ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆಗೆ ಸಹಕರಿಸಲು ಮನವಿ
ಚಾಮರಾಜನಗರ

ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆಗೆ ಸಹಕರಿಸಲು ಮನವಿ

October 22, 2018

ಚಾಮರಾಜನಗರ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯನ್ನು ದೋಷರಹಿತ ವಾಗಿ ತಯಾರಿಸುವ ನಿಟ್ಟಿನಲ್ಲಿ ಕೈಗೊಂಡಿ ರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ಕೆ ರಾಜ ಕೀಯ ಪಕ್ಷಗಳು ಸಹಕಾರ ನೀಡಬೇ ಕೆಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಚುರಪಡಿಸಿರುವ ಸಂಬಂಧ ಕರೆಯಲಾಗಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ದಿನಾಂಕ 01.01.2019 ಕ್ಕೆ ಅರ್ಹತಾ ದಿನಾಂಕವೆಂದು ನಿಗದಿಪಡಿಸಿ, ವಿಧಾನಸಭಾ ಕ್ಷೇತ್ರಗಳ ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯನ್ನು ಅಕ್ಟೋ ಬರ್ 10 ರಂದು ಪ್ರಕಟಿಸಲಾಗಿದೆ. ಈ ಪಟ್ಟಿ ಸಂಬಂಧ ಹಕ್ಕು ಆಕ್ಷೇಪಣೆಗಳು ಇದ್ದಲ್ಲಿ ಆಯಾ ತಾಲೂಕಿನ ಮತಗಟ್ಟೆಗಳಲ್ಲಿ ಬಿಎಲ್‍ಓ ಮೂಲಕ ಮತ್ತು ತಾಲೂಕು ಕಚೇರಿಯಲ್ಲಿಯೂ ನವೆಂಬರ್ 20 ರವ ರೆಗೆ ಸಲ್ಲಿಸಬಹುದಾಗಿದೆ. ಡಿಸೆಂಬರ್ 20 ರೊಳಗೆ ಸ್ವೀಕರಿಸಲಾಗಿರುವ ಹಕ್ಕು ಆಕ್ಷೇ ಪಣೆಗಳ ಕುರಿತು ಇತ್ಯರ್ಥ ಮಾಡಲಾಗು ತ್ತದೆ.

2019ರ ಜನವರಿ 3 ರೊಳಗೆ ಮತ ದಾರರ ಪಟ್ಟಿಗೆ ಹೆಸರು, ಭಾವಚಿತ್ರ ಸೇರ್ಪಡೆ, ಪೂರಕ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಜನವರಿ 4 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾ ಗುತ್ತದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಮತದಾರರ ಪಟ್ಟಿಯಲ್ಲಿ ಕಂಡುಬರುವ ಲೋಪದೋಷಗಳನ್ನು ಸರಿಪಡಿಸಲಾ ಗುತ್ತದೆ. ಮನೆ ನಂಬರ್, ಮತದಾರರ ಹೆಸರು, ಸಂಬಂಧ, ಭಾವಚಿತ್ರ ಬದಲಾವಣೆ, ಎಪಿಕ್ ನಂಬರ್, ಇನ್ನಿತರೆ ಎಲ್ಲಾ ನ್ಯೂನತೆಗಳನ್ನು ಸರಿಪಡಿಸಲು ಕ್ರಮ ವಹಿಸಲಾಗುತ್ತದೆ. ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿದ್ದರೆ ಕೈಬಿಡುವುದು, ಗಣ್ಯ ವ್ಯಕ್ತಿಗಳ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಖಾತರಿಪಡಿಸಿಕೊಳ್ಳುವುದು ಸೇರಿದಂತೆ ಎಲ್ಲಾ ಅಂಶಗಳನ್ನು ಗಮನಿಸಿ, ಸಮರ್ಪಕವಾಗಿ ಪಟ್ಟಿ ಸಿದ್ಧಪಡಿಸುವುದು ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ ಎಂದರು.

