ಮನೆ-ಮನೆ ಮೇಲೆ ಬಿಜೆಪಿ ಧ್ವಜ ಕಟ್ಟಲು ಅವಕಾಶ ನೀಡಿ
ಮೈಸೂರು

ಮನೆ-ಮನೆ ಮೇಲೆ ಬಿಜೆಪಿ ಧ್ವಜ ಕಟ್ಟಲು ಅವಕಾಶ ನೀಡಿ

March 14, 2019

ಮೈಸೂರು: -ಮನೆ-ಮನೆ ಮೇಲೆ ಬಿಜೆಪಿ ಧ್ವಜ ಕಟ್ಟಲು ಅವಕಾಶ ನೀಡಿ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಅವರಿಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬಿಜೆಪಿ ಧ್ವಜಗಳನ್ನು ತೆರವುಗೊಳಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳು ನೋಟೀಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಇಂದು ಪಕ್ಷದ ಮುಖಂಡರೊಂದಿಗೆ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಈಗಾಗಲೇ ನ್ಯಾಯಾಲಯದಿಂದ ಬಿಜೆಪಿ ಧ್ವಜ ಕಟ್ಟಲು ಎನ್‍ಓಸಿ ಪಡೆದಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಕೋರ್ಟ್ ಪ್ರತಿಯೊಂದಿಗೆ ಮನವಿ ಪತ್ರ ಸಲ್ಲಿಸಿ ಮನವರಿಕೆ ಮಾಡಿದ ಸಂಸದರು, ಧ್ವಜ ಕಟ್ಟಲು ಅವಕಾಶ ನೀಡುವಂತೆ ಕೋರಿದರು. ಈ ಬಗ್ಗೆ ಭಾರತ ಚುನಾವಣಾ ಆಯೋಗದಿಂದ ಸಲಹೆ-ಮಾರ್ಗದರ್ಶನ ಪಡೆಯುವುದಾಗಿ ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದರು ಎಂದು ಹೇಳಲಾಗಿದೆ. ಬಿಜೆಪಿ ಮುಖಂಡ ರಾಜೇಂದ್ರ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

Translate »