ಅಂತರ್ಜಲ ವೃದ್ಧಿಗೆ ಕೆರೆಗಳ ಜೀರ್ಣೋದ್ಧಾರ
ಮೈಸೂರು

ಅಂತರ್ಜಲ ವೃದ್ಧಿಗೆ ಕೆರೆಗಳ ಜೀರ್ಣೋದ್ಧಾರ

January 11, 2019

ಬೆಂಗಳೂರು: ಅಂತರ್ಜಲ ವೃದ್ಧಿಗೆ ಖಾಸಗಿ ಸಹಭಾಗಿತ್ವದಲ್ಲಿ ಕೆರೆಗಳ ಜೀರ್ಣೋದ್ಧಾರ ಯೋಜನೆ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕೆರೆಗಳ ಒತ್ತುವರಿ ತೆರವುಗೊಳಿಸಿ ಅವು ಗಳ ಜೀರ್ಣೋದ್ಧಾರದ ಜೊತೆಗೆ ನಿರ್ವ ಹಣಾ ಹೊಣೆಯನ್ನೂ ಖಾಸಗಿಯವರಿಗೆ ನೀಡಲಾಗುವುದು. ಉದ್ಯಮಿಗಳು ಹಾಗೂ ಸಂಘ-ಸಂಸ್ಥೆಗಳಿಗೆ ಈ ಜವಾಬ್ದಾರಿ ವಹಿ ಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ ಗ್ರಾಮೀಣ ಭಾಗದ ಕೆರೆಗಳ ಅಭಿವೃದ್ಧಿಗೆ ವಿಶ್ವ ಬ್ಯಾಂಕ್ ನೆರವು ಪಡೆಯುವುದು, ಜೊತೆ ಜೊತೆ ಯಲ್ಲೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಪನ್ಮೂಲ ಬಳಸಿ ನದಿ ಪಾತ್ರದಿಂದ ಕೆರೆಗಳನ್ನು ತುಂಬಿಸುವುದು. ಇಂತಹ ನಿರ್ಧಾರ ದಿಂದ ಸತತ ಬರಗಾಲಕ್ಕೆ ತುತ್ತಾಗುತ್ತಿರುವ ಪ್ರದೇಶಗಳಲ್ಲಿ ಕನಿಷ್ಠ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮಾಡುವುದು ಮತ್ತು ಗ್ರಾಮೀಣ ಭಾಗಗಳಿಗೆ ನದಿ ಪಾತ್ರ ದಿಂದ ಕುಡಿಯುವ ನೀರು ಕಲ್ಪಿಸುವುದಾಗಿದೆ. ಕೆರೆಗಳ ಸ್ಥಿತಿಗತಿ ಹಾಗೂ ಸಂರಕ್ಷಣೆಗೆ ವಹಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಮುಖ್ಯಮಂತ್ರಿ ವಿವರವಾಗಿ ಚರ್ಚಿಸಿ, ವಿಸ್ತøತ ಯೋಜನಾ ವರದಿ ಸಿದ್ಧಪಡಿಸುವಂತೆ ಸೂಚಿಸಿದರು.

ಖಾಸಗಿ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಯೋಜನೆಗಳ ನೆರವಿನೊಂದಿಗೆ ಹಂತ ಹಂತವಾಗಿ ನಿಗದಿತ ಕಾಲಮಿತಿಯಲ್ಲಿ ಯೋಜನೆ ಜಾರಿಗೊಳಿಸುವಂತೆ ಸೂಚಿಸಿದರು. ನಗರ-ಪಟ್ಟಣ ಪ್ರದೇಶ ಕೆರೆಗಳ ನೀರು ಕಲುಷಿತವಾಗಿರುವ ಕುರಿತು, ತಜ್ಞರ ಅಭಿಪ್ರಾಯಗಳನ್ನು ಗಂಭೀರವಾಗಿ ಪರಿಗಣಿಸಿ, ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ಸಲಹೆ ಮಾಡಿದರು. ಕೆರೆಗಳ ಜಲಾನಯನ ಪ್ರದೇಶಗಳ ಅಭಿವೃದ್ಧಿಗೂ ಆದ್ಯತೆ ನೀಡುವಂತೆ ತಜ್ಞರು ಮಾಡಿದ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳು, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ಕೆರೆಗಳಿಗೆ ನೀರು ಸರಾಗವಾಗಿ ಹರಿದುಬರುವಂತೆ ಮಾಡಲು ಸೂಚಿಸಿದರು.

ಜೊತೆಗೆ ರಾಜಕಾಲುವೆ ಮೇಲೆ ಮನೆ ಕಟ್ಟಿಕೊಂಡಿರುವ ಬಡವರಿಗೆ ಪುನರ್ವಸತಿ ಕಲ್ಪಿಸಲು ಪರ್ಯಾಯ ಯೋಜನೆ ರೂಪಿಸಿ, ಪ್ರಸ್ತಾವನೆ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದರು.

ಮಳೆ ನೀರು ಚರಂಡಿಗೆ ಕೊಳಚೆ ನೀರು ಸೇರದಂತೆ ಎಚ್ಚರ ವಹಿಸಲು ಹಾಗೂ ಒಳಚರಂಡಿ ನೀರಿನ ಸಂಸ್ಕರಣೆಗೆ ಅಗತ್ಯ ಪ್ರಮಾಣದಲ್ಲಿ ಎಸ್‍ಟಿಪಿಗಳನ್ನು ನಿರ್ಮಾಣ ಮಾಡುವ ಬಗ್ಗೆ ಕ್ರಮ ವಹಿಸುವಂತೆ ಸೂಚಿಸಿದರು. ಕೆರೆ ಅಭಿವೃದ್ಧಿಗೆ ಶಾಶ್ವತ ಪರಿಹಾರಗಳನ್ನು ಕಂಡುಕೊಳ್ಳುವುದು ಅತೀ ಅಗತ್ಯವಾಗಿದೆ. ಖಾಸಗಿ ಸಂಸ್ಥೆಗಳು ಕೆರೆಗಳ ಸಂರಕ್ಷಣೆ, ಅಭಿವೃದ್ಧಿ ಪಡಿಸಲು ಉತ್ಸಾಹ ತೋರಿಸಿ ಮುಂದೆ ಬಂದಾಗ ಅಧಿಕಾರಿಗಳು ಅವರಿಗೆ ಉತ್ತೇಜನ ನೀಡಿ ಎಂದಿದ್ದಾರೆ. ತ್ವರಿತವಾಗಿ ಅಗತ್ಯ ಅನುಮೋದನೆ ಗಳನ್ನು ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಂತೆಯೇ ಅವರು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಒಪ್ಪಂದದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿ, ಯೋಜನೆ ಅನುಷ್ಠಾನದಲ್ಲಿ ಲೋಪಗಳಾಗದಂತೆ ಎಚ್ಚರ ವಹಿಸುವಂತೆ ಸೂಚಿಸಿದರು. ಉತ್ತರ ಕರ್ನಾಟಕದ ಕೆರೆಗಳ ಹೂಳು ತೆಗೆಯಲು ಸೂಕ್ತ ಕಾರ್ಯಕ್ರಮ ರೂಪಿಸಿ ಮಳೆ ನೀರು ಸಂಗ್ರಹವಾಗಲು ಅನುವು ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Translate »