ವರಿಷ್ಠರಿಂದ ಬಿಎಸ್‍ವೈಗೆ ಗೌರವ, ಗುಣಗಾನ
ಮೈಸೂರು

ವರಿಷ್ಠರಿಂದ ಬಿಎಸ್‍ವೈಗೆ ಗೌರವ, ಗುಣಗಾನ

December 12, 2019

ನವದೆಹಲಿ, ಡಿ.11- ಕರ್ನಾಟಕದಲ್ಲಿನ ಉಪ ಚುನಾ ವಣೆಯಲ್ಲಿ ಅಮೋಘ ಜಯ ಸಾಧಿಸಿ ದಕ್ಷಿಣ ಭಾರತದಲ್ಲಿ ಭಾರತೀಯ ಜನತಾ ಪಕ್ಷದ ನೆಲೆಯನ್ನು ಭದ್ರಪಡಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಅವರು ವರಿಷ್ಠರ ಮಟ್ಟದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಕರ್ನಾಟಕದಲ್ಲಿನ ಬಿಜೆಪಿ ಮತ್ತು ಬಿಎಸ್‍ವೈ ಚುನಾವಣಾ ಸಾಧನೆಯನ್ನು ಯಡಿಯೂರಪ್ಪ ಅವರ ಅನುಪಸ್ಥಿತಿಯಲ್ಲೇ ಹಾಡಿ ಹೊಗಳಿದ್ದಾರೆ.

ನವದೆಹಲಿಯಲ್ಲಿ ಬುಧವಾರ ನಡೆದ ಭಾರತೀಯ ಜನತಾ ಪಕ್ಷದ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕರ್ನಾಟಕದ ಉಪ ಚುನಾವಣೆ ವಿಚಾರ ಪ್ರಸ್ತಾಪಿಸಿದರು. ಚುನಾವಣೆ ನಡೆದ 15 ಕ್ಷೇತ್ರಗಳಲ್ಲಿ 12ರಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯಥಿಗಳು ಜಯ ಸಾಧಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.

ಈ ಗೆಲುವಿಗೆ, ಆ ಮೂಲಕ ಕರ್ನಾಟಕದಲ್ಲಿ ಸ್ಥಿರ ಸರ್ಕಾರ ಸಾಧ್ಯವಾಗಿಸಿದ್ದಕ್ಕಾಗಿ ಸಿಎಂ ಯಡಿಯೂರಪ್ಪ ಅವರನ್ನು ಪ್ರಶಂಸಿಸಿದರು. ಮಾತಿನ ನಡುವೆಯೇ, ಸಭೆಯಲ್ಲಿದ್ದ ಸಂಸದರು ಬಿಎಸ್‍ವೈ ಅವರ ಈ ಸಾಧನೆಗೆ ಎದ್ದು ನಿಂತು ಅಭಿನಂದನೆ ಸಲ್ಲಿಸಬೇಕೆಂದು ಹೇಳಿದರು. ಅದರ ಮರು ಕ್ಷಣವೇ ಸಭೆಯಲ್ಲಿದ್ದ ವಿವಿಧ ರಾಜ್ಯಗಳ ಬಿಜೆಪಿ ಸಂಸದ ರೆಲ್ಲರೂ ಎದ್ದು ನಿಂತು ಚಪ್ಪಾಳೆ ಹೊಡೆದು ಬಿಎಸ್‍ವೈ ಅವರಿಗೆ ಅಭಿನಂದನೆ ಸಲ್ಲಿಸಿದರು ಎಂದು ಸಂಸದೀಯ ವ್ಯವಹಾರಗಳ ಸಚಿವರೂ ಆದ ಕರ್ನಾಟಕದ ಸಂಸದ ಪ್ರಹ್ಲಾದ್ ಜೋಷಿ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪಾಕ್ ವಿರುದ್ಧ ಪ್ರಧಾನಿ ಕಿಡಿ: ಪೌರತ್ವ ತಿದ್ದುಪಡಿ ಮಸೂದೆಯು ಇತಿಹಾಸದಲ್ಲಿ ಬಂಗಾರದ ಅಕ್ಷರಗಳಲ್ಲಿ ದಾಖಲಾಗಲಿದೆ ಎಂದು ಕೊಂಡಾಡಿರುವ ಪ್ರಧಾನಿ ಮೋದಿ, ಆದರೆ, ಈ ವಿಚಾರದಲ್ಲಿ ವಿರೋಧಪಕ್ಷಗಳು ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿವೆ ಎಂದು ಕಿಡಿಕಾರಿದ್ದಾರೆ. ಅನುಚ್ಛೇಧ 370 ರದ್ದುಗೊಳಿಸಲು ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರದಂತೆಯೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲು ನಿರ್ಧರಿಸಿದ್ದೇವೆ. ಇದರಿಂದ ನೆರೆಯ ದೇಶಗಳಿಂದ ಭಾರತಕ್ಕೆ ವಲಸಿಗರಾಗಿ ಬರಲಿ ರುವ ನೊಂದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಕಾಯಂ ಪೌರತ್ವ ದೊರೆಯಲಿದೆ ಎಂದರು.

ಬಜೆಟ್: ಮುಂಬರುವ ಕೇಂದ್ರ ಬಜೆಟ್ ಮಂಡ ನೆಯ ಹಿನ್ನೆಲೆಯಲ್ಲಿ ರೈತರು, ಬಡವರ ಹಾಗೂ ಕೈಗಾ ರಿಕೋದ್ಯಮಿಗಳು ಸೇರಿದಂತೆ ಸಮಾಜದ ಎಲ್ಲಾ ವರ್ಗ ದವರ ಮೌಲ್ಯಯುತ ಸಲಹೆಗಳನ್ನು ಸಂಗ್ರಹಿಸಿ ಕೇಂದ್ರ ಹಣಕಾಸು ಸಚಿವರ ಜತೆ ಹಂಚಿಕೊಳ್ಳುವಂತೆ ಸಂಸದ ರಲ್ಲಿ ಪ್ರಧಾನಿ ಮೋದಿ ಮನವಿ ಮಾಡಿದರು.

Translate »