ಬರ ನಿರ್ವಹಣೆಗೆ ತ್ವರಿತ ಕ್ರಮಕೈಗೊಳ್ಳುವಂತೆ ಮನವಿ

ಅರಸೀಕೆರೆ: ತಾಲೂಕಿನಲ್ಲಿ ಬರಗಾಲ ತೀವ್ರತೆ ಹೆಚ್ಚಾಗಿದ್ದು, ಅಂತ ರ್ಜಲ ಕಡಿಮೆಯಾಗುವುದರ ಮೂಲಕ ಕುಡಿಯುವ ನೀರು ಸೇರಿದಂತೆ ಜಾನು ವಾರುಗಳಿಗೆ ಮೇವಿನ ಕೊರತೆ ಎದುರಾ ಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತ ಬರ ನಿರ್ವಹಣೆಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಜಿವಿಟಿ ಬಸವರಾಜು ನೇತೃತ್ವದಲ್ಲಿ ಬಿಜೆಪಿ ಕಾರ್ಯ ಕರ್ತರು ತಹಸೀಲ್ದಾರ್ ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಮಾಜಿ ಶಾಸಕ ಎ.ಎಸ್.ಬಸವರಾಜು ಮತ್ತು ಜಿವಿಟಿ ಬಸವರಾಜ್ ನೇತೃತ್ವದಲ್ಲಿ ತಾಲೂಕು ಕಚೇರಿಗೆ ಗುರುವಾರ ಆಗ ಮಿಸಿದ ಬಿಜೆಪಿ ನಾಯಕರು, ಬರಗಾಲದ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕಾಡುತ್ತಿರುವ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಎದುರಾಗಿರುವ ಮೇವಿನ ಸಮಸ್ಯೆ ವಿವರಿಸಿದರು.

ಬಿಜೆಪಿ ಅಧ್ಯಕ್ಷ ಜಿವಿಟಿ ಬಸವರಾಜ್ ಮಾತನಾಡಿ, ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಾ ಬಂದಿರುವ ತಾಲೂಕಿನಲ್ಲಿ ಕೆರೆ-ಕಟ್ಟೆಗಳು ಬರಿದಾಗಿ ದಶಕಗಳೇ ಕಳೆದಿವೆ. ಮತ್ತೊಂದೆಡೆ ಮಳೆಯ ಕೊರತೆ ಯಿಂದಾಗಿ ಜಾನುವಾರುಗಳಿಗೆ ಮೇವು ದೊರೆಯದಂತಾಗಿದೆ. ರೈತರು ತಾವು ಜೀವನಾಧಾರಕ್ಕಾಗಿ ಸಾಕಿ ಬೆಳೆಸಿದ ಹಸು ಕರುಗಳಿಗೆ ನೀರು ಮತ್ತು ಮೇವು ಪೂರೈ ಸಲು ಸಾಧ್ಯವಾಗದೇ ಪರಿತಪ್ಪಿಸುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಾನು ವಾರುಗಳು ಕಸಾಯಿಖಾನೆ ಪಾಲಾಗುತ್ತಿದೆ. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು ಹಾಗೂ ತಾಲೂಕು ಆಡಳಿತ ಕೈಕಟ್ಟಿ ಕುಳಿತುಕೊಳ್ಳು ವುದು ಸರಿಯಲ್ಲ ಎಂದು ಹೇಳಿದರು.
ಮಾಜಿ ಶಾಸಕ ಎ.ಎಸ್.ಬಸವರಾಜ್ ಮಾತನಾಡಿ, ಕುಡಿಯುವ ನೀರಿಲ್ಲದೇ ಪರದಾಡುತ್ತಿರುವ ಗ್ರಾಮೀಣ ಭಾಗದ ಜನತೆಗೆ ನೀರಿನ ಸೌಲಭ್ಯ ಒದಗಿಸುವ ಹಾಗೂ ಜಾನುವಾರುಗಳಿಗಾಗಿ ತ್ವರಿತ ವಾಗಿ ಗೋ ಶಾಲೆ ಹಾಗೂ ಮೇವು ಬ್ಯಾಂಕ್ ಗಳನ್ನು ತೆರೆಯುಬೇಕಾದ ಅನಿವಾರ್ಯತೆ ಉಂಟಾಗಿದೆ. ತಾಲೂಕು ಆಡಳಿತ ಕ್ರಮ ತೆಗೆದುಕೊಳ್ಳಲು ವಿಳಂಬ ಮಾಡಿದಲ್ಲಿ ತಾಲೂಕಿನ ರೈತರೊಂದಿಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ತಾಲೂಕು ಕಚೇರಿ ಆವರಣದಲ್ಲಿ ಪ್ರತಿ ಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರು ಕಟ್ಟೆ ಸಮಿತಿಯ ಮಾಜಿ ಉಪಾಧ್ಯಕ್ಷ ಶಶಿ ಕುಮಾರ್, ರೈತ ಮೋರ್ಚಾ ಅಧ್ಯಕ್ಷ ಗೀಜಿ ಹಳ್ಳಿ ಸ್ವಾಮಿ, ಎಸ್‍ಸಿ ಮೋರ್ಚಾ ಅಧ್ಯಕ್ಷ ಉಮೇಶ್‍ಬೋವಿ, ನಗರ ಬಿಜೆಪಿ ಉಪಾಧ್ಯಕ್ಷ ಚಂದ್ರುಶೇಖರ್, ಮುಖಂಡರಾದ ಲೋಕೇಶ್, ಬಾಣಾವರ ಮಾಧವಮೂರ್ತಿ, ಜಗದೀಶ್, ಅಶೋಕ್ ಇನ್ನಿತರರು ಇದ್ದರು.

ತಾಲೂಕಿನಲ್ಲಿ ಎದುರಾಗಿರುವ ಬರ ಪರಿಸ್ಥಿತಿಯ ಗಂಭೀರತೆ ಬಗ್ಗೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಕ್ಕೂ ಅರಿವಿದೆ. ಈ ಸಂದಿಗ್ಧ ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ತಾಲೂಕು ಆಡಳಿತ ಈಗಾಗಲೇ ಕಾರ್ಯೋ ನ್ಮುಖವಾಗಿದೆ. ಈ ಸಂಬಂಧ ಸಹಾಯವಾಣಿ ಸಂಖ್ಯೆ ಪ್ರಕಟಿಸಲಾಗಿದೆ. ಅಧಿಕಾರಿಗಳ ತುರ್ತು ಸಭೆ ಕರೆದು ಮಾಹಿತಿ ಸಂಗ್ರಹಿಸುವ ಮೂಲಕ ಪರಿಸ್ಥಿತಿ ನಿಭಾಯಿಸಲು ಕ್ರಮ ಕೈಗೊಳ್ಳಲಾಗುವುದು. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗೂ ಖಾಸಗಿಯವರ ಕೊಳವೆ ಬಾವಿಯಿಂದ ನೀರು ಖರೀದಿಸಿ ಪೂರೈಸಲಾಗುತ್ತಿದ್ದು, ಅದೇ ರೀತಿ ಜಾನುವಾರುಗಳಿಗೆ ಮೇವು ಒದಗಿಸಲು ಹೋಬಳಿವಾರು ಮೇವು ಬ್ಯಾಂಕ್ ತೆರೆಯಲು ಜಾಗ ನಿಗದಿಗೊಳಿಸಲಾಗಿದೆ.
-ಸಂತೋಷ್‍ಕುಮಾರ್, ತಹಸೀಲ್ದಾರ್, ಅರಸೀಕೆರೆ.