ರಾಜಕೀಯ ಪಕ್ಷಗಳು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ಕೆ ಪೂರಕವಾಗಿ ಸ್ಪಂದಿಸಬೇಕು. ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳಿಗೆ ಮತಗಟ್ಟೆ ಮಟ್ಟದ ಏಜೆಂಟ್ (ಬಿಎಲ್‍ಎ) ರನ್ನು ರಾಜ ಕೀಯ ಪಕ್ಷಗಳು ನೇಮಕ ಮಾಡಬೇಕು. ಬಿಎಲ್‍ಎ ಗಳು ಮತಗಟ್ಟೆ ಮಟ್ಟದ ಅಧಿಕಾರಿ ಗಳೊಂದಿಗೆ (ಬಿಎಲ್‍ಓ) ನೇರ ಸಂಪರ್ಕ ದಲ್ಲಿದ್ದು, ಮತದಾರರ ಪಟ್ಟಿಗೆ ಸಂಬಂಧಿ ಸಿದ ನ್ಯೂನತೆಗಳನ್ನು ಸರಿಪಡಿಸಲು ಸಹಕರಿಸುವಂತೆ ರಾಜಕೀಯ ಪಕ್ಷಗಳು ನಿರ್ದೇಶನ ನೀಡಬೇಕೆಂದು ಜಿಲ್ಲಾಧಿಕಾರಿ ಕಾವೇರಿ ತಿಳಿಸಿದರು.

ಮತದಾರರ ಪಟ್ಟಿಗೆ ಹಸರು ಸೇರ್ಪಡೆ ಗಾಗಿ ನಮೂನೆ-6 ರಲ್ಲಿ ಅರ್ಜಿ ಸಲ್ಲಿಸಿ ರುವ ವ್ಯಕ್ತಿಗಳು ಭಾರತೀಯ ನಾಗರಿಕರಲ್ಲ ಎಂಬ ಅನುಮಾನವಿದ್ದರೆ ಕಚೇರಿಗೆ ಮಾಹಿತಿ ನೀಡಬೇಕು. ಲಿಂಗ ತಾರತಮ್ಯ ರಹಿತ ಮತದಾರರ ಪಟ್ಟಿ ಸಿದ್ದವಾಗ ಬೇಕಿದೆ. ಹೀಗಾಗಿ ಲಿಂಗತ್ವ ಅಲ್ಪಸಂಖ್ಯಾ ತರು, ವಿಶೇಷಚೇತನರು ಸೇರಿದಂತೆ ಎಲ್ಲಾ ಅರ್ಹರ ಹೆಸರುಗಳು ಮತದಾರರ ಪಟ್ಟಿಗೆ ಸೇರಬೇಕಿದೆ. ಒಟ್ಟಾರೆ, ಜಿಲ್ಲೆಯ ಯಾವುದೇ ಅರ್ಹರು ಮತದಾರರ ಪಟ್ಟಿ ಯಿಂದ ಹೊರಗುಳಿಯದಂತೆ ನೋಡಿಕೊಳ್ಳ ಬೇಕಿದೆ. ಶೇ.100 ರಷ್ಟು ದೋಷರಹಿತ ಮತದಾರರ ಪಟ್ಟಿ ತಯಾರಿಸಲು ರಾಜ ಕೀಯ ಪಕ್ಷಗಳು ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ನುಡಿದರು.
ಇದೇ ವೇಳೆ ಅಪರಾಧ ಹಿನ್ನೆಲೆಯನ್ನು ಹೊಂದಿರುವ ವ್ಯಕ್ತಿಗಳು ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸಂಬಂಧಿಸಿದಂತೆ ಮಾನ್ಯ ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪಿನಂತೆ ಭಾರತ ಚುನಾವಣಾ ಆಯೋಗವು ನಮೂನೆ-26 ರ ತಿದ್ದು ಪಡಿ ಕುರಿತು ನೀಡಿರುವ ನಿರ್ದೇಶನಗಳ ಬಗ್ಗೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕಾವೇರಿ ಅವರು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಕರಡು ಮತ ದಾರರ ಪಟ್ಟಿ ಪ್ರತಿಗಳನ್ನು ಜಿಲ್ಲಾಧಿಕಾರಿ ಯವರು ರಾಜಕೀಯ ಪಕ್ಷಗಳ ಪ್ರತಿ ನಿಧಿಗಳಿಗೆ ವಿತರಿಸಿದರು. ಚುನಾವಣಾ ತಹಶೀಲ್ದಾರ್ ಶಂಕರ್‍ರಾವ್, ರಾಜ ಕೀಯ ಪಕ್ಷಗಳ ಪ್ರತಿನಿಧಿಗಳಾದ ಮಹ ಮ್ಮದ್ ರಫಿ, ಬ್ಯಾಡಮೂಡ್ಲು ಬಸವಣ್ಣ, ಚಂದ್ರಶೇಖರ್ ರಾವ್, ಎಸ್.ಮಹೇಶ್ ಗೌಡ ಇತರರು ಸಭೆಯಲ್ಲಿ ಹಾಜರಿದ್ದರು.

Translate »