ಪಲ್ಸ್ ಪೋಲಿಯೋ ಯಶಸ್ವಿಗೆ ಶ್ರಮಿಸಲು ಮನವಿ
ಕೊಡಗು

ಪಲ್ಸ್ ಪೋಲಿಯೋ ಯಶಸ್ವಿಗೆ ಶ್ರಮಿಸಲು ಮನವಿ

March 6, 2019

ಮಡಿಕೇರಿ: ಮಾರ್ಚ್ 10 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಶೇಕಡವಾರು ಯಶಸ್ಸಿಗೆ ಎಲ್ಲಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ ಸಂಸ್ಥೆ ಗಳು ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್ ಕೋರಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಪಲ್ಸ್ ಪೋಲಿಯೊ ಕಾರ್ಯ ಕ್ರಮ ಸಿದ್ಧತೆ ಕೈಗೊಳ್ಳುವ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಐದು ವರ್ಷದೊಳಗಿನ ಎಲ್ಲಾ ಮಕ್ಕ ಳಿಗೆ ಪಲ್ಸ್ ಪೋಲಿಯೊವನ್ನು ಕಡ್ಡಾಯ ವಾಗಿ ಹಾಕಬೇಕು. ಕೊಡಗು ಜಿಲ್ಲೆಯಿಂದ ಹೊರ ಹೋಗುವ ಹಾಗೂ ಬರುವ ವಲಸೆ ಮಕ್ಕಳು, ಜೊತೆಗೆ ಕಳೆದ ಬಾರಿ ಪಲ್ಸ್ ಪೋಲಿಯೊದಿಂದ ಹೊರಗುಳಿದ ಮಕ್ಕ ಳನ್ನು ಗುರ್ತಿಸಿ ಪಲ್ಸ್ ಪೋಲಿಯೋ ಹನಿ ಹಾಕಬೇಕು. ಹಾಗೆಯೇ ಜಿಲ್ಲೆಯ ಜನ ದಟ್ಟಣೆ ಇರುವ ಪ್ರದೇಶಗಳಲ್ಲಿ ತಂಡ ರಚಿಸಿ ಪಲ್ಸ್ ಪೋಲಿಯೊ ಹನಿ ಹಾಕು ವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಲಹೆ ಮಾಡಿದರು.

ಪೋಲಿಯೊ ಲಸಿಕೆ ಹಾಳಾಗದಂತೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ನಿರಂ ತರವಾಗಿ ವಿದ್ಯುತ್ ಪೂರೈಕೆ ಮಾಡ ಬೇಕು. ಪಲ್ಸ್ ಪೋಲಿಯೊ ಕಾರ್ಯಕ್ರಮ ಜಿಲ್ಲೆಯಲ್ಲಿ ಯಶಸ್ವಿಯಾಗಲು ಸಾರ್ವ ಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಪಾತ್ರ ಮಹತ್ತರ ವಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ ಕೆಲಸ ನಿರ್ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ ನಿರ್ದೇಶನ ನೀಡಿದರು.

ಜಿಲ್ಲೆಯ ವಿವಿಧ ಹಾಡಿಗಳು, ವಲ್ನರ ಬಲ್ ಪ್ರದೇಶ, ಲೈನ್‍ಮನೆಗಳು ಹಾಗೂ ಜನದಟ್ಟಣೆ ಪ್ರದೇಶಗಳಿಗೆ ತೆರಳಿ 5 ವರ್ಷ ದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಹನಿ ಹಾಕಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಪಲ್ಸ್ ಪೋಲಿಯೊ ಕಾರ್ಯ ಕ್ರಮದ ಬಗ್ಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಒಟ್ಟು 5,66,437 ಜನಸಂಖ್ಯೆ ಇದ್ದು, ಇವ ರಲ್ಲಿ 57,424 ನಗರ/ಪಟ್ಟಣ ಪ್ರದೇಶದಲ್ಲಿ ಮತ್ತು 5,09,013 ಗ್ರಾಮೀಣ ಪ್ರದೇಶದಲ್ಲಿ ಜನಸಂಖ್ಯೆ ಇದ್ದಾರೆ. ಇವರಲ್ಲಿ 5 ವರ್ಷ ದೊಳಗಿನ 39,015 ಮಕ್ಕಳು ಜಿಲ್ಲೆಯಲ್ಲಿದ್ದು, ಇವರಲ್ಲಿ 4,602 ನಗರ ಮತ್ತು 34,413 ಗ್ರಾಮೀಣ ಪ್ರದೇಶದ ಮಕ್ಕಳಿದ್ದಾರೆ. ಹಾಗೆಯೇ ಜಿಲ್ಲೆಯಲ್ಲಿ 1,59,443 ವಲಸಿಗ ಜನಸಂಖ್ಯೆ ಇದ್ದು, ಇವರಲ್ಲಿ 12,859 ಐದು ವರ್ಷದೊ ಳಗಿನ ಮಕ್ಕಳು ಇದ್ದಾರೆ, ಒಟ್ಟಾರೆ ಜಿಲ್ಲೆ ಯಲ್ಲಿ 1,33,356 ಕುಟುಂಬಗಳಿವೆ ಎಂದು ಅವರು ಮಾಹಿತಿ ನೀಡಿದರು.

ಪಲ್ಸ್ ಪೊಲಿಯೊ ಕಾರ್ಯಕ್ರಮಕ್ಕೆ ಜಿಲ್ಲೆ ಯಾದ್ಯಂತ ಒಟ್ಟು 465 ಬೂತ್ ಗಳನ್ನು ತೆರೆಯಲಾಗಿದೆ. ಅಲ್ಲದೆ 20 ಟ್ರಾನ್ಸಿಸ್ಟ್ ತಂಡ ಗಳು, 6 ಸಂಚಾರಿ ಲಸಿಕಾ ತಂಡಗಳನ್ನು ವ್ಯವಸ್ಥೆ ಮಾಡಲಾಗಿದೆ. 1,950 ಮಂದಿ ಲಸಿಕೆ ಹಾಕುವವರು, 87 ಮಂದಿ ಮೇಲ್ವಿ ಚಾರಕರು, 966 ಮನೆ ಮನೆಗೆ ಭೇಟಿ ನೀಡುವ ತಂಡವನ್ನು ರಚಿಸಲಾಗಿದೆ ಎಂದು ಡಾ.ಆನಂದ್ ಮಾಹಿತಿ ನೀಡಿದರು.
ಪಲ್ಸ್ ಪೋಲಿಯೋವನ್ನು ಕಡ್ಡಾಯವಾಗಿ 5 ವರ್ಷದೊಳಗಿನ ಮಕ್ಕಳಿಗೆ ಹಾಕಿಸಬೇ ಕಿದೆ. ಪೊಲಿಯೋ ರೋಗವು ರಾಷ್ಟ್ರದಲ್ಲಿ ನಿರ್ಮೂಲನೆಯಾಗಿದ್ದರೂ ಸಹ ಪಕ್ಕದ ದೇಶಗಳಲ್ಲಿ ಇನ್ನೂ ಇರುವುದರಿಂದ, ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕಿದೆ ಸುಧೀರ್ ನಾಯಕ್ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಗಳಾದ ಡಾ.ಎ.ಸಿ.ಶಿವಕುಮಾರ್, ತಾಲೂಕು ವೈದ್ಯಾಧಿಕಾರಿಗಳಾದ ಯತಿ ರಾಜು, ಶ್ರೀನಿವಾಸ, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಾರ್ಮಿಕ ಇಲಾಖೆ ಅಧಿಕಾರಿಗಳು ಇದ್ದರು.

Translate »