರ ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘದಿಂದ ಪ್ರತಿಭಟನೆ ನಡೆಯಿತು.
ಸಂಘದ ಕಾರ್ಯಕರ್ತರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣ ಗೆ ನಡೆಸಿ, ಬಳಿಕ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಮಾವೇಶಗೊಂಡು ಪಿಡಿಓ, ಹಾಗೂ ಎಂಜಿನಿ ಯರ್ ವಿರುದ್ಧ ಘೋಷಣೆ ಕೂಗಿದರು.
2016-17ನೇ ಸಾಲಿನಲ್ಲಿ ಗ್ರಾಮದ 36 ಕೂಲಿ ಕಾರ್ಮಿಕರು ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದರು. ಅದನ್ನು ಅಧಿಕಾರಿಗಳು ಪರಿಗಣ ಸದೆ ಬೇಜವಾಬ್ದಾರಿತನ ಪ್ರದರ್ಶನ ಮಾಡಿದ್ದಾರೆ. ಜೊತೆಗೆ, ಫೆಬ್ರವರಿ ಯಲ್ಲಿ ಕೆಲಸ ಮಾಡಿದ ಕೂಲಿ ಕಾರ್ಮಿಕರಿಗೆ ಇನ್ನೂ ಕೂಲಿ ಹಣ ನೀಡಿಲ್ಲ ಎಂದು ಆರೋಪಿಸಿದರು. ಬಳಿಕ, ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಬಾಬು ಅವರಿಗೆ ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಮಿಕರು ಮನವಿ ಸಲ್ಲಿಸಿ ಪ್ರತಿಭಟನೆ ಹಿಂಪಡೆದರು. ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕÀರ ಸಂಘದ ಸದಸ್ಯರು ಹಾಗೂ ಕೂಲಿಕಾರ್ಮಿಕರು ಇದ್ದರು.