ಅಧಿಕ ಅಂಕ ಗಳಿಸಿದ ಮೀಸಲಾತಿ ಅಭ್ಯರ್ಥಿ ಸಾಮಾನ್ಯ ವರ್ಗದಡಿ ಪರಿಗಣನೆ: ಸುಪ್ರೀಂ
ಮೈಸೂರು

ಅಧಿಕ ಅಂಕ ಗಳಿಸಿದ ಮೀಸಲಾತಿ ಅಭ್ಯರ್ಥಿ ಸಾಮಾನ್ಯ ವರ್ಗದಡಿ ಪರಿಗಣನೆ: ಸುಪ್ರೀಂ

April 29, 2022

ನವದೆಹಲಿ: ಸಾಮಾನ್ಯ ವರ್ಗದಲ್ಲಿ ಆಯ್ಕೆಯಾದ ಕೊನೆಯ ಅಭ್ಯರ್ಥಿ ಪಡೆದ ದ್ದಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ ಮೀಸಲಾತಿ ಇರುವ ಅಭ್ಯರ್ಥಿಯನ್ನು `ಸಾಮಾನ್ಯ ವರ್ಗ’ದಡಿ ಪರಿಗಣ ಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಮೀಸಲಾತಿ ಇರುವ ವರ್ಗಗಳ ಅಭ್ಯರ್ಥಿ ಗಳು ಅರ್ಹತೆ ಹಾಗೂ ತಾವು ಪಡೆದ ಸ್ಥಾನದ ಕಾರಣಗಳಿಂದಾಗಿ ಮೀಸಲಾತಿ ಇಲ್ಲದ ಹುದ್ದೆಗಳಿಗೆ ಆಯ್ಕೆಯಾಗುವಂತಿ ದ್ದರೆ, ಆ ಅಭ್ಯರ್ಥಿಗಳು ಸಾಮಾನ್ಯ ವರ್ಗ ದಲ್ಲಿನ ಹುದ್ದೆಗಳನ್ನೇ ಆಯ್ಕೆ ಮಾಡಿಕೊಳ್ಳ ಬಹುದು ಎಂದು ನ್ಯಾಯಮೂರ್ತಿಗಳಾದ ಎಂ.ಆರ್.ಶಾ
ಹಾಗೂ ಬಿ.ವಿ.ನಾಗರತ್ನ ಒಳಗೊಂಡ ನ್ಯಾಯಪೀಠ ತಿಳಿಸಿದೆ. ೧೯೯೨ರ ಇಂದಿರಾ ಸಾಹ್ನಿ ಪ್ರಕರಣದಿಂದ ಹಿಡಿದು ಸೌರವ್ ಯಾದವ್ (೨೦೨೧) ಹಾಗೂ ಸಾಧನಾಸಿಂಗ್ ಡಾಂಗಿ ಪ್ರಕರಣದವರೆಗೆ (೨೦೨೨) ಪಾಲಿಸಲಾದ ನಿಯಮಗಳನ್ನೇ ನ್ಯಾಯಪೀಠವು ಈ ಪ್ರಕರಣಕ್ಕೂ ಅನ್ವಯಿಸಿತು. ರಾಜಸ್ಥಾನದಲ್ಲಿ ಬಿಎಸ್‌ಎನ್‌ಎಲ್‌ನಲ್ಲಿ ತಾಂತ್ರಿಕ ಸಹಾಯಕ ಹುದ್ದೆಗೆ ನಡೆದ ನೇಮಕಾತಿಯಲ್ಲಿ ಮೀಸಲಾತಿಯ ಇಬ್ಬರು ಅಭ್ಯರ್ಥಿಗಳು ಸಾಮಾನ್ಯ ವರ್ಗದವರ ಪೈಕಿ ಕೊನೆಯ ಅಭ್ಯರ್ಥಿಗಿಂತ ಹೆಚ್ಚು ಅಂಕ ಗಳಿಸಿದ್ದರೂ ಅವರನ್ನು ಒಬಿಸಿ ವರ್ಗದಡಿ ಪರಿಗಣ ಸಲಾಗಿತ್ತು. ಈ ವಿಷಯ ಕೋರ್ಟ್ ಮೆಟ್ಟಿಲೇ ರಿತ್ತು. ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ಒಬಿಸಿ ಅಭ್ಯರ್ಥಿಯನ್ನು ತಾಂತ್ರಿಕ ಸಹಾಯಕ ಹುದ್ದೆಗೆ ಪರಿಗಣ ಸುವಂತೆ ನಿರ್ದೇಶನ ನೀಡಿತ್ತು. ಹೈಕೋರ್ಟ್ನ ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಬಿಎಸ್‌ಎನ್‌ಎಲ್ ಅರ್ಜಿ ಸಲ್ಲಿಸಿತ್ತು. ನ್ಯಾಯಪೀಠವು ಬಿಎಸ್‌ಎನ್‌ಎಲ್‌ನ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

Translate »